ಮಹಾರಾಷ್ಟ್ರ: ಮದುವೆಗೆ ಒಪ್ಪದಿದ್ದಕ್ಕೆ ಪ್ರಿಯಕರನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದ ಯುವತಿ
ಗೆಳೆಯ ಮದುವೆಗೆ ಒಪ್ಪಿಲ್ಲ ಎಂದು ಯುವತಿ ಆತನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇಷ್ಟು ವರ್ಷಗಳ ಕಾಲ ಪ್ರೀತಿಸಿದ್ದ ಪ್ರಿಯಕರ ತನಗೆ ಸಿಗುವುದಿಲ್ಲ ಎಂದು ಕೋಪಗೊಂಡ ಯುವತಿ ಆತನ ಮೇಲೆ ಹಲ್ಲೆ ನಡೆಸಿದ್ದಾಳೆ.

ಮದುವೆಗೆ ಒಪ್ಪದಿದ್ದಕ್ಕೆ ಯುವತಿಯೊಬ್ಬಳು ಪ್ರಿಯಕರನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆಗಸ್ಟ್ 16 ರಂದು ಭಿವಂಡಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪದ್ಮಾ ನಗರ ಪ್ರದೇಶದ ತನ್ನ ಮನೆಯಲ್ಲಿ ಮಹಿಳೆ ತನ್ನ 31 ವರ್ಷದ ಗೆಳೆಯನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾಳೆ. ತನ್ನನ್ನು ಮದುವೆಯಾಗಲು ನಿರಾಕರಿಸಿದ ನಂತರ ಆಕೆ ವ್ಯಕ್ತಿಯ ಖಾಸಗಿ ಅಂಗಗಳಿಗೆ ಇರಿದು ಗಾಯಗೊಳಿಸಿದ್ದಾಳೆ ಎಂದು ಅವರು ಹೇಳಿದರು.
ಸಂತ್ರಸ್ತೆ ಮನೆಯಿಂದ ಹೊರಗೆ ಓಡಿ ಆಸ್ಪತ್ರೆಗೆ ದಾಖಲಾದರು. ನಂತರ ಅವರು ಪೊಲೀಸ್ ದೂರು ದಾಖಲಿಸಿದರು, ಅದರ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 118 (1) (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು ಅಥವಾ ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಗಂಭೀರವಾದ ಗಾಯವನ್ನು ಉಂಟುಮಾಡುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಯಾವುದೇ ಬಂಧನವಾಗಿಲ್ಲ, ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!
ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿತ್ತು. ಇಲ್ಲಿ ಮಹಿಳೆಯೊಬ್ಬರು ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಪತಿಯ ಖಾಸಗಿ ಅಂಗಗಳನ್ನು ಬ್ಲೇಡ್ ನಿಂದ ಕತ್ತರಿಸಿದ್ದರು. ವಾಸ್ತವವಾಗಿ, ಪತಿ ಯಾವಾಗಲೂ ತನ್ನ ಹೆಂಡತಿ ಬೇರೊಬ್ಬರೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಿಸುತ್ತಿದ್ದ ಎನ್ನಲಾಗಿದೆ.
ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು ಟೀ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನನ್ನು ಹೆದರಿಸಿ, ಬೆದರಿಸಿ ಮನೆಯಲ್ಲಿ ಇರಿಸಿಕೊಂಡಿದ್ದ ಮಂಗಳಮುಖಿಯರು ಪ್ರಜ್ಞೆ ತಪ್ಪಿಸಿ ಆತನ ಮರ್ಮಾಂಗ ಕತ್ತರಿಸಿ, ಲಿಂಗ ಪರಿವರ್ತಿಸಿದ್ದಾರೆ. ಸುಲಭವಾಗಿ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಇಂತಹ ಕೃತ್ಯ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಪುಲಿಕೇಶಿನಗರ ಠಾಣಾ ವ್ಯಾಪ್ತಿಯ ಫ್ರೆಜರ್ ಟೌನ್ ನಲ್ಲಿ 18 ವರ್ಷದ ಯುವಕನನ್ನ ಐವರು ಮಂಗಳ ಮುಖಿಯರ ಅಟ್ಟಹಾಸ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಬಲವಂತವಾಗಿ ಹುಡುಗನೊಬ್ಬನಿಗೆ ಲಿಂಗ ಪರಿವರ್ತನೆ ಮಾಡಿಸಿರುವ ಆರೋಪ ಕೇಳಿ ಬಂದಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




