ಕಾಸ್‌ಗಂಜ್‌ನಲ್ಲಿ ಭೀಕರ ಅಪಘಾತ: ಮಾಘ ಹುಣ್ಣಿಮೆಯಂದು ಗಂಗಾ ಸ್ನಾನಕ್ಕೆ ತೆರಳಿದ್ದ 22 ಮಂದಿ ದುರ್ಮರಣ

|

Updated on: Feb 24, 2024 | 6:38 PM

ಸಾವಿಗೀಡಾದವರೆಲ್ಲರೂ ಇಟಾ ಜಿಲ್ಲೆಯ ಜೈತಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಕಾಸಾ ಗ್ರಾಮದ ನಿವಾಸಿಗಳು. ಅವರು ಮಾಘ ಪೂರ್ಣಿಮಾ ಸಂದರ್ಭದಲ್ಲಿ ಪವಿತ್ರ ಸ್ನಾನಕ್ಕಾಗಿ ಕದರಗಂಜ್ ಗಂಗಾ ಘಾಟ್‌ಗೆ ಹೋಗುತ್ತಿದ್ದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಕಾಸ್‌ಗುಂಜ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಅಪರ್ಣಾ ರಜತ್ ಕೌಶಿಕ್  ಹೇಳಿದ್ದಾರೆ.

ಕಾಸ್‌ಗಂಜ್‌ನಲ್ಲಿ ಭೀಕರ ಅಪಘಾತ: ಮಾಘ ಹುಣ್ಣಿಮೆಯಂದು ಗಂಗಾ ಸ್ನಾನಕ್ಕೆ ತೆರಳಿದ್ದ 22 ಮಂದಿ ದುರ್ಮರಣ
ಕಾಸ್‌ಗಂಜ್‌ನಲ್ಲಿ ಅಪಘಾತ
Follow us on

ದೆಹಲಿ ಫೆಬ್ರವರಿ 24: ಶನಿವಾರದಂದು ಉತ್ತರ ಪ್ರದೇಶದ (Uttar Pradesh) ಕಾಸ್‌ಗಂಜ್‌ನಲ್ಲಿ (Kasganj) ಅತಿವೇಗದ ಟ್ರ್ಯಾಕ್ಟರ್ ಟ್ರಾಲಿಯು ನಿಯಂತ್ರಣ ಕಳೆದುಕೊಂಡು ಕೊಳಕ್ಕೆ ಉರುಳಿ ಬಿದ್ದು ಏಳು ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 22 ಜನರು ಸಾವಿಗೀಡಾಗಿದ್ದಾರೆ. ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಲು ಭಕ್ತರನ್ನು ಕದರಗಂಜ್ ಘಾಟ್‌ಗೆ (Kadarganj Ghat)ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ. ಈ ಘಟನೆಯು ಪಟಿಯಾಲಿ ಕೊಟ್ವಾಲಿ ಪ್ರದೇಶದ ದರಿಯಾವ್‌ಗಂಜ್ ನಿಲ್ದಾಣದ ಬಳಿ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 20 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾವಿಗೀಡಾದವರೆಲ್ಲರೂ ಇಟಾ ಜಿಲ್ಲೆಯ ಜೈತಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಕಾಸಾ ಗ್ರಾಮದ ನಿವಾಸಿಗಳು. ಅವರು ಮಾಘ ಪೂರ್ಣಿಮಾ ಸಂದರ್ಭದಲ್ಲಿ ಪವಿತ್ರ ಸ್ನಾನಕ್ಕಾಗಿ ಕದರಗಂಜ್ ಗಂಗಾ ಘಾಟ್‌ಗೆ ಹೋಗುತ್ತಿದ್ದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಕಾಸ್‌ಗುಂಜ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಅಪರ್ಣಾ ರಜತ್ ಕೌಶಿಕ್  ಹೇಳಿದ್ದಾರೆ.

ಅಪಘಾತದ ದೃಶ್ಯ

“ಘಟನೆಯ ಬಗ್ಗೆ ನಮಗೆ ಮಾಹಿತಿ ದೊರೆತ ತಕ್ಷಣ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದೆ. ನಮ್ಮ ತಂಡ, ಸ್ಥಳೀಯರ ಜೊತೆಗೂಡಿ ಸಾಧ್ಯವಾದಷ್ಟು ಜನರನ್ನು ರಕ್ಷಿಸಲು ವೇಗವಾಗಿ ಕೆಲಸ ಮಾಡಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಗಾಯಗೊಂಡವರನ್ನು  ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗುತ್ತಿದೆ ಎಂದು ಅವರು ಹೇಳಿದರು.

ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಯೋಗಿ ಆದಿತ್ಯನಾಥ್ ಟ್ವೀಟ್

ಅಪಘಾತದಲ್ಲಿ  ಸಾವಿಗೀಡಾದವರಿಗೆ ಮೋದಿ ಸಂತಾಪ ಸೂಚಿಸಿದ್ದು, ಗಾಯಗೊಂಡವರುಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಮೋದಿ ಬಗ್ಗೆ ಜೆಮಿನಿ ಎಐ ವಿವಾದಾತ್ಮಕ ಪ್ರತಿಕ್ರಿಯೆ; ತಪ್ಪಾಗಿದೆ, ಸಮಸ್ಯೆ ಸರಿಪಡಿಸಿಕೊಳ್ಳುತ್ತೇವೆ ಎಂದ ಗೂಗಲ್ 

ಪ್ರಧಾನಿ ಕಚೇರಿ ಟ್ವೀಟ್

“ಹೃದಯವಿದ್ರಾವಕ! ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಟ್ರ್ಯಾಕ್ಟರ್ ಟ್ರಾಲಿಯೊಂದು ಹೊಂಡಕ್ಕೆ ಬಿದ್ದು ಸಂಭವಿಸಿದ ಅವಘಡ ದುರದೃಷ್ಟಕರ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ತೊಡಗಿಸಿಕೊಂಡಿದೆ, ”ಎಂದು ಪ್ರಧಾನ ಮಂತ್ರಿ ಕಚೇರಿ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ