AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಶಿವಸೇನೆ ಹೈಡ್ರಾಮಾ; ಶಿಂಧೆ ಬಣ ಸೇರಲು ಸಜ್ಜಾದ 6 ಬಂಡಾಯ ಸಂಸದರು

ಶಿವಸೇನೆ ಠಾಕ್ರೆ ಬಣಕ್ಕೆ ದೊಡ್ಡ ಹಿನ್ನಡೆಯಾಗಿದೆ, ಶಿವಸೇನೆ ಠಾಕ್ರೆ ಬಣದಿಂದ 6 ಸಂಸದರು ಬಂಡಾಯವೆದ್ದಿದ್ದಾರೆ. ಈ ಎಲ್ಲಾ ಸಂಸದರು ಏಕನಾಥ್ ಶಿಂಧೆ ಅವರ ನಿವಾಸವನ್ನು ತಲುಪಿದ್ದಾರೆ. ಅವರು ಅಧಿಕೃತವಾಗಿ ಶಿವಸೇನೆ ಶಿಂಧೆ ಬಣವನ್ನು ಸೇರಲಿದ್ದಾರೆ. ಈ ಬಗ್ಗೆ ಅವರೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ನಡೆಯುತ್ತಿರುವಾಗ, ಉದ್ಧವ್ ಠಾಕ್ರೆ ಇಂದು ಶಾಸಕರ ಸಭೆಯನ್ನು ಕರೆದಿದ್ದರು. ಆದರೆ ಈ ಸಭೆಗೆ ಮೂವರು ಶಾಸಕರು ಗೈರುಹಾಜರಾಗಿದ್ದರಿಂದ, ರಾಜಕೀಯ ವಲಯಗಳಲ್ಲಿ ಚರ್ಚೆಗಳು ಭುಗಿಲೆದ್ದಿವೆ.

ಮಹಾರಾಷ್ಟ್ರದಲ್ಲಿ ಶಿವಸೇನೆ ಹೈಡ್ರಾಮಾ; ಶಿಂಧೆ ಬಣ ಸೇರಲು ಸಜ್ಜಾದ 6 ಬಂಡಾಯ ಸಂಸದರು
Eknath Shinde
ಸುಷ್ಮಾ ಚಕ್ರೆ
|

Updated on: Jun 22, 2026 | 4:25 PM

Share

ಮುಂಬೈ, ಜೂನ್ 22: ಮಹಾರಾಷ್ಟ್ರದ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ರಾಜಕೀಯ ಬೆಳವಣಿಗೆಗಳು ಕಂಡುಬಂದಿವೆ. ಉದ್ಧವ್ ಠಾಕ್ರೆ (Uddhav Thackeray) ನೇತೃತ್ವದ ಶಿವಸೇನೆ (UBT) ಬಣದ ಒಟ್ಟು 9 ಲೋಕಸಭಾ ಸಂಸದರ ಪೈಕಿ 6 ಸಂಸದರು ಬಂಡಾಯವೆದ್ದಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ನೇತೃತ್ವದ ಶಿವಸೇನಾ ಬಣವನ್ನು ಅಧಿಕೃತವಾಗಿ ಸೇರಲು ಮುಂಬೈ ತಲುಪಿದ್ದಾರೆ. ಈ ಬೆಳವಣಿಗೆಯಿಂದಾಗಿ ಉದ್ಧವ್ ಠಾಕ್ರೆ ಬಣಕ್ಕೆ ಲೋಕಸಭೆಯಲ್ಲೂ ಭಾರಿ ಹಿನ್ನಡೆಯಾಗಿದೆ.

ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನದ ಮೊದಲ ದಿನವೇ ಈ ಹೈಡ್ರಾಮಾ ನಡೆದಿದೆ. ವಿಧಾನಸಭೆ ಆವರಣದಲ್ಲಿ ಕಾಣಿಸಿಕೊಂಡ ಏಕನಾಥ್ ಶಿಂಧೆ, ತಾವೇ ರೂಪಿಸಿದ್ದ “ಆಪರೇಷನ್ ಟೈಗರ್” ಸಂಪೂರ್ಣ ಯಶಸ್ವಿಯಾಗಿದೆ ಎಂದು ಘೋಷಿಸಿದ್ದಾರೆ. ಮುಂಬೈನ ಮಲಬಾರ್ ಹಿಲ್ಸ್‌ನಲ್ಲಿರುವ ಶಿಂಧೆ ಅವರ ‘ನಂದನವನ’ ಬಂಗಲೆಗೆ ಈ 6 ಸಂಸದರು ಭೇಟಿ ನೀಡಿದ್ದಾರೆ.

ಉದ್ಧವ್ ಠಾಕ್ರೆ ಬಣದ ಒಟ್ಟು 9 ಸಂಸದರಲ್ಲಿ 6 ಸಂಸದರು (ಅಂದರೆ ಮೂರನೇ ಎರಡರಷ್ಟು ಬಹುಮತ) ಒಟ್ಟಿಗೆ ಶಿಂಧೆ ಬಣ ಸೇರುತ್ತಿರುವುದರಿಂದ, ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಅನರ್ಹಗೊಳಿಸುವ ಸಾಧ್ಯತೆ ತೀರಾ ಕಡಿಮೆ ಇದೆ. ಇದು ಉದ್ಧವ್ ಬಣಕ್ಕೆ ಕಾನೂನಾತ್ಮಕವಾಗಿಯೂ ಭಾರಿ ಹಿನ್ನಡೆಯನ್ನುಂಟು ಮಾಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಜೊತೆ ವಿಲೀನಕ್ಕೆ ಉದ್ಧವ್ ಠಾಕ್ರೆ ಪ್ಲಾನ್; ಶಿವಸೇನೆಯ 6 ಬಂಡಾಯ ಸಂಸದರಿಂದ ಸ್ಪೀಕರ್‌ಗೆ ದೂರು

ಉದ್ಧವ್ ಠಾಕ್ರೆ ಅವರ ಶಿವಸೇನೆ ತೊರೆದು ಏಕನಾಥ್ ಶಿಂಧೆ ಜೊತೆ ಕೈಜೋಡಿಸಲು ಸಜ್ಜಾಗಿರುವ 6 ಸಂಸದರ ಪಟ್ಟಿ ಇಲ್ಲಿದೆ…

  • ಸಂಜಯ್ ದಿನಾ ಪಾಟೀಲ್ (ಮುಂಬೈ)
  • ಸಂಜಯ್ ಜಾಧವ್ (ಪರಭಣಿ)
  • ಸಂಜಯ್ ದೇಶ್‌ಮುಖ್ (ಯವತ್ಮಾಲ್-ವಾಶಿಮ್)
  • ಓಂಪ್ರಕಾಶ್ ನಿಂಬಾಳ್ಕರ್ (ಧಾರಾಶಿವ್)
  • ಭೌಸಾಹೇಬ್ ವಾಕಚೌರೆ (ಶಿರಡಿ)
  • ನಾಗೇಶ್ ಪಾಟೀಲ್ ಅಷ್ಟೀಕರ್ (ಹಿಂಗೋಲಿ)

ಈ ಪೈಕಿ ನಾಲ್ವರು ಸಂಸದರು ಈಗಾಗಲೇ ಮುಂಬೈ ವಿಮಾನ ನಿಲ್ದಾಣಕ್ಕೆ ತಲುಪಿದ್ದು, ಉಳಿದ ಇಬ್ಬರು ಕೂಡ ಅವರನ್ನು ಸೇರಿಕೊಂಡಿದ್ದಾರೆ. ಬಂಡಾಯ ಸಂಸದರಾದ ನಾಗೇಶ್ ಪಾಟೀಲ್ ಮತ್ತು ಓಂಪ್ರಕಾಶ್ ರಾಜೆ ನಿಂಬಾಳ್ಕರ್ ತಾವು ಬಣ ಬದಲಾಯಿಸುತ್ತಿರುವುದನ್ನು ಈಗಾಗಲೇ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಬೇರೆ ಪಕ್ಷಕ್ಕೆ ಹೋಗುವುದಿದ್ದರೆ ಮೊದಲು ರಾಜೀನಾಮೆ ಕೊಡಿ; ಶಿವಸೇನೆ ಸಂಸದರಿಗೆ ಸಂಜಯ್ ರಾವತ್ ಸವಾಲು

ಈ ಬಂಡಾಯದ ಬೆನ್ನಲ್ಲೇ ಶಿವಸೇನಾ (UBT) ನಾಯಕ ಆದಿತ್ಯ ಠಾಕ್ರೆ ಸಂಸದರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಈ ಸಂಸದರು ಮಹಾ ವಿಕಾಸ್ ಅಘಾಡಿ (MVA) ಮತ್ತು ಇಂಡಿಯ (INDIA) ಒಕ್ಕೂಟದ ಬಲದ ಮೇಲೆ, ಕಾಂಗ್ರೆಸ್ ಹಾಗೂ ಎನ್‌ಸಿಪಿ ನಾಯಕರ ಪ್ರಚಾರದ ನೆರವಿನಿಂದ ಗೆದ್ದಿದ್ದಾರೆ. ಈಗ ಪಕ್ಷಕ್ಕೆ ದ್ರೋಹ ಬಗೆಯುವ ಮೂಲಕ ತಮ್ಮ ಸ್ವಂತ ರಾಜಕೀಯ ವಿಶ್ವಾಸಾರ್ಹತೆಯನ್ನು ಹಾಳುಮಾಡಿಕೊಂಡಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಇದರ ನಡುವೆ, ತಮ್ಮ ಬಣದ ಮತ್ತಷ್ಟು ಶಾಸಕರು ಅಥವಾ ನಾಯಕರು ಕೈಬಿಟ್ಟು ಹೋಗದಂತೆ ತಡೆಯಲು ಉದ್ಧವ್ ಠಾಕ್ರೆ ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ‘ಶಿವಾಲಯ’ದಲ್ಲಿ ಪಕ್ಷದ ಎಲ್ಲಾ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ತುರ್ತು ಸಭೆಯನ್ನು ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?