AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಸ್ಲೀಪರ್ ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಶಿಶುವನ್ನು ಎಸೆದ ಮಹಿಳೆ

ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಶಿಶುವನ್ನು ಹೊರಗೆಸೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ 6.30 ರ ಸುಮಾರಿಗೆ ಪತ್ರಿ-ಸೇಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಪೊಲೀಸರ ಪ್ರಕಾರ, ಯುವತಿ ಮತ್ತು ಆಕೆಯ ಸಹಚರರು ಸಂತ ಪ್ರಯಾಗ್ ಟ್ರಾವೆಲ್ಸ್ ಸ್ಲೀಪರ್ ಕೋಚ್ ಬಸ್‌ನಲ್ಲಿ ಪುಣೆಯಿಂದ ಪರ್ಭಾನಿಗೆ ಪ್ರಯಾಣಿಸುತ್ತಿದ್ದರು. ಪ್ರಯಾಣದ ಸಮಯದಲ್ಲಿ, ರಿತಿಕಾ ಧೇರೆ ಎಂದು ಗುರುತಿಸಲಾದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಬಸ್ಸಿನೊಳಗೆ ಮಗುವಿಗೆ ಜನ್ಮ ನೀಡಿದರು. ಅವರ ಜೊತೆ ಆಕೆಯ ಪತಿ ಎಂದು ಹೇಳಿಕೊಂಡ ಅಲ್ತಾಫ್ ಶೇಖ್ ಕೂಡ ಇದ್ದ.

ಮಹಾರಾಷ್ಟ್ರ: ಸ್ಲೀಪರ್ ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಶಿಶುವನ್ನು ಎಸೆದ ಮಹಿಳೆ
ಮಗು-ಸಾಂದರ್ಭಿಕ ಚಿತ್ರ Image Credit source: Adobe Stock
ನಯನಾ ರಾಜೀವ್
|

Updated on:Jul 16, 2025 | 11:21 AM

Share

ಮಹಾರಾಷ್ಟ್ರ, ಜುಲೈ 16: ಚಲಿಸುತ್ತಿರುವ ಬಸ್ಸಿನಲ್ಲೇ ಮಗು(Baby)ವಿಗೆ ಜನ್ಮ ನೀಡಿದ್ದ  ಮಹಿಳೆ ಪತಿಯ ಸಹಾಯದಿಂದ ಕಿಟಕಿಯಿಂದ ಮಗುವನ್ನು ಎಸೆದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿಯಲ್ಲಿ ನಡೆದಿದೆ. ಚಲಿಸುತ್ತಿರುವ ಸ್ಲೀಪರ್ಬಸ್ಸಿನಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ, ಪತಿ ಎಂದು ಹೇಳಿಕೊಂಡ ವ್ಯಕ್ತಿಯ ಸಹಾಯದಿಂದ ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದಿದ್ದಾರೆ. ಶಿಶು ಗಂಭೀರ ಗಾಯಗಳಿಂದಾಗಿ  ಸಾವನ್ನಪ್ಪಿದೆ.

ಮಂಗಳವಾರ ಬೆಳಗ್ಗೆ 6.30 ರ ಸುಮಾರಿಗೆ ಪತ್ರಿ-ಸೇಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಪೊಲೀಸರ ಪ್ರಕಾರ, ಯುವತಿ ಮತ್ತು ಆಕೆಯ ಸಹಚರರು ಸಂತ ಪ್ರಯಾಗ್ ಟ್ರಾವೆಲ್ಸ್ ಸ್ಲೀಪರ್ ಕೋಚ್ ಬಸ್‌ನಲ್ಲಿ ಪುಣೆಯಿಂದ ಪರ್ಭಾನಿಗೆ ಪ್ರಯಾಣಿಸುತ್ತಿದ್ದರು. ಪ್ರಯಾಣದ ಸಮಯದಲ್ಲಿ, ರಿತಿಕಾ ಧೇರೆ ಎಂದು ಗುರುತಿಸಲಾದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಬಸ್ಸಿನೊಳಗೆ ಮಗುವಿಗೆ ಜನ್ಮ ನೀಡಿದರು. ಅವರ ಜೊತೆ ಆಕೆಯ ಪತಿ ಎಂದು ಹೇಳಿಕೊಂಡ ಅಲ್ತಾಫ್ ಶೇಖ್ ಕೂಡ ಇದ್ದ.

ಹೆರಿಗೆಯಾದ ಸ್ವಲ್ಪ ಸಮಯದ ನಂತರ, ದಂಪತಿ ನವಜಾತ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಬಸ್ಸಿನ ಕಿಟಕಿಯಿಂದ ಹೊರಗೆ ಎಸೆದಿದ್ದರು ಎಂದು ಆರೋಪಿಸಲಾಗಿದೆ. ಆರಂಭದಲ್ಲಿ, ಬಸ್ ಪ್ರಯಾಣದಿಂದ ಮಹಿಳೆ ವಾಂತಿ ಮಾಡಿಕೊಂಡಿದ್ದಾಳೆ ಎಂದು ಅವರು ಇತರ ಪ್ರಯಾಣಿಕರು ಮತ್ತು ಬಸ್ ಚಾಲಕರಿಗೆ ತಿಳಿಸಿದರು. ಬಸ್ಸಿನ ಹಿಂದೆ ಪ್ರಯಾಣಿಸುತ್ತಿದ್ದ ಮೋಟಾರ್ ಸೈಕಲ್ ಸವಾರನೊಬ್ಬ ಕಿಟಕಿಯಿಂದ ಅನುಮಾನಾಸ್ಪದವಾಗಿ ಏನೋ ಎಸೆದಿರುವುದನ್ನು ಗಮನಿಸಿದ್ದಾರೆ.

ಮತ್ತಷ್ಟು ಓದಿ:  ನವಜಾತ ಶಿಶು ಕೊಲೆ ಪ್ರಕರಣ: ಬಂಧಿತ ಮಹಿಳೆಯಿಂದ ಕ್ಷಣಕ್ಕೊಂದು ಹೇಳಿಕೆ; ಶಿಶು, ಮಹಿಳೆಯ ಡಿಎನ್​ಎ ಪರೀಕ್ಷೆಗೆ ನಿರ್ಧಾರ

ಬಟ್ಟೆಯಲ್ಲಿ ಸುತ್ತಿಕೊಂಡಿದ್ದ ನವಜಾತ ಶಿಶುವನ್ನು ಕಂಡು ಆಘಾತಕ್ಕೊಳಗಾಗಿ ತಕ್ಷಣ ತುರ್ತು ಸಹಾಯವಾಣಿ (112) ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದರು.

ಸ್ಥಳೀಯ ಪೊಲೀಸ್ ಗಸ್ತು ತಂಡವು ಬಸ್ ಅನ್ನು ತಡೆದು ಪ್ರಾಥಮಿಕ ವಿಚಾರಣೆಯ ನಂತರ ದಂಪತಿಯನ್ನು ಬಂಧಿಸಿತು. ವಿಚಾರಣೆಯ ಸಮಯದಲ್ಲಿ, ಮಗುವನ್ನು ಬೆಳೆಸಲು ತಮಗೆ ಸಾಧ್ಯವಿಲ್ಲ ಎಂದು ಹೇಳಿ ಮಗುವನ್ನು ಎಸೆದಿದ್ದಾಗಿ ಇಬ್ಬರೂ ಒಪ್ಪಿಕೊಂಡರು. ಚಲಿಸುವ ಬಸ್ಸಿನಿಂದ ಬಿದ್ದ ಪರಿಣಾಮ ಶಿಶು ಸಾವನ್ನಪ್ಪಿದೆ.

ದಂಪತಿ ಪತಿ-ಪತ್ನಿ ಎಂದು ಹೇಳಿಕೊಂಡು ಕಳೆದ ಒಂದೂವರೆ ವರ್ಷಗಳಿಂದ ಪುಣೆಯಲ್ಲಿ ವಾಸಿಸುತ್ತಿದ್ದರು ಆದರೆ ವೈವಾಹಿಕ ಸ್ಥಿತಿಯನ್ನು ದೃಢೀಕರಿಸುವ ಯಾವುದೇ ದಾಖಲೆಯನ್ನು ಅವರಿಗೆ ಪ್ರಸ್ತುತಪಡಿಸಲು ಸಾಧ್ಯವಾಗಿಲ್ಲ. ಘಟನೆಯ ನಂತರ ಮಹಿಳೆಯನ್ನು ಪೊಲೀಸರು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Wed, 16 July 25

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ