ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 48 ವಾಹನಗಳು ಜಖಂ

| Updated By: Rakesh Nayak Manchi

Updated on: Nov 21, 2022 | 7:10 AM

ಮಹಾರಾಷ್ಟ್ರದ ಪುಣೆ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನವಿಲೆ ಬ್ರಿಡ್ಜ್‌ ಬಳಿ  ಸರಣಿ ಅಪಘಾತ ಸಂಭವಿಸಿದ್ದು, 48 ವಾಹನಗಳು ಜಖಂಗೊಂಡಿವೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 48 ವಾಹನಗಳು ಜಖಂ
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 48 ವಾಹನಗಳು ಜಖಂ
Follow us on

ಪುಣೆ: ಮಹಾರಾಷ್ಟ್ರದ ಪುಣೆ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನವಿಲೆ ಬ್ರಿಡ್ಜ್‌ ಬಳಿ ಸರಣಿ ಅಪಘಾತ ಸಂಭವಿಸಿದ್ದು, 48 ವಾಹನಗಳು ಜಖಂಗೊಂಡಿವೆ. ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಚಾಲಕ ಟ್ಯಾಂಕರ್​​ನ್ನು ಅಡ್ಡಾದಿಡ್ಡಿ ಚಾಲಾಯಿಸಿದ್ದಾನೆ. ಇದರಿಂದ ಟ್ಯಾಂಕರ್​ ಐಷಾರಾಮಿ ಕಾರುಗಳು ಸೇರಿ ಬರೋಬ್ಬರಿ 48 ವಾಹನಗಳಿಗೆ ಡಿಕ್ಕಿ ಹೊಡೆದಿದೆ.  ಅಗ್ನಿಶಾಮಕ ದಳ, ಪೊಲೀಸರಿಂದ ವಾಹನಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಸ್ಥಳಕ್ಕೆ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದ್ದು, ಹಾನಿಗೊಳಗಾದ ವಾಹನಗಳ ಜಖಂಗೊಂಡ ಅವಶೇಷಗಳಿಂದ ಹೊರತೆಗೆದ ನಂತರ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಪುಣೆ ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಪಿಎಂಆರ್‌ಡಿಎ) ಘಟನಾ ಸ್ಥಳಕ್ಕೆ ತ್ವರಿತವಾಗಿ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ನಿರತವಾಯಿತು.

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಟ್ಯಾಂಕರ್‌ ಬ್ರೇಕ್ ಫೈಲ್ ಆಗಿ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಪಘಾತದ ನಂತರ ತೈಲವು ರಸ್ತೆಯ ಮೇಲೆ ಚೆಲ್ಲಿದ ಪರಿಣಾಮ ಹೆಚ್ಚಿದ ಘರ್ಷಣೆಗಳಿಗೆ ಕಾರಣವಾಗುತ್ತದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆ ನಂತರ ಮುಂಬೈ ರಸ್ತೆಗಳಲ್ಲಿ 2 ಕಿ.ಮೀ. ಉದ್ದಕ್ಕೂ ಟ್ರಾಫಿಕ್ ಜಾಮ್ ಮತ್ತು ಹತ್ತಿರದ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ಕಳೆದ ಕೆಲವು ದಿನಗಳಿಂದ ನವಲೆ ಸೇತುವೆ ಅಪಘಾತಗಳ ಹಾಟ್ ಸ್ಪಾಟ್ ಆಗುತ್ತಿದೆ. ಶುಕ್ರವಾರ ಹೊರವರ್ತುಲ ರಸ್ತೆಯ ಸೇತುವೆ ಬಳಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟಿದ್ದರು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:19 am, Mon, 21 November 22