ಫೇಸ್‌ಬುಕ್ ಲೈವ್‌ನಲ್ಲಿ ಠಾಕ್ರೆ ಬಣದ ನಾಯಕನ ಹತ್ಯೆ ಮಾಡಿ, ತಾನೂ ಗುಂಡು ಹಾರಿಸಿಕೊಂಡ ಆರೋಪಿ
ಮಹಾರಾಷ್ಟ್ರದಲ್ಲಿ ಶುಕ್ರವಾರ ಸಂಜೆ ಉದ್ಧವ್ ಠಾಕ್ರೆ ಬಣದ ನಾಯಕ ಅಭಿಷೇಕ್ ಘೋಸಲ್ಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಕೊಲೆ ಆರೋಪಿಯನ್ನು ಮಾರಿಸ್ ಎಂದು ಗುರುತಿಸಲಾಗಿದೆ. ಸಿಕ್ಕಿರುವ ಮಾಹಿತಿ ಪ್ರಕಾರ ಆರೋಪಿಯೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಫೇಸ್‌ಬುಕ್ ಲೈವ್‌ನಲ್ಲಿ ಈ ಸಂಪೂರ್ಣ ಘಟನೆ ನಡೆದಿದೆ. ಆರೋಪಿ ತನ್ನ ಫೇಸ್ ಬುಕ್ ಐಡಿಯಿಂದ ಶಿವಸೇನೆ ನಾಯಕನೊಂದಿಗೆ ಲೈವ್ ಮಾಡುತ್ತಿದ್ದ. ಅವನು ಮಾತು ಮುಗಿಸಿದ ತಕ್ಷಣ, ಮಾರಿಸ್ ಅವನನ್ನು ಮುಂಭಾಗದಿಂದ ಹೊಡೆದಿದ್ದಾನೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶಿವಸೇನಾ (ಯುಬಿಟಿ) ನಾಯಕ ವಿನೋದ್ ಘೋಸಲ್ಕರ್ ಅವರ ಪುತ್ರ ಅಭಿಷೇಕ್ ಘೋಸಲ್ಕರ್, ಮಾರಿಸ್ ಎಂಬ ವ್ಯಕ್ತಿಯೊಂದಿಗೆ ಫೇಸ್‌ಬುಕ್ ಲೈವ್‌ಸ್ಟ್ರೀಮ್ ಮಾಡುತ್ತಿದ್ದ ಎನ್ನಲಾಗಿದೆ.
ಫೇಸ್‌ಬುಕ್ ಲೈವ್‌ನಲ್ಲಿ ಶಿವಸೇನೆ(Shiv Sena)ಯ ಉದ್ಧವ್ ಠಾಕ್ರೆ(Uddhav Thackeray) ಬಣದ ನಾಯಕನನ್ನು ಹತ್ಯೆ ಮಾಡಿ ಆರೋಪಿ ಕೊನೆಗೆ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಅಭಿಷೇಕ್ ಘೋಸಲ್ಕರ್ ಅವರನ್ನು ಶುಕ್ರವಾರ ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಆಘಾತಕಾರಿ ವಿಷಯವೆಂದರೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಮೌರಿಸ್ ನೊರೊನ್ಹಾ ಅವರು ಫೇಸ್‌ಬುಕ್ ಲೈವ್‌ನಲ್ಲಿ ಈ ಸಂಚಲನಕಾರಿ ಹೆಜ್ಜೆ ಇಟ್ಟಿದ್ದಾರೆ. ಇದಾದ ಬಳಿಕ ನೊರೊನ್ಹಾ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಲಾಗುತ್ತಿದೆ. ಇದೆಲ್ಲದರ ನಡುವೆ ಪ್ರಕರಣದ ತನಿಖೆಯನ್ನು ಮುಂಬೈ ಕ್ರೈಂ ಬ್ರಾಂಚ್‌ಗೆ ವಹಿಸಲಾಗಿದೆ.
ಘಟನೆಯ ಫೇಸ್‌ಬುಕ್ ಲೈವ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಅಭಿಷೇಕ್ ಹೊಟ್ಟೆ ಮತ್ತು ಭುಜಕ್ಕೆ ಗುಂಡು ಹಾರಿಸಿರುವುದನ್ನು ಕಾಣಬಹುದು. ಘೋಸಲ್ಕರ್ ಮತ್ತು ನೊರೊನ್ಹಾ ನಡುವೆ ಪರಸ್ಪರ ದ್ವೇಷವಿತ್ತು ಎಂದು ಹೇಳಲಾಗಿದೆ. ಅಭಿಷೇಕ್ ಉದ್ಧವ್ ಠಾಕ್ರೆ ನೇತೃತ್ವದ ಪಕ್ಷದ ಹಿರಿಯ ನಾಯಕ ವಿನೋದ್ ಘೋಸಲ್ಕರ್ ಅವರ ಮಗ. ಇದಕ್ಕೂ ಮುನ್ನ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘಟನೆಯ ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಬೆಂಗಳೂರು: ತಡರಾತ್ರಿ ಟೆಕ್ಕಿ ಮೇಲೆ ಹಲ್ಲೆ ನಡೆಸಿ ಬೈಕ್ ಕಳ್ಳತನ ಮಾಡಿದ್ದ ಯುವಕರು; ಸಿಸಿಟಿವಿ ಆಧರಿಸಿ ಬಲೆ ಬೀಸಿರುವ ಪೊಲೀಸ್
ಏತನ್ಮಧ್ಯೆ, ನಾಲ್ಕು ದಿನಗಳ ಹಿಂದೆ ಇಲ್ಲಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ವರ್ಷಾ’ದಲ್ಲಿ ಶಿಂಧೆ ಅವರು ನೊರೊನ್ಹಾ ಅವರನ್ನು ಭೇಟಿಯಾಗಿ ತಮ್ಮ (ಶಿಂಧೆ) ನೇತೃತ್ವದ ಶಿವಸೇನೆಗೆ ಸೇರುವಂತೆ ಆಹ್ವಾನಿಸಿದ್ದರು ಎಂದು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವುತ್ ಆರೋಪಿಸಿದ್ದಾರೆ. ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಬೇಕು ಎಂದು ರಾವತ್ ಒತ್ತಾಯಿಸಿದರು.
ಕಳೆದ ವಾರ ಫೆಬ್ರವರಿ 2 ರಂದು ಬಿಜೆಪಿ ಶಾಸಕರೊಬ್ಬರು ಸ್ಥಳೀಯ ಶಿವಸೇನೆ ನಾಯಕನ ಮೇಲೆ (ಶಿಂಧೆ ಬಣ) ಪೊಲೀಸ್ ಠಾಣೆಯಲ್ಲಿ ಗುಂಡು ಹಾರಿಸಿದ್ದರು ಎಂದು ತಿಳಿದಿದೆ. ಈ ಸಂಬಂಧ ಇದುವರೆಗೆ 4 ಮಂದಿಯನ್ನು ಬಂಧಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ