AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದಾಗ ಭೀಕರ ದುರಂತ: ಟ್ರಕ್‌ಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವು

ಮಧ್ಯಪ್ರದೇಶದ ಮೈಹಾರ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸದಸ್ಯರು ಸಾವನ್ನಪ್ಪಿದ್ದಾರೆ. ಹುಟ್ಟುಹಬ್ಬದ ಪಾರ್ಟಿ ಮುಗಿಸಿ ಮರಳುತ್ತಿದ್ದಾಗ ಎಸ್‌ಯುವಿ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದಾಗ ಭೀಕರ ದುರಂತ: ಟ್ರಕ್‌ಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವು
ಅಪಘಾತ
ನಯನಾ ರಾಜೀವ್
|

Updated on: Jul 07, 2026 | 10:42 AM

Share

ಭೋಪಾಲ್, ಜುಲೈ 07: ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗಿನ ಜಾವ ರಸ್ತೆ ಅಪಘಾತ(Accident)ವೊಂದು ಸಂಭವಿಸಿದೆ. ಚಲಿಸುತ್ತಿದ್ದ ಟ್ರಕ್‌ಗೆ ಎಸ್‌ಯುವಿ (SUV) ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸದಸ್ಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

ಅಪಘಾತ ನಡೆದಿದ್ದು ಹೇಗೆ? ಮೈಹಾರ್ ಜಿಲ್ಲೆಯ ದೇಹತ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-30 ರ ರಿಗ್ರಾ ಗ್ರಾಮದ ಬಳಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಮೃತರಾದವರೆಲ್ಲರೂ ಅಮರಪಟನ್‌ನಲ್ಲಿ ನಡೆದ ಸೋದರ ಸಂಬಂಧಿ ಮನೋಜ್ ಪಟೇಲ್ ಅವರ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸಿ ಮೈಹಾರ್‌ಗೆ ಹಿಂತಿರುಗುತ್ತಿದ್ದರು.

ಅತಿ ವೇಗವಾಗಿ ಬಂದ ಕಾರು ಮುಂಭಾಗದಲ್ಲಿದ್ದ ಟ್ರಕ್‌ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದ ಆರೂ ಜನರು ಟ್ರಕ್‌ನ ಹಿಂಭಾಗದಲ್ಲಿ ಸಿಲುಕಿಕೊಂಡಿದ್ದರು.

ಸ್ಥಳದಲ್ಲೇ ಐವರ ಸಾವು ಮಾಹಿತಿ ತಿಳಿದ ತಕ್ಷಣ ಹೆದ್ದಾರಿ ಗಸ್ತು ತಂಡ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದರು. ಭಾರಿ ಹರಸಾಹಸದ ನಂತರ ಕಾರಿನಲ್ಲಿದ್ದವರನ್ನು ಹೊರತೆಗೆಯಲಾಯಿತಾದರೂ, ಅಷ್ಟರಲ್ಲೇ ಐವರು ಯುವಕರು ಪ್ರಾಣ ಬಿಟ್ಟಿದ್ದರು.

ಮತ್ತಷ್ಟು ಓದಿ: ತುಮಕೂರು: SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತ; ಇಬ್ಬರು ಮಹಿಳಾ ಸಿಬ್ಬಂದಿ ಪೈಕಿ ಓರ್ವರ ಸ್ಥಿತಿ ಗಂಭೀರ

ಮೃತರ ವಿವರ ಮೃತರನ್ನು ಅಂಕುರ್ ಪಟೇಲ್ (40), ಮೃದುಲ್ ಪಟೇಲ್ (32), ವಿಜಯ್ ಪಟೇಲ್ (30), ಹರಿಶಂಕರ್ ಪಟೇಲ್ (25) ಮತ್ತು ಶಿವ ಪಟೇಲ್ (23) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸ್ಥಳೀಯ ಕಾಂಗ್ರೆಸ್ ನಾಯಕ ಮನೀಶ್ ಪಟೇಲ್ ಅವರ ಸಹೋದರರು ಎಂದು ತಿಳಿದುಬಂದಿದೆ.

ಒಬ್ಬರ ಸ್ಥಿತಿ ಗಂಭೀರ ಅಪಘಾತದಲ್ಲಿ ಬದುಕುಳಿದಿರುವ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಅಮರ್‌ಪಟಾನ್ ಸಿವಿಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಸತ್ನಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೈಹಾರ್ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದ್ದು, ಇಡೀ ಗ್ರಾಮದಲ್ಲಿ ಸದ್ಯ ಶೋಕದ ಅಲೆ ಆವರಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಕೃತಿಯ ಮಡಿಲಲ್ಲಿ ಅಕುಲ್ ಬಾಲಾಜಿ ಕನಸಿನ ಮನೆ; ಎಷ್ಟು ಸುಂದರವಾಗಿದೆ ನೋಡಿ
ಪ್ರಕೃತಿಯ ಮಡಿಲಲ್ಲಿ ಅಕುಲ್ ಬಾಲಾಜಿ ಕನಸಿನ ಮನೆ; ಎಷ್ಟು ಸುಂದರವಾಗಿದೆ ನೋಡಿ
ಚಾರ್ಮಾಡಿ ಘಾಟಿಯಲ್ಲಿ ರಣಮಳೆ, ದಟ್ಟ ಮಂಜು, ಫಾಲ್ಸ್​ಗಳ ಅಬ್ಬರ
ಚಾರ್ಮಾಡಿ ಘಾಟಿಯಲ್ಲಿ ರಣಮಳೆ, ದಟ್ಟ ಮಂಜು, ಫಾಲ್ಸ್​ಗಳ ಅಬ್ಬರ
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!