ಮಹಾರಾಷ್ಟ್ರ: ವ್ಯಕ್ತಿಯನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿರಿಸಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಕಾರಿನಲ್ಲಿ ವ್ಯಕ್ತಿಯ ಸಜೀವದಹನವಾಗಿದೆ. ಗೋಣಿ ಚೀಲದಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಗೋಣಿಚೀಲದಲ್ಲಿ ವ್ಯಕ್ತಿಯನ್ನು ತುಂಬಿ ಹಗ್ಗದಿಂದ ಕಟ್ಟಲಾಗಿತ್ತು. ಔಸಾ ತಾಂಡಾ ನಿವಾಸಿ ಗಣೇಶ್ ಚವಾಣ್ ಮೃತ ವ್ಯಕ್ತಿ. ಅವರನ್ನು ಚೀಲದೊಳಗೆ ತುಂಬಿ, ಕಾರಿನಲ್ಲಿರಿಸಿ ಬಳಿಕ ಅಪರಿಚಿತ ದುಷ್ಕರ್ಮಿಗಳು ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚವಾಣ್ ಐಸಿಐಸಿಐ ಬ್ಯಾಂಕಿನಲ್ಲಿ ರಿಕವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು.

ಮಹಾರಾಷ್ಟ್ರ: ವ್ಯಕ್ತಿಯನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿರಿಸಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಕಾರು

Updated on: Dec 15, 2025 | 12:26 PM

ಪುಣೆ, ಡಿಸೆಂಬರ್ 15: ವ್ಯಕ್ತಿಯನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿರಿಸಿ, ಬೆಂಕಿ(Fire) ಹಚ್ಚಿರುವ ಆಘಾತಕಾರಿ ಘಟನೆ  ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಗೋಣಿಚೀಲದಲ್ಲಿ ವ್ಯಕ್ತಿಯನ್ನು ತುಂಬಿ ಹಗ್ಗದಿಂದ ಕಟ್ಟಲಾಗಿತ್ತು. ಔಸಾ ತಾಂಡಾ ನಿವಾಸಿ ಗಣೇಶ್ ಚವಾಣ್ ಮೃತ ವ್ಯಕ್ತಿ. ಅವರನ್ನು ಚೀಲದೊಳಗೆ ತುಂಬಿ, ಕಾರಿನಲ್ಲಿರಿಸಿ ಬಳಿಕ ಅಪರಿಚಿತ ದುಷ್ಕರ್ಮಿಗಳು ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚವಾಣ್ ಐಸಿಐಸಿಐ ಬ್ಯಾಂಕಿನಲ್ಲಿ ರಿಕವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು.

ಪೊಲೀಸರು ಅಪರಾಧ ಸ್ಥಳದಲ್ಲಿ ಪ್ರಾಥಮಿಕ ತನಿಖೆ ನಡೆಸಿ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಕೊಲೆಗೆ ಕಾರಣವೇನೆಂದು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯ ಆಪ್ತರು ಭಾನುವಾರ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದರು, ಆದರೆ ಅವರ ಫೋನ್ ಸ್ವಿಚ್ಡ್​ ಆಫ್ ಆಗಿತ್ತು. ಅವರನ್ನು ಹುಡುಕುತ್ತಿದ್ದಾಗ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತ್ತು.

ಪೊಲೀಸ್ ಅಧಿಕಾರಿಗಳು ಮಾತನಾಡಿ, ನಮಗೆ ಮಧ್ಯರಾತ್ರಿ 12.30 ರ ಸುಮಾರಿಗೆ  112 ಗೆ ಕರೆ ಬಂದಿತ್ತು. ವನವಾಡ ರಸ್ತೆಯಲ್ಲಿ ಕಾರು ಹೊತ್ತಿ ಉರಿಯುತ್ತಿದೆ ಎಂದು ಕರೆ ಮಾಡಿದವರು ಮಾಹಿತಿ ನೀಡಿದ್ದರು. ನಮ್ಮ ಸಿಬ್ಬಂದಿ ಮತ್ತು ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದರು.

ಮತ್ತಷ್ಟು ಓದಿ: ಪುಣೆಯ 2 ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ

ನಂತರ ಅವರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು, ಅವರು ಬೆಂಕಿಯನ್ನು ನಂದಿಸಿದ್ದರು. ಕಾರಿನೊಳಗೆ ಸುಟ್ಟ ದೇಹ ಪತ್ತೆಯಾಗಿದೆ. ದೇಹ ಸಂಪೂರ್ಣವಾಗಿ ಸುಟ್ಟು ಹೋಗಿತ್ತು. ನಾವು ವೈದ್ಯಕೀಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದ್ದೇವೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Published On - 11:15 am, Mon, 15 December 25