Ticket Concession : ಮಹಾರಾಷ್ಟ್ರದಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್‌ಗಳ ಟಿಕೆಟ್ ದರದಲ್ಲಿ ಶೇ.50ರಷ್ಟು ರಿಯಾಯಿತಿ
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ದೇವೇಂದ್ರ ಫಡ್ನವಿಸ್ ಅವರು ರಾಜ್ಯ ಬಜೆಟ್‌ನಲ್ಲಿ ಹಲವಾರು ಘೋಷಣೆಗಳನ್ನು ಮಾಡಿದ್ದರು.
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ದೇವೇಂದ್ರ ಫಡ್ನವಿಸ್ ಅವರು ರಾಜ್ಯ ಬಜೆಟ್‌ನಲ್ಲಿ ಹಲವಾರು ಘೋಷಣೆಗಳನ್ನು ಮಾಡಿದ್ದರು. ಇದರಲ್ಲಿ ಸರ್ಕಾರಿ ಬಸ್‌ಗಳ ಮೂಲಕ ಪ್ರಯಾಣಿಸುವ ಮಹಿಳೆಯರಿಗೆ ಟಿಕೆಟ್ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಘೋಷಿಸಲಾಗಿತ್ತು. ಇಂದಿನಿಂದ ಅದು ಜಾರಿಗೆ ಬರಲಿದ್ದು, ಎಸ್‌ಟಿ ಕಾರ್ಪೊರೇಷನ್ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಟಿಕೆಟ್ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗುವುದು. ಎಸ್ಟಿ ನಿಗಮದ ಈ ಯೋಜನೆಯನ್ನು ಮಹಿಳಾ ಸಮ್ಮಾನ್ ಯೋಜನೆ ಎಂದು ಕರೆಯಲಾಗುತ್ತದೆ. ಇಂದಿನಿಂದ ಮಹಾರಾಷ್ಟ್ರದ ಮಹಿಳೆಯರಿಗೆ ರಾಜ್ಯ ಸಾರಿಗೆ (ಎಸ್‌ಟಿ) ನಿಗಮವು ನಡೆಸುವ ಎಲ್ಲಾ ರೀತಿಯ ಬಸ್‌ಗಳ ಟಿಕೆಟ್ ದರದಲ್ಲಿ ಶೇ.50 ರಷ್ಟು ರಿಯಾಯಿತಿ ಸಿಗಲಿದೆ.
2023-24ನೇ ಸಾಲಿನ ರಾಜ್ಯ ಬಜೆಟ್‌ನ ಭಾಗವಾಗಿ ಈ ಘೋಷಣೆ ಮಾಡಲಾಗಿದ್ದು, ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC) ಮಟ್ಟದಲ್ಲಿ ಹೊಸದಾಗಿ ಪರಿಚಯಿಸಲಾದ ಮಹಿಳಾ ಸಮ್ಮಾನ್ ಯೋಜನೆ ಯೋಜನೆಯ ಮೂಲಕ ಇದನ್ನು ಜಾರಿಗೊಳಿಸಲಾಗುವುದು. ಯೋಜನೆಯ ಮರುಪಾವತಿಯನ್ನು ಸರ್ಕಾರದಿಂದ ನಿಗಮಕ್ಕೆ ನೀಡಲಾಗುತ್ತದೆ.
ಮತ್ತಷ್ಟು ಓದಿ: BMTCಯ UPI ಆಧಾರಿತ ಟಿಕೆಟಿಂಗ್ ವ್ಯವಸ್ಥೆಯು ಇನ್ನೂ ಜಾರಿಗೆ ಬಂದಿಲ್ಲ, ಪ್ರಯಾಣಿಕರ ಪರಿಸ್ಥಿತಿ ಯಾರು ಅರ್ಥಮಾಡಿಕೊಳ್ಳತ್ತಿಲ್ಲ
ಎಸ್‌ಟಿ ನಿಗಮವು ಈಗಾಗಲೇ ಸಮಾಜದ ವಿವಿಧ ವರ್ಗಗಳಿಗೆ ಟಿಕೆಟ್ ದರದಲ್ಲಿ ಶೇಕಡಾ 33 ರಿಂದ ಶೇಕಡಾ 100 ರವರೆಗಿನ ರಿಯಾಯಿತಿಗಳನ್ನು ಒದಗಿಸುತ್ತಿದೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ 65 ರಿಂದ 75 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ ಉಚಿತ ಪ್ರಯಾಣ ರಿಯಾಯಿತಿ ಮತ್ತು ಎಲ್ಲಾ ರೀತಿಯ ಎಸ್‌ಟಿ ಬಸ್‌ಗಳಲ್ಲಿ ಶೇಕಡಾ 50 ರಷ್ಟು ರಿಯಾಯಿತಿಯನ್ನು ಸರ್ಕಾರ ಈ ಹಿಂದೆ ಘೋಷಿಸಿತ್ತು. ಈ ರಿಯಾಯಿತಿಗಳಿಗಾಗಿ ನಿಗಮವು ಸರ್ಕಾರದಿಂದ ಮರುಪಾವತಿ ಮೊತ್ತವನ್ನು ಸಹ ಪಡೆಯುತ್ತದೆ.
ಸರ್ಕಾರದ ಈ ಕ್ರಮದಿಂದ ಮಹಿಳೆಯರಿಗೆ ಸಾಕಷ್ಟು ಲಾಭವಾಗಲಿದೆ. ಇದರಿಂದ ದಿನನಿತ್ಯದ ಸಾರ್ವಜನಿಕ ಸಾರಿಗೆಯನ್ನು ಕೆಲಸಕ್ಕೆ ಅಥವಾ ಇತರ ಉದ್ದೇಶಗಳಿಗಾಗಿ ಬಳಸುವ ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಪ್ರಯೋಜನವಾಗಲಿದೆ.
MSRTC 15,000 ಕ್ಕೂ ಹೆಚ್ಚು ಬಸ್‌ಗಳನ್ನು ಹೊಂದಿದೆ ಮತ್ತು ಪ್ರತಿದಿನ 50 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತದೆ. ಇದು ಈಗ ವಿವಿಧ ಸಾಮಾಜಿಕ ಗುಂಪುಗಳಿಗೆ ಟಿಕೆಟ್‌ಗಳ ಮೇಲೆ ಶೇಕಡಾ 33 ರಿಂದ 1005 ರಿಯಾಯಿತಿಗಳನ್ನು ನೀಡುತ್ತಿದೆ.
ಈ ವಿನಾಯಿತಿಯು ಮಹಿಳೆಯರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ವಿಶೇಷವಾಗಿ ಆರ್ಥಿಕವಾಗಿ ದುರ್ಬಲ ವರ್ಗಗಳು, ಸಾಮಾನ್ಯವಾಗಿ ಪ್ರಯಾಣಕ್ಕಾಗಿ ಎಸ್‌ಟಿ ಬಸ್‌ಗಳನ್ನು ಬಳಸುತ್ತಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:28 pm, Fri, 17 March 23