ಮಹಾತ್ಮ ಗಾಂಧಿ ಪುಣ್ಯತಿಥಿ: ವೈಯಕ್ತಿಕ ಡೈರಿಯಲ್ಲಿ ಗಾಂಧಿ ಬಗ್ಗೆ ಪ್ರಧಾನಿ ಮೋದಿ ಬರೆದಿರುವುದೇನು?

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಪುಣ್ಯತಿಥಿ. ಪ್ರಧಾನಿ ನರೇಂದ್ರ ಮೋದಿ(Narendra Modi) ಗಾಂಧಿಯವರ ಬಗೆಗಿನ ಸಾಕಷ್ಟು ಪುಸ್ತಕಗಳನ್ನು ಓದಿದ್ದಲ್ಲದೇ, ಕೆಲವು ವಿಚಾರಗಳನ್ನು ತಮ್ಮ ವೈಯಕ್ತಿಕ ದಿನಚರಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಅದರ ಕೆಲವು ಸಾಲುಗಳನ್ನು  ಮೋದಿ ಆರ್ವೈವ್ಸ್​ ಹಂಚಿಕೊಂಡಿದೆ. ಜನವರಿ 30, 1948 ರಂದು, ಮಹಾತ್ಮ ಗಾಂಧಿಯವರನ್ನು ನಾಥೂರಾಂ ಗೋಡ್ಸೆ ಹತ್ಯೆ ಮಾಡಿದ್ದರು.

ಮಹಾತ್ಮ ಗಾಂಧಿ ಪುಣ್ಯತಿಥಿ: ವೈಯಕ್ತಿಕ ಡೈರಿಯಲ್ಲಿ ಗಾಂಧಿ ಬಗ್ಗೆ ಪ್ರಧಾನಿ ಮೋದಿ ಬರೆದಿರುವುದೇನು?
ನರೇಂದ್ರ ಮೋದಿImage Credit source: NDTV
Follow us
ನಯನಾ ರಾಜೀವ್
|

Updated on: Jan 30, 2024 | 10:56 AM

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಪುಣ್ಯತಿಥಿ. ಪ್ರಧಾನಿ ನರೇಂದ್ರ ಮೋದಿ(Narendra Modi) ಗಾಂಧಿಯವರ ಬಗೆಗಿನ ಸಾಕಷ್ಟು ಪುಸ್ತಕಗಳನ್ನು ಓದಿದ್ದಲ್ಲದೇ, ಕೆಲವು ವಿಚಾರಗಳನ್ನು ತಮ್ಮ ವೈಯಕ್ತಿಕ ದಿನಚರಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಅದರ ಕೆಲವು ಸಾಲುಗಳನ್ನು  ಮೋದಿ ಆರ್ವೈವ್ಸ್​ ಹಂಚಿಕೊಂಡಿದೆ. ಜನವರಿ 30, 1948 ರಂದು, ಮಹಾತ್ಮ ಗಾಂಧಿಯವರನ್ನು ನಾಥೂರಾಂ ಗೋಡ್ಸೆ ಹತ್ಯೆ ಮಾಡಿದ್ದರು.

ಮಹಾತ್ಮ ಗಾಂಧಿಯವರು ಭಾರತದ ಸ್ವಾತಂತ್ರ್ಯ ಚಳವಳಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ತಮ್ಮ   ದೇಶವಾಸಿಗಳನ್ನು ಒಟ್ಟುಗೂಡಿಸಿದರು ಮತ್ತು ಬ್ರಿಟಿಷರ ವಿರುದ್ಧ ಚಳವಳಿಯನ್ನು ಪ್ರಾರಂಭಿಸಿದರು. ವಿದೇಶಿ ಶಕ್ತಿಯು ಭಾರತವನ್ನು ಸ್ವತಂತ್ರಗೊಳಿಸಬೇಕಾಯಿತು. ಅನೇಕ ನಾಯಕರು ಮಹಾತ್ಮ ಗಾಂಧಿಯವರ ಜೀವನದಿಂದ ಸ್ಫೂರ್ತಿ ಪಡೆದಿದ್ದಾರೆ. ಅವರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಒಬ್ಬರು.

ಪ್ರಧಾನಿ ಮೋದಿ ತಮ್ಮ ಭಾಷಣಗಳಲ್ಲಿ ಮಹಾತ್ಮಾ ಗಾಂಧಿಯವರ ಬಗ್ಗೆ ನಿರಂತರವಾಗಿ ಮಾತನಾಡುತ್ತಾರೆ. ಅವರ ಜೀವನದ ಉದಾಹರಣೆಗಳನ್ನು ನೀಡುತ್ತಾರೆ. ಬಡವರ ಅಭ್ಯುದಯಕ್ಕಾಗಿ ಮಹಾತ್ಮ ಗಾಂಧೀಜಿಯವರ ಚಿಂತನೆಗಳನ್ನು ಮೋದಿ ಕೂಡ ಅನುಸರಿಸುತ್ತಾರೆ. ಜತೆಗೆ ಸ್ವಚ್ಛತಾ ಅಭಿಯಾನವೂ ಒಂದು.

ಮತ್ತಷ್ಟು ಓದಿ:

ಮಹಾತ್ಮ ಗಾಂಧಿಯವರ ವಿಚಾರಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಕೆಲಸವನ್ನು ಮೋದಿ ಈಗಾಗಲೇ ಮಾಡುತ್ತಿದ್ದಾರೆ. ಮೋದಿ ಅವರು ಮಹಾತ್ಮ ಗಾಂಧಿಯವರ ಬಗ್ಗೆ ಸಾಕಷ್ಟು ಓದಿದ್ದಾರೆ ಮತ್ತು ಅವರು ತಮ್ಮ ವೈಯಕ್ತಿಕ ದಿನಚರಿಯಲ್ಲಿ ಮಹಾತ್ಮ ಗಾಂಧಿಯವರ ಆಲೋಚನೆಗಳನ್ನು ಬರೆಯುತ್ತಿದ್ದರು.

ಮೋದಿಯವರ ದಿನಚರಿಯ ಪುಟಗಳು ಅವರು ಮಹಾತ್ಮ ಗಾಂಧಿಯವರ ಜೀವನದಿಂದ ಪ್ರೀತಿ ಮತ್ತು ಸಹನೆಯನ್ನು ಕಲಿತಿದ್ದಾರೆ ಎಂದು ತೋರಿಸುತ್ತದೆ. ಮೋದಿಯವರು ತಮ್ಮ ಜೀವನ ಮತ್ತು ಆಡಳಿತದ ಮೂಲ ಮಂತ್ರವನ್ನಾಗಿಸಿಕೊಂಡಿರುವ ಮಹಾತ್ಮ ಗಾಂಧಿಯವರ ಚಿಂತನೆಗಳನ್ನು ನೋಡಿ.

-ರಕ್ತ ಚೆಲ್ಲಿದರೆ ಅದು ನಮ್ಮದೇ ಆಗಿರಲಿ ಕೊಲ್ಲದೆ ಸಾಯುವ ಪ್ರಶಾಂತ ಗುಣವನ್ನು ಬೆಳಸಿಕೊಳ್ಳೋಣ. -ಮನುಷ್ಯನ ಅಗತ್ಯಕ್ಕೆ ಜಗತ್ತಿನಲ್ಲಿ ಸಾಕಷ್ಟಿದೆ ಆದರೆ ದುರಾಸೆಗಲ್ಲ -ಹೇಡಿತನ, ದೌರ್ಬಲ್ಯಕ್ಕಿಲ್ಲಿ ಜಾಗವಿಲ್ಲ, ಹಿಂಸಾತ್ಮಕ ಮನುಷ್ಯನೂ ಒಂದು ದಿನ ಅಂಹಿಸಾ ಪ್ರವೃತ್ತಿ ಬೆಳೆಸಿಕೊಳ್ಳುತ್ತಾನೆ ಎಂದು ಬರೆದಿದ್ದಾರೆ.

ಮಹಾತ್ಮ ಗಾಂಧಿಯವರ ಚಿಂತನೆಯಂತೆ 2014ರಲ್ಲಿ ಸರ್ಕಾರ ರಚಿಸಿದ ಮೋದಿ ಬಡವರ ಕಲ್ಯಾಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದರು. ಎಲ್ಲರಿಗೂ ಬ್ಯಾಂಕ್ ಗಳಲ್ಲಿ ಜನ್ ಧನ್ ಖಾತೆ ತೆರೆಯಲು ನಿರ್ಧರಿಸಿದರು. ಬಡವರಿಗೆ ಕಡಿಮೆ ದರದಲ್ಲಿ ವಸತಿ ಮತ್ತು ಅಡುಗೆ ಅನಿಲ ನೀಡಲು ನಿರ್ಧರಿಸಲಾಗಿದೆ. ಕೊರೊನಾ ಅವಧಿಯಲ್ಲಿ ಯಾವುದೇ ವ್ಯಕ್ತಿ ಹಸಿವಿನಿಂದ ಇರಬಾರದು ಎಂದು ಖಚಿತಪಡಿಸಿಕೊಳ್ಳಲು ಮೋದಿ ಉಚಿತ ಆಹಾರ ಧಾನ್ಯಗಳ ಯೋಜನೆಯನ್ನು ಪ್ರಾರಂಭಿಸಿದರು ಮತ್ತು ಈಗ ಅದನ್ನು ಮತ್ತೆ 5 ವರ್ಷಗಳವರೆಗೆ ವಿಸ್ತರಿಸಿದ್ದಾರೆ.

ಒಟ್ಟಿನಲ್ಲಿ ಮಹಾತ್ಮಾ ಗಾಂಧೀಜಿಯವರ ಬಡವರ ಬಗೆಗಿನ ಭಾವನೆಗಳನ್ನು ನೆಲಕ್ಕೆ ತರುವ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ನಾನು ಪೂಜ್ಯ ಬಾಪು ಅವರಿಗೆ ಅವರ ಪುಣ್ಯ ತಿಥಿಯಂದು ಗೌರವ ಸಲ್ಲಿಸುತ್ತೇನೆ. ನಮ್ಮ ರಾಷ್ಟ್ರಕ್ಕಾಗಿ ಹುತಾತ್ಮರಾದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ