ಮಹಾರಾಷ್ಟ್ರ: ಕೌಶಲ್ಯ ವಿಶ್ವವಿದ್ಯಾಲಯಕ್ಕೆ ರತನ್ ಟಾಟಾ ಹೆಸರಿಟ್ಟ ಸರ್ಕಾರ

ಮಹಾರಾಷ್ಟ್ರ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧರಿಸಿದೆ. ಮಹಾರಾಷ್ಟ್ರ ರಾಜ್ಯ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಪದ್ಮ ವಿಭೂಷಣ ರತನ್ ಟಾಟಾ  ಕೌಶಲ್ಯ ವಿಶ್ವವಿದ್ಯಾಲಯ ಎಂದು ಬದಲಾಯಿಸಲಾಗುತ್ತಿದೆ. ಕೌಶಲ್ಯಾಭಿವೃದ್ಧಿ ಸಚಿವ ಮಂಗಲ್ ಪ್ರಭಾತ್ ಲೋಧಾ ಈ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ: ಕೌಶಲ್ಯ ವಿಶ್ವವಿದ್ಯಾಲಯಕ್ಕೆ ರತನ್ ಟಾಟಾ ಹೆಸರಿಟ್ಟ ಸರ್ಕಾರ
ವಿಶ್ವವಿದ್ಯಾಲಯ
Image Credit source: Social Media

Updated on: Oct 14, 2024 | 12:30 PM

ಮಹಾರಾಷ್ಟ್ರ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧರಿಸಿದೆ.
ಮಹಾರಾಷ್ಟ್ರ ರಾಜ್ಯ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಪದ್ಮ ವಿಭೂಷಣ ರತನ್ ಟಾಟಾ  ಕೌಶಲ್ಯ ವಿಶ್ವವಿದ್ಯಾಲಯ ಎಂದು ಬದಲಾಯಿಸಲಾಗುತ್ತಿದೆ. ಕೌಶಲ್ಯಾಭಿವೃದ್ಧಿ ಸಚಿವ ಮಂಗಲ್ ಪ್ರಭಾತ್ ಲೋಧಾ ಈ ಮಾಹಿತಿ ನೀಡಿದ್ದಾರೆ.

ರತನ್ ಟಾಟಾ ಅವರನ್ನು ಗೌರವಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮಹಾರಾಷ್ಟ್ರ ಕೌಶಲ್ಯ ಅಭಿವೃದ್ಧಿ ವಿಶ್ವವಿದ್ಯಾಲಯವನ್ನು ಇನ್ನು ರತನ್ ಟಾಟಾ ವಿಶ್ವವಿದ್ಯಾಲಯ ಎಂದು ಕರೆಯಲಾಗುತ್ತದೆ. ಅಕ್ಟೋಬರ್ 9ರಂದು ಕೈಗಾರಿಕೋದ್ಯಮಿ ರತನ್ ಟಾಟಾ ನಿಧನ ಹೊಂದಿದ್ದಾರೆ. ರತನ್ ಟಾಟಾ ಅವರು ತಮ್ಮ ಇಡೀ ಜೀವನವನ್ನು ಸುಧಾರಿಸಲು ಮತ್ತು ಭಾರತಕ್ಕೆ ಹೊಸ ಗುರುತನ್ನು ನೀಡಲು ಮುಡಿಪಾಗಿಟ್ಟಿದ್ದರು.

ಭಾರತದ ಭವಿಷ್ಯವನ್ನು ರೂಪಿಸುವಲ್ಲಿ ಅವರ ಮಹತ್ವದ ಪಾತ್ರವನ್ನು ಗುರುತಿಸಿ ಕೈಗಾರಿಕೋದ್ಯಮಿಗೆ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಸ್ತಾಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ನೀತಿ ಸಂಹಿತೆ ಯಾವಾಗ ಬೇಕಾದರೂ ಜಾರಿಗೆ ಬರಬಹುದು.

ಮತ್ತಷ್ಟು ಓದಿ:ಟಾಟಾ ಗ್ರೂಪ್​ಗೆ ಮುಂದಿನ ವಾರಸುದಾರ ನೋಯಲ್ ಟಾಟಾ; ಟ್ರಸ್ಟ್​ಗಳ ಮಂಡಳಿಗೆ ಛೇರ್ಮನ್ ಆಗಿ ನೇಮಕ

ಇದಕ್ಕೂ ಮುನ್ನ ರಾಜ್ಯ ಸರ್ಕಾರ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಈ ಹಿಂದೆ ಮಹಾಯುತಿ ಸರ್ಕಾರ ಸಮಾಜದ ವಿವಿಧ ವರ್ಗಗಳನ್ನು ಸೆಳೆಯಲು ಹಲವು ನಿರ್ಧಾರಗಳನ್ನು ತೆಗೆದುಕೊಂಡಿದೆ.

ಮುಂಬೈಗೆ ಪ್ರವೇಶಿಸುವ ಎಲ್ಲಾ 5 ಟೋಲ್ ಪಾಯಿಂಟ್‌ಗಳಲ್ಲಿ ಲಘು ವಾಹನಗಳು ಟೋಲ್ ಕಟ್ಟಬೇಕಿಲ್ಲ, ಈಗ ದಹಿಸರ್, ಮುಲುಂಡ್, ವಾಶಿ, ಐರೋಲಿ ಮತ್ತು ತಿನ್ಹತ್ ನಾಕಾ ಟೋಲ್ ಬೂತ್‌ಗಳಿಂದ ಸಣ್ಣ ವಾಹನಗಳು ಟೋಲ್ ಪಾವತಿಸದೆ ಪ್ರಯಾಣಿಸಬಹುದು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us