Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಚಾಲಕನಿಂದ ಪ್ರಮಾದ, ಕಾರು ಅಪಘಾತ, ಇಬ್ಬರು ಸಾವು, ಬಾಲಕನ ತಂದೆಯ ಬಂಧನ

ಅಪ್ರಾಪ್ತ ಬಾಲಕನೊಬ್ಬ ವೇಗವಾಗಿ ಕಾರು ಓಡಿಸಿ, ಬೈಕ್​ಗೆ ಡಿಕ್ಕಿ ಹೊಡೆಸಿ  ಇಬ್ಬರ ಸಾವಿಗೆ ಕಾರಣವಾಗಿದ್ದ ಪ್ರಕರಣದಲ್ಲಿ ಬಾಲಕನ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ಪುಣೆಯ ಕಲ್ಯಾಣನಗರದಲ್ಲಿ ಬಾಲಕ ಚಲಾಯಿಸುತ್ತಿದ್ದ ಸ್ಪೋರ್ಟ್ಸ್​ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದರು. ಸಿಸಿಟಿವಿ ದೃಶ್ಯದಲ್ಲಿ ಆತ ವೇಗವಾಗಿ ಕಾರು ಚಲಾಯಿಸುತ್ತಿರುವುದನ್ನು ಕಾಣಬಹುದು.

ಅಪ್ರಾಪ್ತ ಚಾಲಕನಿಂದ ಪ್ರಮಾದ, ಕಾರು ಅಪಘಾತ, ಇಬ್ಬರು ಸಾವು, ಬಾಲಕನ ತಂದೆಯ ಬಂಧನ
ಅಪಘಾತ
Follow us
ನಯನಾ ರಾಜೀವ್
|

Updated on: May 21, 2024 | 9:18 AM

ಅಪ್ರಾಪ್ತ ಚಾಲಕನೊಬ್ಬ ವೇಗವಾಗಿ ಕಾರು ಓಡಿಸಿ, ಬೈಕ್​ಗೆ ಡಿಕ್ಕಿ ಹೊಡೆಸಿ  ಇಬ್ಬರ ಸಾವಿಗೆ ಕಾರಣವಾಗಿದ್ದ ಪ್ರಕರಣದಲ್ಲಿ ಬಾಲಕನ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ಪುಣೆಯ ಕಲ್ಯಾಣನಗರದಲ್ಲಿ ಬಾಲಕ ಚಲಾಯಿಸುತ್ತಿದ್ದ ಸ್ಪೋರ್ಟ್ಸ್​ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದರು. ಸಿಸಿಟಿವಿ ದೃಶ್ಯದಲ್ಲಿ ಆತ ವೇಗವಾಗಿ ಕಾರು ಚಲಾಯಿಸುತ್ತಿರುವುದನ್ನು ಕಾಣಬಹುದು.

ಬಾಲಕ ಅಪಘಾತಕ್ಕೂ ಮುನ್ನ ಮದ್ಯ ಸೇವನೆ ಮಾಡಿದ್ದ ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರದಲ್ಲಿ 25ವರ್ಷದೊಳಗಿನ ಮಕ್ಕಳು ಮದ್ಯ ಸೇವಿಸುವಂತಿಲ್ಲ. ಆತ ಬಂಧನಕ್ಕೊಳಗಾಗಿ 15 ಗಂಟೆಯೊಳಗೆ ಜಾಮೀನು ನೀಡಿರುವ ಬಾಲಾಪರಾದಿ ನ್ಯಾಯಾಲಯದ ತೀರ್ಪಿನ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯವು ಆತನಿಗೆ ಅಪಘಾತ ಹಾಗೂ ಪರಿಹಾರ ಕುರಿತು 300 ಪದಗಳ ಪ್ರಬಂಧ ಬರೆಯಲು ಕೇಳಿದೆ ಅಷ್ಟೇ ಅಲ್ಲದೆ ಡಿ ಅಡಿಕ್ಷನ್​ ಕೇಂದ್ರಕ್ಕೆ ಸೇರಬೇಕು ಹಾಗೂ ಟ್ರಾಫಿಕ್​ ಪೊಲೀಸರ ಜತೆ 15 ದಿನಗಳ ಕಾಲ ಕೆಲಸ ಮಾಡುವ ಷರತ್ತಿನ ಮೇರೆಗೆ ಜಾಮೀನು ನೀಡಲಾಗಿದೆ.

ಮತ್ತಷ್ಟು ಓದಿ: ಅಪಘಾತ ಮಾಡಿ ಇಬ್ಬರ ಸಾವಿಗೆ ಕಾರಣನಾಗಿದ್ದ ಅಪ್ರಾಪ್ತ ಟ್ರಾಫಿಕ್​ ಪೊಲೀಸರ ಜತೆ ಕೆಲ್ಸ ಮಾಡ್ಬೇಕು, ಷರತ್ತುಬದ್ಧ ಜಾಮೀನು

ಹಿರಿಯ ಅಧಿಕಾರಿಯ ಪ್ರಕಾರ, ಬಿಲ್ಡರ್ ಆಗಿರುವ ಬಾಲಕನ ತಂದೆಯನ್ನು ಪುಣೆಗೆ ಕರೆತರಲಾಗುತ್ತಿದ್ದು, ಅಲ್ಲಿ ಆತನನ್ನು ಬಂಧಿಸುವ ಸಾಧ್ಯತೆಯಿದೆ. ತಂದೆ, ಎರಡು ರೆಸ್ಟೋರೆಂಟ್‌ಗಳ ಮಾಲೀಕರು ಮತ್ತು ಅವರ ಸಿಬ್ಬಂದಿಯ ವಿರುದ್ಧ ಸೋಮವಾರ ಮೋಟಾರ್ ವಾಹನ ಕಾಯ್ದೆ (ಎಂವಿಎ) ಮತ್ತು ಜುವೆನೈಲ್ ಜಸ್ಟೀಸ್ ಆಕ್ಟ್ (ಜೆಜೆಎ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಾಲಕನಿಗಿರುವ ಷರತ್ತುಗಳೇನು? 15 ದಿನಗಳ ಕಾಲ ಟ್ರಾಫಿಕ್ ಪೊಲೀಸರೊಂದಿಗೆ ಕೆಲಸ ಮಾಡಬೇಕು ಮನೋವೈದ್ಯಕೀಯ ಮೌಲ್ಯಮಾಪನ ಮತ್ತು ಚಿಕಿತ್ಸೆಗೆ ಒಳಗಾಗಬೇಕು ರಸ್ತೆ ಅಪಘಾತಗಳ ಪರಿಣಾಮ ಮತ್ತು ಅವುಗಳ ಪರಿಹಾರ ಕುರಿತು 300 ಪದಗಳ ಪ್ರಬಂಧವನ್ನು ಬರೆಯಬೇಕು ವ್ಯಸನಮುಕ್ತ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬೇಕು ಭವಿಷ್ಯದಲ್ಲಿ ಅಪಘಾತಕ್ಕೊಳಗಾದವರಿಗೆ ಸಹಾಯ ಮಾಡುವುದು. ಅಪಘಾತದ ಸ್ಥಳದಲ್ಲಿ ಜನಸಮೂಹದಿಂದ ಅಪ್ರಾಪ್ತನನ್ನು ಥಳಿಸುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ.

ಕಾರಿನಲ್ಲಿ ಮೂರು ಮಂದಿ ಇದ್ದರು ಅದರಲ್ಲಿ ಒಬ್ಬರು ಅಪಘಾತವಾದ ತಕ್ಷಣ ಕಾರಿನಿಂದ ಓಡಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಅಪ್ರಾಪ್ತ ಬಾಲಕನಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಬಾರ್ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ