Arun Gandhi Death: ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್​ ಗಾಂಧಿ ನಿಧನ

ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್​ ಗಾಂಧಿ(89) ಅವರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಿಧನರಾಗಿದ್ದಾರೆ.

Arun Gandhi Death: ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್​ ಗಾಂಧಿ ನಿಧನ
ಅರುಣ್ ಗಾಂಧಿ
Image Credit source: Amrujala

Updated on: May 02, 2023 | 10:46 AM

ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್​ ಗಾಂಧಿ(89) ಅವರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಿಧನರಾಗಿದ್ದಾರೆ. ತುಂಬಾ ದಿನಗಳಿಂದ ಅವರಿಗೆ ಅನಾರೋಗ್ಯ ಕಾಡುತ್ತಿತ್ತು ಎನ್ನಲಾಗಿದೆ, ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದರು. ಅವರ ಅಂತ್ಯಕ್ರಿಯೆ ಕೊಲ್ಹಾಪುರದಲ್ಲಿ ನೆರವೇರಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ. ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಜನಿಸಿದ ಅರುಣ್ ಗಾಂಧಿ, ಕಾರ್ಯಕರ್ತನಾಗಿ ತಮ್ಮ ಅಜ್ಜನ ಹೆಜ್ಜೆಗಳನ್ನು ಅನುಸರಿಸಿದರು.

ಅರುಣ್ ಗಾಂಧಿ ಕೂಡ ಕೆಲವು ಪುಸ್ತಕಗಳನ್ನು ಬರೆದಿದ್ದಾರೆ. ಅವುಗಳಲ್ಲಿ ದಿ ಗಿಫ್ಟ್​ ಆಫ್ ಆ್ಯಂಗರ್ ಆಂಡ್ ಅದರ್ ಲೆಸ್ಸನ್ಸ್​ ಫ್ರಂ ಮೈ ಗ್ರ್ಯಾಂಡ್​ಫಾದರ್ ಹಮಾತ್ಮ ಗಾಂಧಿ ಪ್ರಮುಖವಾದವು.

ಅರುಣ್ ಗಾಂಧಿ 1987ರಲ್ಲಿ ಕುಟುಂಬ ಸಮೇತ ಅಮೆರಿಕದಲ್ಲಿ ನೆಲೆಸಿದ್ದರು. ಇಲ್ಲಿ ಅವರು ಟೆನ್ನೆಸ್ಸೀಯ ಮೆಂಫಿಸ್‌ನಲ್ಲಿ ತಮ್ಮ ಜೀವನದ ಹಲವು ವರ್ಷಗಳನ್ನು ಕಳೆದರು. ಇಲ್ಲಿ ಅವರು ಕ್ರಿಶ್ಚಿಯನ್ ಬ್ರದರ್ಸ್ ವಿಶ್ವವಿದ್ಯಾಲಯದಲ್ಲಿ ಅಹಿಂಸೆಗೆ ಸಂಬಂಧಿಸಿದ ಸಂಸ್ಥೆಯನ್ನು ಸ್ಥಾಪಿಸಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:34 am, Tue, 2 May 23