AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯಿಂದ ವಿಚ್ಛೇದನ ಪಡೆದು ಹೆಚ್ಚಿನ ಪರಿಹಾರ ಹಣಕ್ಕಾಗಿ ಆತನನ್ನೇ ಅಪಹರಿಸಿದ ಪತ್ನಿ

ವಿಚ್ಛೇದನದ ಬಳಿಕ ಪತಿಯಿಂದ ಹೆಚ್ಚಿನ ಪರಿಹಾರ ಪಡೆಯುವ ದೃಷ್ಟಿಯಿಂದ ಮಹಿಳೆ ಆತನನ್ನು ಅಪಹರಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪತಿಯಿಂದ ವಿಚ್ಛೇದನ ಪಡೆದು ಹೆಚ್ಚಿನ ಪರಿಹಾರ ಹಣಕ್ಕಾಗಿ ಆತನನ್ನೇ ಅಪಹರಿಸಿದ ಪತ್ನಿ
ಅಪಹರಣImage Credit source: Lawctopus
ನಯನಾ ರಾಜೀವ್
|

Updated on: Sep 30, 2024 | 2:40 PM

Share

ವಿಚ್ಛೇದನ ಪಡೆದಿದ್ದ ಮಹಿಳೆ ಮಾಜಿ ಪತಿಯಿಂದ ಹೆಚ್ಚಿನ ಪರಿಹಾರ ಹಣ ಪಡೆಯಲು ಆತನನ್ನೇ ಅಪಹರಿಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಪತಿ ಉಲ್ಲಾಸ್​ನಗರ ಪ್ರದೇಶದ ಪಂಜಾಬಿ ಕಾಲೊನಿಯ ನಿವಾಸಿಯಾಗಿದ್ದಾರೆ. ಜೂನ್ 20ರಂದು ಅಂಗಡಿಯಿಂದ ಸಾಮಾನುಗಳನ್ನು ಕೊಳ್ಳಲು ಹೊರಬಂದಾಗ ಗುಂಪೊಂದು ಅವರನ್ನು ಅಪಹರಿಸಿತ್ತು.

ವಿಚ್ಛೇದಿತ ಪತ್ನಿಯ ಒತ್ತಾಯದ ಮೇರೆಗೆ ವ್ಯಕ್ತಿಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ವಿಚ್ಛೇದಿತ ಪತ್ನಿಗೆ ನೀಡುವ ಪರಿಹಾರ ಮೊತ್ತವನ್ನು 15 ಲಕ್ಷದಿಂದ 20 ಲಕ್ಷ ರೂ.ಗೆ ಹೆಚ್ಚಿಸುವಂತೆ ಗ್ಯಾಂಗ್ ಬೆದರಿಕೆ ಹಾಕಿತ್ತು.

ಆ ವ್ಯಕ್ತಿ ಅಷ್ಟು ಹಣ ಕೊಡಲು ಸಾಧ್ಯವಿಲ್ಲ ಎಂದು ಹೇಳಿದಾಗ ಗ್ಯಾಂಗ್ ಅವರನ್ನು ಅಪಹರಿಸಿ ಏಕಾಂತ ಸ್ಥಳಕ್ಕೆ ಕರೆದೊಯ್ದಿತ್ತು ಎಂದು ಉಲ್ಲಾಸ್‌ನಗರದ ಸೆಂಟ್ರಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವ್ಯಕ್ತಿಯನ್ನು ಸೆಪ್ಟೆಂಬರ್ 28 ರವರೆಗೆ ಪಾಳುಬಿದ್ದ ಮನೆಯೊಂದರಲ್ಲಿ ಬಂಧಿಯಾಗಿರಿಸಲಾಯಿತು ಮತ್ತು ಅವನು ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಲು ಇನ್ನಿಬ್ಬರನ್ನು ಉಸ್ತುವಾರಿ ವಹಿಸಲಾಯಿತು. ತನ್ನ ಪತ್ನಿಗೆ ಪರಿಹಾರ ಮೊತ್ತವನ್ನು ಹೆಚ್ಚಿಗೆ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು.

ಮತ್ತಷ್ಟು ಓದಿ: ಮಗುವಾಗಿದ್ದಾಗ ಅಪಹರಣ, ತನ್ನ ಪ್ರಕರಣದ ಆರೋಪಿಗಳಿಗೆ 17 ವರ್ಷಗಳ ಬಳಿಕ ಶಿಕ್ಷೆ ಕೊಡಿಸಿದ ವಕೀಲ

ಹೇಗೋ ಅವರು ಅಪಹರಣಕಾರರ ಬಿಗಿಮುಷ್ಟಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ವ್ಯಕ್ತಿಯ ದೂರಿನ ಆಧಾರದ ಮೇಲೆ ಥಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪತ್ನಿ, ಆಕೆಯ ಸಹೋದರ ಮತ್ತು ಇತರ ನಾಲ್ವರು ಸಂಬಂಧಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ