AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahua Moitra: ಸದನದಲ್ಲಿ ಬೆಲೆಯೇರಿಕೆ ಚರ್ಚೆ ವೇಳೆ ತನ್ನ 1.5 ಲಕ್ಷ ರೂ. ಮೌಲ್ಯದ ಬ್ಯಾಗ್ ಬಚ್ಚಿಟ್ಟ ಸಂಸದೆ; ವಿಡಿಯೋ ವೈರಲ್

Viral Video: ಸದನದಲ್ಲಿ ಬೆಲೆ ಏರಿಕೆ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿರುವಾಗ ಟಿಎಂಸಿ ಮಹುವಾ ಮೊಯಿತ್ರಾ ತನ್ನ 1.6 ಲಕ್ಷ ರೂ. ಮೌಲ್ಯದ ಲೂಯಿಸ್ ವಿಟಾನ್ ಬ್ಯಾಗ್ ಅನ್ನು ಮೇಜಿನ ಕೆಳಗೆ ಇಡುತ್ತಿರುವ ವಿಡಿಯೋ ವೈರಲ್ ಆಗಿದೆ.

Mahua Moitra: ಸದನದಲ್ಲಿ ಬೆಲೆಯೇರಿಕೆ ಚರ್ಚೆ ವೇಳೆ ತನ್ನ 1.5 ಲಕ್ಷ ರೂ. ಮೌಲ್ಯದ ಬ್ಯಾಗ್ ಬಚ್ಚಿಟ್ಟ ಸಂಸದೆ; ವಿಡಿಯೋ ವೈರಲ್
ಮಹುವಾ ಮೊಯಿತ್ರಾImage Credit source: Zee News
TV9 Web
| Edited By: |

Updated on:Aug 02, 2022 | 4:12 PM

Share

ನವದೆಹಲಿ: ಲೋಕಸಭೆ ಅಧಿವೇಶನದಲ್ಲಿ ಬೆಲೆ ಏರಿಕೆ ಕುರಿತು ನಡೆಯುತ್ತಿರುವ ಚರ್ಚೆಯ ವೇಳೆ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ತಮ್ಮ ದುಬಾರಿ ಬ್ಯಾಗ್ ಅನ್ನು ಬಚ್ಚಿಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಸದನದಲ್ಲಿ ಬೆಲೆ ಏರಿಕೆ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿರುವಾಗ ಟಿಎಂಸಿ ಮಹುವಾ ಮೊಯಿತ್ರಾ ತನ್ನ 1.6 ಲಕ್ಷ ರೂ. ಮೌಲ್ಯದ ಲೂಯಿಸ್ ವಿಟಾನ್ (Louis Vuitton) ಬ್ಯಾಗ್ ಅನ್ನು ಮೇಜಿನ ಕೆಳಗೆ ಇಡುತ್ತಿರುವ ವಿಡಿಯೋ ವೈರಲ್ ಆಗಿದೆ. ಬೆಲೆ ಏರಿಕೆಯನ್ನು ಟೀಕಿಸುವಾಗ ತನ್ನ ದುಬಾರಿ ಬ್ಯಾಗ್ ಕಾಣಬಾರದು ಎಂದು ಆಕೆ ಈ ರೀತಿ ಮಾಡಿದ್ದಾರೆ ಎಂದು ಚರ್ಚೆಯಾಗುತ್ತಿದೆ.

ತೃಣಮೂಲ ಕಾಂಗ್ರೆಸ್‌ನ ಕಾಕೋಲಿ ಘೋಷ್ ದಸ್ತಿದಾರ್ ಲೋಕಸಭೆಯಲ್ಲಿ ಬೆಲೆಯೇರಿಕೆ ವಿರೋಧಿಸಿ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ವೇಳೆ ಪಕ್ಕದಲ್ಲಿ ಕುಳಿತಿದ್ದ ಮಹುವಾ ಮೊಯಿತ್ರಾ ಬೇಗನೆ ತನ್ನ ಪಕ್ಕದಲ್ಲಿದ್ದ ಲೂಯಿ ವಿಟಾನ್ ಬ್ಯಾಗ್ ಅನ್ನು ಮೇಜಿನ ಕೆಳಗೆ ಇಟ್ಟಿದ್ದಾರೆ.

ಈ ವಿಡಿಯೋವನ್ನು ಅಜಿತ್ ದತ್ತಾ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. “ಬೆಲೆಯೇರಿಕೆ” ವಿಷಯವು ಚರ್ಚೆಯಾಗುತ್ತಿದ್ದಂತೆ ಇವರ ಲೂಯಿ ವಿಟಾನ್ ಬ್ಯಾಗ್ ತಕ್ಷಣ ಮೇಜಿನಡಿ ತೂರಿಕೊಂಡಿದೆ ಎಂದು ಅವರು ಕ್ಯಾಪ್ಷನ್ ನೀಡಿದ್ದಾರೆ.

ಸೋಮವಾರ ಬೆಲೆ ಏರಿಕೆ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ವೇಳೆ ಕಕೋಲಿ ಘೋಷ್ ದಸ್ತಿದಾರ್, ನಾವು ಹಸಿ ತರಕಾರಿಗಳನ್ನು ತಿನ್ನಬೇಕೆಂದು ಸರ್ಕಾರ ಬಯಸುತ್ತಿದೆಯೇ? ಎಂದು ಕೇಳಿದ ಸಂಸದೆ ಹಸಿ ಬದನೆಕಾಯಿ ಕಚ್ಚುವ ಮೂಲಕ ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ಕಳೆದ ಕೆಲವು ತಿಂಗಳಲ್ಲಿ ಎಲ್ ಪಿ ಜಿ ಸಿಲಿಂಡರ್ ಬೆಲೆ ನಾಲ್ಕು ಬಾರಿ ಏರಿಕೆ ಮಾಡಲಾಗಿದೆ. ಸಿಲಿಂಡರ್ ಬೆಲೆ 600ರಿಂದ 1,100ಕ್ಕೇರಿದೆ. ಸಿಲಿಂಡರ್ ದರವನ್ನು ಇಳಿಕೆ ಮಾಡಲೇ ಬೇಕು ಎಂದು ಸಂಸದೆ ಒತ್ತಾಯಿಸಿದ್ದಾರೆ.

Published On - 3:25 pm, Tue, 2 August 22

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ