AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾತ್ಮಾ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

ತುಷಾರ್ ಗಾಂಧಿ ಅವರು ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥವಾಗಿ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದಾಗ ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮಹಾತ್ಮಾ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ
ತುಷಾರ್ ಗಾಂಧಿ
ಅಕ್ಷಯ್​ ಪಲ್ಲಮಜಲು​​
|

Updated on: Aug 09, 2023 | 10:25 AM

Share

ಮುಂಬೈ, ಆ.9: ಮಹಾತ್ಮಾ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ (Tushar Gandhi) ಅವರು ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥವಾಗಿ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದಾಗ ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ತುಷಾರ್ ಗಾಂಧಿ ಅವರು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು,​​”ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ನಾನು ಆಗಸ್ಟ್ 9ರಂದು ನಡೆದ ಕ್ವಿಟ್ ಇಂಡಿಯಾ ದಿನದ ನೆನಪಿಗಾಗಿ ಕ್ರಾಂತಿ ಮೈದಾನ ಮನೆಯಿಂದ ಹೊರಟಾಗ ಸಾಂತಾಕ್ರೂಜ್ ಪೊಲೀಸ್ ಬಂಧಿಸಿದ್ದಾರೆ. ಈ ದಿನದಂದೇ ನನ್ನನ್ನೂ ಬಂಧಿಸಿರುವುದು ನನಗೆ ಹೆಮ್ಮೆ ಇದೆ ಎಂದು ಟ್ವೀಟ್​​ ಮಾಡಿದ್ದಾರೆ.

ಪೊಲೀಸ ವರದಿ ಪ್ರಕಾರ ಕ್ರಾಂತಿ ಮೈದಾನದಲ್ಲಿ ಮೌನ ಮೆರವಣಿಗೆ ಮಾಡಲು ಅವಕಾಶ ಇಲ್ಲ, ಆದರೆ ಈ ಯೋಜನೆಯನ್ನು ಅವರು ಹಾಕಿಕೊಂಡಿದ್ದಾರೆ. ಇದು ‘ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆ ಎಂದು ಹೇಳಿದ್ದಾರೆ. ಇನ್ನು ತುಷಾರ್ ಗಾಂಧಿ, ಒಂದು ವೇಳೆ ನನಗೆ ಠಾಣೆಯಿಂದ ಬಿಡುಗಡೆ ನೀಡಿದರೆ ನಾನು ಖಂಡಿತ ಕ್ರಾಂತಿ ಮೈದಾನಕ್ಕೆ ಹೋಗುತ್ತೇನೆ. ಈ ದಿನವನ್ನು ಸ್ಮರಿಸುವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಇಂದೋರ್ ತಲುಪುತ್ತಿದ್ದಂತೆ ಬಾಂಬ್ ಸ್ಫೋಟಿಸುವುದಾಗಿ ರಾಹುಲ್ ಗಾಂಧಿಗೆ ಬೆದರಿಕೆ ಪತ್ರ

ಈ ಬಗ್ಗೆ ಮಾತನಾಡಿದ ಮಹಾತ್ಮಾ ಗಾಂಧಿಯವರ ಮತ್ತೊಬ್ಬ ಮರಿ ಮೊಮ್ಮಗ ಅರುಣ್ ಮಣಿಲಾಲ್ ಅವರು, ಕ್ವಿಟ್ ಇಂಡಿಯಾ ಚಳುವಳಿಯ ಆರಂಭದ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನವನ್ನು ಆಚರಿಸಲಾಗುತ್ತದೆ. ಬ್ರಿಟಿಷರು ಭಾರತವನ್ನು ತೊರೆಯುವಂತೆ ಒತ್ತಾಯಿಸುವ ನಿರ್ಣಯವನ್ನು ಕಾಂಗ್ರೆಸ್ ಈ ದಿನ ಅಂಗೀಕರಿಸಿತು. ಇದರಲ್ಲಿ ಭಾಗವಹಿಸುವುದು ಅಥವಾ ಸ್ಮರಿಸುವುದು ಯಾವ ತಪ್ಪು ಇಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ