AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ನೂತನ ರಕ್ಷಣಾ ಕಾರ್ಯದರ್ಶಿಯಾಗಿ ಆರ್​ಕೆ ಸಿಂಗ್ ನೇಮಕ

ಮೋದಿ ಸರ್ಕಾರವು ಪ್ರಮುಖ ಅಧಿಕಾರಶಾಹಿ ವ್ಯವಸ್ಥೆಯ ಪುನಾರಚನೆ ಮಾಡಿದೆ. ಕೇಂದ್ರ ಸರ್ಕಾರವು ಇಂದು ಪ್ರಮುಖ ಅಧಿಕಾರಶಾಹಿ ಪುನರ್​ರಚನೆಗೆ ಅನುಮೋದನೆ ನೀಡಿದೆ. ವಿವಿಧ ಇಲಾಖೆಗಳಲ್ಲಿ ಹಲವಾರು ಹೊಸ ನೇಮಕಾತಿಗಳನ್ನು ಮಾಡಿದೆ. ಕೇಂದ್ರವು ಶುಕ್ರವಾರ ಜಾರಿಗೆ ತಂದ ಪ್ರಮುಖ ಉನ್ನತ ಮಟ್ಟದ ಅಧಿಕಾರಶಾಹಿ ಪುನರ್​ರಚನೆಯ ಭಾಗವಾಗಿ ಹಿರಿಯ ಅಧಿಕಾರಿ ಪುಣ್ಯ ಸಲಿಲ ಶ್ರೀವಾಸ್ತವ ಅವರನ್ನು ಹೊಸ ಆರೋಗ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಕೇಂದ್ರ ಸರ್ಕಾರದ ನೂತನ ರಕ್ಷಣಾ ಕಾರ್ಯದರ್ಶಿಯಾಗಿ ಆರ್​ಕೆ ಸಿಂಗ್ ನೇಮಕ
ಮೋದಿ
ಸುಷ್ಮಾ ಚಕ್ರೆ
|

Updated on:Aug 16, 2024 | 10:10 PM

Share

ನವದೆಹಲಿ: ಕ್ಯಾಬಿನೆಟ್ ನೇಮಕಾತಿ ಸಮಿತಿಯು (ACC) ಅಧಿಕಾರಶಾಹಿ ಮಟ್ಟದಲ್ಲಿ ಪ್ರಮುಖ ಪುನರ್​ರಚನೆಯನ್ನು ಮಾಡಿದೆ. ಹೊಸ ರಕ್ಷಣಾ ಕಾರ್ಯದರ್ಶಿಯಾಗಿ ಆರ್​ಕೆ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಕೆ. ಶ್ರೀನಿವಾಸ್ ಅವರನ್ನು ವಸತಿ ಮತ್ತು ನಗರ ಕಾರ್ಯದರ್ಶಿಯಾಗಿ, ವಿವೇಕ್ ಜೋಶಿ ಅವರನ್ನು ಸಿಬ್ಬಂದಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಕೇಂದ್ರವು ಶುಕ್ರವಾರ ಜಾರಿಗೆ ತಂದ ಪ್ರಮುಖ ಉನ್ನತ ಮಟ್ಟದ ಅಧಿಕಾರಶಾಹಿ ಪುನರ್ರಚನೆಯ ಭಾಗವಾಗಿ ಹಿರಿಯ ಅಧಿಕಾರಿ ಪುಣ್ಯ ಸಲಿಲ ಶ್ರೀವಾಸ್ತವ ಅವರನ್ನು ಹೊಸ ಆರೋಗ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಸ್ತುತ ಪ್ರಧಾನಿ ಕಾರ್ಯಾಲಯದಲ್ಲಿ ವಿಶೇಷ ಕಾರ್ಯದರ್ಶಿಯಾಗಿರುವ ಶ್ರೀವಾಸ್ತವ ಅವರು ಸಿಬ್ಬಂದಿ ಸಚಿವಾಲಯದ ಆದೇಶದ ಪ್ರಕಾರ, ಆರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (OSD) ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಲು ಮತ್ತೊಮ್ಮೆ ಮನವಿ ಮಾಡುತ್ತೇನೆ; ರಾಹುಲ್ ಗಾಂಧಿ ಒತ್ತಾಯ

ಅಪೂರ್ವ ಚಂದ್ರ ಅವರು ಸೆಪ್ಟೆಂಬರ್ 30ರಂದು ಅಧಿಕಾರ ವಹಿಸಿಕೊಂಡ ನಂತರ ಅವರು ಆರೋಗ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಅವರನ್ನು ನೂತನ ರಕ್ಷಣಾ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಅಕ್ಟೋಬರ್ 31, 2024ರಂದು ಹಾಲಿ ಅರಮನೆ ಗಿರಿಧರ್ ಅವರ ನಿವೃತ್ತಿಯ ನಂತರ ರಕ್ಷಣಾ ಕಾರ್ಯದರ್ಶಿ ಹುದ್ದೆಯನ್ನು ವಹಿಸಿಕೊಳ್ಳುವ ಮೊದಲು ಅವರು ಆರಂಭದಲ್ಲಿ ಸಚಿವಾಲಯದಲ್ಲಿ OSD ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಲ್ಪಸಂಖ್ಯಾತ ವ್ಯವಹಾರಗಳ ಕಾರ್ಯದರ್ಶಿ ಕಾಟಿಕಿತ್ತಲ ಶ್ರೀನಿವಾಸ್ ಅವರು ಮುಂದಿನ ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿಯಾಗಲಿದ್ದಾರೆ. ಹಿರಿಯ ಅಧಿಕಾರಿ ದೀಪ್ತಿ ಉಮಾಶಂಕರ್ ಅವರನ್ನು ಭಾರತದ ರಾಷ್ಟ್ರಪತಿಗಳ ನೂತನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ ಮತ್ತು ಹರ್ಯಾಣ ಚುನಾವಣೆ ವೇಳಾಪಟ್ಟಿ ಪ್ರಕಟ; ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಹಣಕಾಸು ಸೇವೆಗಳ ಕಾರ್ಯದರ್ಶಿ ವಿವೇಕ್ ಜೋಶಿ ಅವರು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಕಾರ್ಯದರ್ಶಿಯಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪ್ರಸ್ತುತ ಕಲ್ಲಿದ್ದಲು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾಗಿರುವ ಹಿರಿಯ ಐಎಎಸ್ ಅಧಿಕಾರಿ ನಾಗರಾಜು ಮದ್ದಿರಾಳ ಅವರು ಜೋಶಿ ಅವರ ಬದಲಿಗೆ ನೂತನ ಹಣಕಾಸು ಸೇವೆಗಳ ಕಾರ್ಯದರ್ಶಿಯಾಗಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 pm, Fri, 16 August 24