AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಹೋರಾಟಕ್ಕೆ ’ಮಹಾತ್ಮ‘ ಬಲ; ರಾಕೇಶ್ ಟಿಕಾಯತ್ ಭೇಟಿ ಮಾಡಿದ ಮಹಾತ್ಮಾ ಗಾಂಧಿ ಮೊಮ್ಮಗಳು

ಮೊದಲ ಸ್ವಾತಂತ್ರ್ಯ ಸಂಗ್ರಾಮವೂ ಉತ್ತರ ಪ್ರದೇಶದ ಮೀರತ್​ನಿಂದಲೇ ಆರಂಭವಾಗಿತ್ತು ಎಂದು ಮಹಾತ್ಮಾ ಗಾಂಧೀಜಿಯವರ ಮೊಮ್ಮಗಳು 84 ವರ್ಷದ ತಾರಾ ಗಾಂಧಿ ಭಟ್ಟಾಚರ್ಜಿ ಸ್ಮರಿಸಿಕೊಂಡರು..

ರೈತ ಹೋರಾಟಕ್ಕೆ ’ಮಹಾತ್ಮ‘ ಬಲ; ರಾಕೇಶ್ ಟಿಕಾಯತ್ ಭೇಟಿ ಮಾಡಿದ ಮಹಾತ್ಮಾ ಗಾಂಧಿ ಮೊಮ್ಮಗಳು
ರಾಜಕೀಯ ಉದ್ದೇಶವಿಲ್ಲದೇ ರೈತರ ಪ್ರತಿಭಟನೆಯನ್ನು ಬೆಂಬಲಿಸುವುದಾಗಿ ಮಹಾತ್ಮಾ ಗಾಂಧಿ ಮೊಮ್ಮಗಳು ತಾರಾ ಗಾಂಧಿ ಭಟ್ಟಾಚರ್ಜಿ ಹೇಳಿದ್ದಾಗಿ ಭಾರತೀಯ ಕಿಸಾನ್ ಯೂನಿಯನ್​ ಮುಖ್ಯಸ್ಥ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.
guruganesh bhat
| Edited By: |

Updated on: Feb 14, 2021 | 2:58 PM

Share

ದೆಹಲಿ: ಕಳೆದ 81 ದಿನಗಳಿಂದ ನಡೆಯುತ್ತಿರುವ ರೈತ ಹೋರಾಟಕ್ಕೆ ಇದೀಗ ‘ಮಹಾತ್ಮ’ ಬಲ ಬಂದಿದೆ. ಮಹಾತ್ಮಾ ಗಾಂಧೀಜಿಯವರ ಮೊಮ್ಮಗಳು 84 ವರ್ಷದ ತಾರಾ ಗಾಂಧಿ ಭಟ್ಟಾಚರ್ಜಿ (Mahatma Gandhis Granddaughter Tara Gandhi Bhattacharjee) ದೆಹಲಿಯ ಘಾಜಿಪುರ ಗಡಿ ಭಾಗದಲ್ಲಿ ರೈತ ಹೋರಾಟಗಾರರನ್ನು ಭೇಟಿ ಮಾಡಿ ಬೆಂಬಲ ಘೋಷಿಸಿದ್ದಾರೆ. ರಾಷ್ಟ್ರೀಯ ಗಾಂಧಿ ಮ್ಯೂಸಿಯಂನ ಅಧ್ಯಕ್ಷರೂ ಆಗಿರುವ ಅವರು, ಕೇಂದ್ರ ಸರ್ಕಾರಕ್ಕೆ ರೈತ ಸಮುದಾಯ ಹಿತ ಕಾಪಾಡುವಂತೆ ಆಗ್ರಹಿಸಿದ್ದಾರೆ.

ರಾಜಕೀಯ ಉದ್ದೇಶವಿಲ್ಲದೇ ರೈತರ ಪ್ರತಿಭಟನೆಯನ್ನು ಬೆಂಬಲಿಸುವುದಾಗಿ ಮಹಾತ್ಮಾ ಗಾಂಧಿ ಮೊಮ್ಮಗಳು ತಾರಾ ಗಾಂಧಿ ಭಟ್ಟಾಚರ್ಜಿ ಹೇಳಿದ್ದಾಗಿ ಭಾರತೀಯ ಕಿಸಾನ್ ಯೂನಿಯನ್​ ಮುಖ್ಯಸ್ಥ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ. ರೈತರಿಂದಲೇ ದೇಶದ ಇತರ ಜನರು ನೆಮ್ಮದಿಯಿಂದ ಬದುಕುತ್ತಿದ್ದು, ಅವರ ಹಿತರಕ್ಷಣೆ ದೇಶದ ಜವಾಬ್ದಾರಿಯಾಗಿದೆ ಎಂದು ತಾರಾ ಗಾಂಧಿ ಭಟ್ಟಾಚರ್ಜಿ ಅಭಿಪ್ರಾಯ ವ್ಯಕ್ತಪಡಿದ್ದಾರೆ. 1857ರಲ್ಲಿ ನಡೆದ ಮೊದಲ ಸ್ವಾತಂತ್ರ್ಯ ಸಂಗ್ರಾಮವೂ ಉತ್ತರ ಪ್ರದೇಶದ ಮೀರತ್​ನಿಂದಲೇ ಆರಂಭವಾಗಿತ್ತು ಎಂದು ಅವರು ಸ್ಮರಿಸಿಕೊಂಡರು ಎಂದು ಸಹ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಅವರು ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ರಾಮಚಂದ್ರ ರಹಿ, ನಿರ್ದೇಶಕ ಸಂಜಯ್ ಸಿಂಘಾ, ಆಲ್ ಇಂಡಿಯಾ ಸರ್ವ ಸೇವಾ ಸಂಘದ ಆಡಳಿತ ಮಂಡಳಿಯ ಅಶೋಕ್ ಸರನ್ ಮತ್ತು ರಾಷ್ಟ್ರೀಯ ಗಾಂಧಿ ಮ್ಯೂಸಿಯಂನ ನಿರ್ದೇಶಕ ಎ.ಅಣ್ಣಾಮಲೈ ಅವರ ಜತೆಗೆ ಗಾಜಿಪುರ ಗಡಿಯಲ್ಲಿ ಪ್ರತಿಭಟನಾ ನಿರತ ರಾಕೇಶ್ ಟಿಕಾಯತ್ ಮತ್ತು ಸಂಗಡಿಗರನ್ನು ಭೇಟಿಯಾಗಿದ್ದಾರೆ.

ಕಳೆದ 81 ದಿನಗಳಿಂದ ನಿರಂತರವಾಗಿ ದೆಹಲಿಯ ಗಡಿ ಪ್ರದೇಶಗಳಲ್ಲಿ ನಡೆಯುತ್ತಿರುವ ರೈತ ಹೋರಾಟವು ಹಲವು ತಿರುವುಗಳನ್ನು ಪಡೆದುಕೊಂಡಿತ್ತು. ಗಣರಾಜ್ಯೋತ್ಸವ ದಿನದಂದು ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ಅನ್ಯ ಧ್ವಜ ಹಾರಿಸಿ, ಪ್ರತಿಭಟನೆ ಗಲಭೆಯ ಸ್ವರೂಪ ಪಡೆದುಕೊಂಡಿದ್ದಲ್ಲದೇ ಹಲವು ರೈತರು, ಪೊಲೀಸರು ಗಾಯಗೊಂಡಿದ್ದರು. ಇದನ್ನೂ ಓದಿ: Deep Sidhu: ಬಂಧಿತ ದೀಪ್​ ಸಿಧು, ಇಕ್ಬಾಲ್​ ಸಿಂಗ್​​ರನ್ನು ಕೆಂಪುಕೋಟೆಗೆ ಕರೆದುಕೊಂಡು ಹೋದ ದೆಹಲಿ ಪೊಲೀಸರು

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್