ಮಹಾರಾಷ್ಟ್ರ: ಅನುಚಿತವಾಗಿ ವರ್ತಿಸಿದ ಪುರುಷನ ಗುಪ್ತಾಂಗಕ್ಕೆ ಸೌಟಿನಿಂದ ಹೊಡೆದು ಗಾಯಗೊಳಿಸಿದ ಮಹಿಳೆ
ತೀವ್ರವಾಗಿ ಗಾಯಗೊಂಡಿರುವ ರಚ್ಚಾನನ್ನು ವೈದ್ಯಕೀಯ ಸಹಾಯಕ್ಕಾಗಿ ಆಕೆಯ ಮನೆಯಿಂದ ಹೊರಗೆ ಕರೆದೊಯ್ಯಲಾಯಿತು. ಆತನನ್ನು ಆಸ್ಪತ್ರ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ರಚ್ಚಾ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ.
ಥಾಣೆ ಆಗಸ್ಟ್ 17: ಮಹಾರಾಷ್ಟ್ರದ (Maharashtra) ಥಾಣೆ ಜಿಲ್ಲೆಯಲ್ಲಿ 30 ವರ್ಷದ ವ್ಯಕ್ತಿಯೊಬ್ಬನ ಗುಪ್ತಾಂಗಕ್ಕೆ ಮಹಿಳೆಯೊಬ್ಬರು ಸೌಟಿನಿಂದ ಹೊಡೆದು ಗಾಯಗೊಳಿಸಿದ ಘಟನೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಶನಿವಾರ ವರದಿ ಮಾಡಿದೆ. ಅಧಿಕಾರಿಗಳ ಪ್ರಕಾರ, ಅನಿಲ್ ಸತ್ಯನಾರಾಯಣ ರಚ್ಚಾ (30) ಎಂಬಾತ ಶುಕ್ರವಾರ ಭಿವಂಡಿ ಪ್ರದೇಶದಲ್ಲಿನ 26 ವರ್ಷದ ಮಹಿಳೆಯ ಮನೆಗೆ ಹೋಗಿ ಆಕೆಯ ಜತೆ ಅನುಚಿತವಾಗಿ ವರ್ತಿಸಿದ್ದಾನೆ. ಆರೋಪಿ ಮತ್ತು ಮಹಿಳೆ ಪರಿಚಿತರು ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ 3.30ರ ಸುಮಾರಿಗೆ ರಚ್ಚಾ ಮಹಿಳೆಯಮನೆಗೆ ತೆರಳಿ ಆಕೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದು, ಆಕೆಗೆ ಗುಪ್ತಾಂಗವನ್ನು ತೋರಿಸಿದ್ದಾನೆ ಎಂದು ಹೇಳಲಾಗಿದೆ.
ಮಹಿಳೆ, ತನ್ನನ್ನು ತಾನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ, ಅಡುಗೆಮನೆಗೆ ಓಡಿ ಸೌಟು ತೆಗೆದುಕೊಂಡು ಬಂದು ರಚ್ಚಾ ಮೇಲೆ ದಾಳಿ ಮಾಡಿ ಅವನ ಗುಪ್ತಾಂಗ ಗಾಯಗೊಳಿಸಿದಳು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ತೀವ್ರವಾಗಿ ಗಾಯಗೊಂಡಿರುವ ರಚ್ಚಾನನ್ನು ವೈದ್ಯಕೀಯ ಸಹಾಯಕ್ಕಾಗಿ ಆಕೆಯ ಮನೆಯಿಂದ ಹೊರಗೆ ಕರೆದೊಯ್ಯಲಾಯಿತು. ಆತನನ್ನು ಆಸ್ಪತ್ರ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ರಚ್ಚಾ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಮಹಿಳೆಯ ಘನತೆಗೆ ಧಕ್ಕೆ, ಲೈಂಗಿಕ ಕಿರುಕುಳ ಮತ್ತು ಅತಿಕ್ರಮಣಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ.
ಆರೋಪಿ ಇನ್ನೂ ಆಸ್ಪತ್ರೆಯಲ್ಲಿರುವುದರಿಂದ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ತಿಂಗಳು, ಬಿಹಾರದ ಮಹಿಳೆಯೊಬ್ಬಳು ತನ್ನನ್ನು ಮದುವೆಯಾಗಲು ನಿರಾಕರಿಸಿದ ಕಾರಣ ಸರನ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ಖಾಸಗಿ ಅಂಗಗಳನ್ನು ಕತ್ತರಿಸಿ ಹಾಕಿದ್ದು ವರದಿಯಾಗಿದೆ. ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಆಕೆಯ ಬಳಿಯಿದ್ದ ರಕ್ತಸಿಕ್ತ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: Bihar Bridge Collapse: ಮೂರನೇ ಬಾರಿ ಕುಸಿದು ಬಿತ್ತು ಬಿಹಾರದಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ
ವಿಚಾರಣೆಯ ನಂತರ, ಆರೋಪಿಯು ತಾನು ಮತ್ತು ಸಂತ್ರಸ್ತೆ ಕಳೆದ ಎರಡು ವರ್ಷಗಳಿಂದ ಸಂಬಂಧ ಹೊಂದಿರುವುದಾಗಿ ಹೇಳಿದ್ದಾನೆ. ಆದರೆ ವ್ಯಕ್ತಿ ಅವಳನ್ನು ಮದುವೆಯಾಗಲು ನಿರಾಕರಿಸಿದನು. ತನ್ನ ಪ್ರಸ್ತಾಪವನ್ನು ನಿರಾಕರಿಸಿದ ನಂತರ ಅವಳು ಅವನ ಮೇಲೆ ಹಲ್ಲೆ ನಡೆಸಿದ್ದಾಳೆ. ಮದುವೆಯ ನೆಪದಲ್ಲಿ ತನ್ನನ್ನು ಲೈಂಗಿಕವಾಗಿ ಶೋಷಿಸುತ್ತಿದ್ದಾನೆ ಎಂದು ಮಹಿಳೆ ಆರೋಪ ಮಾಡಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:49 pm, Sat, 17 August 24