ನಾಗ್ಪುರದ ಕಾರ್ಖಾನೆಯಲ್ಲಿ ಸ್ಫೋಟ, 9 ಮಂದಿ ಸಾವು

ಮಹಾರಾಷ್ಟ್ರದ ನಾಗ್ಪುರದ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಸುಮಾರು 9.30 ಕ್ಕೆ ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ನಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ನಾಗ್ಪುರದ ಕಾರ್ಖಾನೆಯಲ್ಲಿ ಸ್ಫೋಟ, 9 ಮಂದಿ ಸಾವು
ಸ್ಫೋಟ
Image Credit source: India Today
Updated By: ನಯನಾ ರಾಜೀವ್

Updated on: Dec 17, 2023 | 12:39 PM

ಮಹಾರಾಷ್ಟ್ರದ ನಾಗ್ಪುರದ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಸುಮಾರು 9.30 ಕ್ಕೆ ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ನಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಕಲ್ಲಿದ್ದಲು ಸ್ಫೋಟಕ್ಕಾಗಿ ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಂಪನಿಯು ದೇಶದ ರಕ್ಷಣಾ ಇಲಾಖೆಗೆ ಸ್ಫೋಟಕಗಳು ಮತ್ತು ಇತರ ರಕ್ಷಣಾ ಸಾಧನಗಳ ಪೂರೈಕೆಯೊಂದಿಗೆ ವ್ಯವಹರಿಸುತ್ತದೆ.

ಮಾಹಿತಿ ಅಪ್​ಡೇಟ್​ ಆಗಲಿದೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:48 am, Sun, 17 December 23