Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯ ಶುಲ್ಕ ಕಟ್ಟಲು ಸಾಧ್ಯವಾಗದೆ ಮಗಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ಶಾಲೆಯ ಶುಲ್ಕ ಕಟ್ಟಲು ಸಾಧ್ಯವಾಗದೆ ಮಹಿಳೆ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 26 ವರ್ಷದ ಮಹಿಳೆ ಹಣದ ಕೊರತೆಯಿಂದಾಗಿ ಸಿಬಿಎಸ್​ಇ ಶಾಲೆಗೆ ಕಳುಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೊಂದು ಐದು ವರ್ಷದ ಮಗಳ ಜತೆಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಾಲೆಯ ಶುಲ್ಕ ಕಟ್ಟಲು ಸಾಧ್ಯವಾಗದೆ ಮಗಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ
ಸಾವು
Follow us
ನಯನಾ ರಾಜೀವ್
|

Updated on: Jun 21, 2024 | 12:58 PM

ಮಕ್ಕಳ ಶಾಲೆಯ ಶುಲ್ಕ(School Fee) ಕಟ್ಟಲು ಸಾಧ್ಯವಾಗಿಲ್ಲ ಎಂದು ಮಹಿಳೆಯೊಬ್ಬರು ಮಗಳ ಜತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 26 ವರ್ಷದ ಮಹಿಳೆ ಹಣದ ಕೊರತೆಯಿಂದಾಗಿ ಸಿಬಿಎಸ್​ಇ ಶಾಲೆಗೆ ಕಳುಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೊಂದು ಐದು ವರ್ಷದ ಮಗಳ ಜತೆಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎರಡು ದಿನಗಳ ಹಿಂದೆ ಮಧ್ಯ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ನಿಲಂಗಾ ತಹಸಿಲ್‌ನ ಮಾಲೆಗಾಂವ್‌ನಲ್ಲಿ ಈ ಘಟನೆ ನಡೆದಿದೆ. ಔರಾದ್ ಶಹಾಜಾನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ಭಾಗ್ಯಶ್ರೀ ವೆಂಕಟ್ ಹಲ್ಸೆ (26) ಮತ್ತು ಸಮೀಕ್ಷಾ ವೆಂಕಟ್ ಹಲ್ಸೆ (5) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿಯು ಒಂದೂವರೆ ಎಕರೆ ಜಮೀನನ್ನು ಹೊಂದಿದ್ದು, ಕುಟುಂಬದ ಜೀವನೋಪಾಯವು ಮುಖ್ಯವಾಗಿ ಮೇಕೆಗಳನ್ನು ಮೇಯಿಸುವುದನ್ನು ಅವಲಂಬಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅತ್ತಿಗೆ ಮೇಲಿನ ಕೋಪಕ್ಕೆ 3 ವರ್ಷದ ಮಗುವಿನ ಕತ್ತು ಸೀಳಿ ಕೊಲೆ: ಸತ್ಯ ಬಾಯ್ಬಿಟ್ಟ ಆರೋಪಿ

ಪ್ರಾಥಮಿಕ ತನಿಖೆಯ ಪ್ರಕಾರ, ಭಾಗ್ಯಶ್ರೀ ತನ್ನ ಮಗ ಮತ್ತು ಮಗಳನ್ನು ಸಿಬಿಎಸ್‌ಇ-ಸಂಯೋಜಿತ ಶಾಲೆಗೆ ಕಳುಹಿಸಲು ಬಯಸಿದ್ದಳು, ಅದು ತನ್ನ ಗಂಡನ ಸಾಮರ್ಥ್ಯಕ್ಕೆ ಮೀರಿದೆ. ಇದರಿಂದ ಆಕೆ ಆಗಾಗ್ಗ ಖಿನ್ನತೆಗೆ ಒಳಗಾಗುತ್ತಿದ್ದಳು ಎಂದು ಆಕೆಯ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.

ಕಳೆದ ವರ್ಷ ಆಕೆ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು ಮತ್ತು ಇದು ಅವಳ ಖಿನ್ನತೆಗೆ ಕಾರಣವಾಯಿತು ಎಂದು ಕುಟುಂಬ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ. ಮಂಗಳವಾರ ಸಂಜೆ 5.30ರ ಸುಮಾರಿಗೆ ತನ್ನ ಮಗಳೊಂದಿಗೆ ಮತ್ತೊಬ್ಬ ರೈತನ ಒಡೆತನದ ಬಾವಿಗೆ ಹೋಗಿದ್ದಳು. ಅಲ್ಲಿಂದ ಪತಿ ವೆಂಕಟ್ ಹಲ್ಸೆಗೆ ವಿಡಿಯೋ ಕಾಲ್ ಮಾಡಿ ಮಗಳ ಮುಖವನ್ನು ಕೊನೆಯ ಬಾರಿ ನೋಡುವಂತೆ ಹೇಳಿ ಬಾಲಕಿಯೊಂದಿಗೆ ಬಾವಿಗೆ ಹಾರಿದ್ದಾಳೆ.

ಬಳಿಕ ಸ್ಥಳೀಯರ ನೆರವಿನಿಂದ ಪೊಲೀಸರು ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮಹಿಳೆ ಆಟವಾಡುತ್ತಿದ್ದ ಮಗನನ್ನು ಸಹ ತನ್ನೊಂದಿಗೆ ಬಾವಿಗೆ ಕರೆದೊಯ್ಯಲು ಪ್ರಯತ್ನಿಸಿದಳು, ಆದರೆ ಮಗ ನಿರಾಕರಿಸಿ ಅಲ್ಲಿಂದ ಓಡಿ ಹೋಗಿದ್ದ ಎಂಬುದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !