AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಧುವಿನ ಖತರ್ನಾಕ್ ವಂಚನೆ ಜಾಲ: 9 ಬಾರಿ ಮದುವೆಯಾಗಿ ವರರಿಗೆ ಪಂಗನಾಮ, ಹಣ-ಒಡವೆಯೊಂದಿಗೆ ಎಸ್ಕೇಪ್

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಅವಿವಾಹಿತ ಪುರುಷರನ್ನು ಗುರಿಯಾಗಿಸಿಕೊಂಡು ನಕಲಿ ವಿವಾಹಗಳ ಮೂಲಕ ಹಣ ಮತ್ತು ಆಭರಣ ದೋಚುತ್ತಿದ್ದ ಶಂಕಿತ ವಧುವಿನ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಮಹಿಳೆಯೊಬ್ಬರು ಏಜೆಂಟ್‌ಗಳ ಸಹಾಯದಿಂದ ಹಲವು ಪುರುಷರನ್ನು ಮದುವೆಯಾಗಿ, ಕೆಲವೇ ದಿನಗಳಲ್ಲಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಿದ್ದ ಆರೋಪ ಕೇಳಿಬಂದಿದೆ.

ವಧುವಿನ ಖತರ್ನಾಕ್ ವಂಚನೆ ಜಾಲ: 9 ಬಾರಿ ಮದುವೆಯಾಗಿ ವರರಿಗೆ ಪಂಗನಾಮ, ಹಣ-ಒಡವೆಯೊಂದಿಗೆ  ಎಸ್ಕೇಪ್
ಮಹಿಳೆImage Credit source: India Today
ನಯನಾ ರಾಜೀವ್
|

Updated on: May 06, 2026 | 1:03 PM

Share

ಬೀಡ್, ಮೇ 06: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಅವಿವಾಹಿತ ಪುರುಷರನ್ನು ಗುರಿಯಾಗಿಸಿಕೊಂಡು ನಕಲಿ ವಿವಾಹಗಳ ಮೂಲಕ ಹಣ ಮತ್ತು ಆಭರಣ ದೋಚುತ್ತಿದ್ದ ಶಂಕಿತ ವಧು(Bride)ವಿನ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಮಹಿಳೆಯೊಬ್ಬರು ಏಜೆಂಟ್‌ಗಳ ಸಹಾಯದಿಂದ ಹಲವು ಪುರುಷರನ್ನು ಮದುವೆಯಾಗಿ, ಕೆಲವೇ ದಿನಗಳಲ್ಲಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಿದ್ದ ಆರೋಪ ಕೇಳಿಬಂದಿದೆ.

ಯೋಗೇಶ್ ಶಿಂಧೆ ಎಂಬ ಮಧ್ಯವರ್ತಿಗಳ ಮೂಲಕ ಈ ಮಹಿಳೆಯನ್ನು ಪರಿಚಯ ಮಾಡಿಕೊಂಡು ಮದುವೆಯಾಗಿದ್ದರು. ಏಜೆಂಟರು ಮದುವೆ ಏರ್ಪಡಿಸಲು ಅವರಿಂದ ದೊಡ್ಡ ಮೊತ್ತದ ಹಣ ಪಡೆದಿದ್ದರು. ಶಾಸ್ತ್ರೋಕ್ತವಾಗಿ ಮದುವೆಯಾದ ಕೆಲವೇ ದಿನಗಳಲ್ಲಿ ವಧು ಮತ್ತು ಏಜೆಂಟರು ಕಣ್ಮರೆಯಾದಾಗ ವಂಚನೆಯ ಅಸಲಿ ಮುಖವಾಡ ಕಳಚಿದೆ. ನಂತರದ ವಿಚಾರಣೆಯಲ್ಲಿ ಯೋಗೇಶ್‌ಗೆ ಬೆಚ್ಚಿಬೀಳಿಸುವ ಸತ್ಯವೊಂದು ತಿಳಿದುಬಂದಿದೆ.

ಈ ಮಹಿಳೆ ತನಗಿಂತ ಮೊದಲು ಈಗಾಗಲೇ ಎಂಟು ಪುರುಷರನ್ನು ಇದೇ ರೀತಿ ಮದುವೆಯಾಗಿದ್ದು, ಪ್ರತಿ ಬಾರಿಯೂ ಹಣ ಮತ್ತು ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಳು. ಮದುವೆಗೆ ಮುನ್ನ ಆಕೆಯ ಹಿಂದಿನ ವಿವಾಹಗಳ ಬಗ್ಗೆ ಯೋಗೇಶ್‌ರನ್ನು ಸಂಪೂರ್ಣವಾಗಿ ಕತ್ತಲೆಯಲ್ಲಿ ಇಡಲಾಗಿತ್ತು.

ದೂರಿನ ಪ್ರಕಾರ, ಈ ಜಾಲವು ಬೀಡ್ ಜಿಲ್ಲೆಯ ಗ್ರಾಮೀಣ ಭಾಗದ ಅವಿವಾಹಿತ ಪದವಿಧರ ಪುರುಷರನ್ನು ಗುರಿಯಾಗಿಸಿಕೊಂಡಿದೆ. ವಧು ಸಿಗದೆ ಹೆಣಗಾಡುತ್ತಿರುವ ಕುಟುಂಬಗಳ ದೌರ್ಬಲ್ಯವನ್ನು ಬಳಸಿಕೊಳ್ಳುವ ಈ ಗ್ಯಾಂಗ್, ಮದುವೆ ಮಾಡಿಸುವ ನೆಪದಲ್ಲಿ ಭಾರಿ ಮೊತ್ತವನ್ನು ವಸೂಲಿ ಮಾಡುತ್ತಿತ್ತು.

ಮತ್ತಷ್ಟು ಓದಿ: ಮದ್ವೆಗೆ ಕೆಲವೇ ಗಂಟೆಗಳಿರುವಾಗಲೇ ವಧು ನಾಪತ್ತೆ: ಪೋಷಕರಲ್ಲಿ ಅದೊಂದು ಅನುಮಾನ

ತೀವ್ರ ಮಾನಸಿಕ ಅಘಾತಕ್ಕೊಳಗಾದ ಯೋಗೇಶ್  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದು, ತಮಗೆ ನ್ಯಾಯ ಬೇಕೆಂದು ಒತ್ತಾಯಿಸಿದ್ದಾರೆ. ಲಕ್ಷಾಂತರ ರೂಪಾಯಿ ವಂಚನೆಯಿಂದ ನಾನು ಆತ್ಮಹತ್ಯೆಯ ಆಲೋಚನೆಯಲ್ಲಿದ್ದೇನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಚಕ್ಲಾಂಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಜಾಲದ ಇತರ ಸದಸ್ಯರ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ. ಜಿಲ್ಲೆಯಾದ್ಯಂತ ಈ ಘಟನೆ ಭಾರೀ ಆತಂಕ ಮೂಡಿಸಿದ್ದು, ಇನ್ನು ಎಷ್ಟು ಮಂದಿ ಇವರ ಜಾಲಕ್ಕೆ ಬಲಿಯಾಗಿದ್ದಾರೆ ಎಂಬ ಸತ್ಯ ತನಿಖೆಯಿಂದ ಹೊರಬರಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ