AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯ ವೈದ್ಯೆ ಆತ್ಮಹತ್ಯೆ; ಅಂಗೈ ಮೇಲಿತ್ತು ಸಾವಿನ ರಹಸ್ಯ

ಪೊಲೀಸ್ ಅಧಿಕಾರಿ ತನ್ನ ಮೇಲೆ ಪದೇಪದೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಅಂಗೈ ಮೇಲೆ ವಿವರ ಬರೆದಿಟ್ಟು ಮಹಾರಾಷ್ಟ್ರದ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಆರೋಪದ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅನ್ನು ಬಂಧಿಸಲಾಗಿದೆ. ಕಳೆದ ಐದು ತಿಂಗಳಿನಿಂದ ಪೊಲೀಸ್ ಅಧಿಕಾರಿಯಿಂದ ಹಲವು ಬಾರಿ ಅತ್ಯಾಚಾರಕ್ಕೊಳಗಾಗಿ ಮತ್ತೊಬ್ಬ ವ್ಯಕ್ತಿಯಿಂದ ಮಾನಸಿಕ ಕಿರುಕುಳ ಅನುಭವಿಸುತ್ತಿದ್ದೆ ಎಂದು ಆ ವೈದ್ಯೆ ಅಂಗೈ ಮೇಲೆ ಬರೆದುಕೊಂಡಿದ್ದಾರೆ.

ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯ ವೈದ್ಯೆ ಆತ್ಮಹತ್ಯೆ; ಅಂಗೈ ಮೇಲಿತ್ತು ಸಾವಿನ ರಹಸ್ಯ
Maharashtra Doctor Death
ಸುಷ್ಮಾ ಚಕ್ರೆ
|

Updated on:Oct 24, 2025 | 9:30 PM

Share

ಮುಂಬೈ, ಅಕ್ಟೋಬರ್ 24: ಮಹಾರಾಷ್ಟ್ರದ (Maharashtra) ಸತಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರು ಗುರುವಾರ ರಾತ್ರಿ ಹೋಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 5 ತಿಂಗಳುಗಳಿಂದ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಅವರು ತಮ್ಮ ಅಂಗೈಯಲ್ಲಿ ಬರೆದಿದ್ದಾರೆ. ಅಂಗೈನಲ್ಲಿ ಬರೆದಿರುವ ಸೂಸೈಡ್ ನೋಟ್​​ನಲ್ಲಿ ಪೊಲೀಸ್ ಅಧಿಕಾರಿ ಗೋಪಾಲ್ ಬದನೆ ಐದು ತಿಂಗಳುಗಳಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆ ಬರೆದಿದ್ದಾರೆ. ತನ್ನ ಮನೆಯ ಮಾಲೀಕರಾಗಿದ್ದ ಪ್ರಶಾಂತ್ ಬಂಕರ್ ಕೂಡ ತನಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.

28 ವರ್ಷದ ವೈದ್ಯೆ ಬೀಡ್ ಜಿಲ್ಲೆಯವರಾಗಿದ್ದು, ಫಾಲ್ಟನ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದರು. ಈ ಘಟನೆ ಬೆಳಕಿಗೆ ಬಂದ ನಂತರ, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆ ವೈದ್ಯರ ಕೈಯಲ್ಲಿ ಬರೆದಿದ್ದ ಸೂಸೈಡ್ ನೋಟ್​​ನ ವಿಧಿವಿಜ್ಞಾನ ವಿಶ್ಲೇಷಣೆಯನ್ನು ಪ್ರಾರಂಭಿಸಿದ್ದಾರೆ. ಆರೋಪಿ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಮತ್ತು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಇನ್‌ಸ್ಟಾನಲ್ಲಿ ಪರಿಚಯಿಸಿಕೊಂಡು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಅಪ್ರಾಪ್ತೆ ಈಗ ಗರ್ಭಿಣಿ

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸತಾರಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿ, ವೈದ್ಯೆ ತಮ್ಮ ಸೂಸೈಡ್ ನೋಟ್​​​ನಲ್ಲಿ ಹೆಸರಿಸಿರುವ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಆದೇಶಿಸಿದರು. ಹಾಗೇ ಈ ಪ್ರಕರಣದ ಆರೋಪಿಗಳೆಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Fri, 24 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ