Defamation Cases in India: ದೇಶದ ಕೆಲವು ಪ್ರಮುಖ ಮಾನನಷ್ಟ ಮೊಕದ್ದಮೆ ಪ್ರಕರಣಗಳಿವು…

ಕಳೆದ ಕೆಲವು ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿದ್ದ ಕೆಲವು ಮಾನನಷ್ಟ ಮೊಕದ್ದಮೆ ಪ್ರಕರಣಗಳ ಸಂಕ್ಷಿಪ್ತ ಹಿನ್ನೋಟ ಇಲ್ಲಿದೆ.

Defamation Cases in India: ದೇಶದ ಕೆಲವು ಪ್ರಮುಖ ಮಾನನಷ್ಟ ಮೊಕದ್ದಮೆ ಪ್ರಕರಣಗಳಿವು...
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Mar 23, 2023 | 3:47 PM

ಮೋದಿ ಉಪನಾಮ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮಾಡಿದ್ದ ಟೀಕೆ ವಿರುದ್ಧ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಗೆ (Defamation Case) ಸಂಬಂಧಿಸಿ ಗುಜರಾತ್​ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ರಾಹುಲ್ ಗಾಂಧಿ ದೋಷಿ ಎಂದು ನ್ಯಾಯಾಲಯ ಘೋಷಿಸಿದೆ. ‘ಕಳ್ಳರೆಲ್ಲಾ ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡಿರುತ್ತಾರೆ ಇದು ಹೇಗೆ?’ ಎಂದು ರಾಹುಲ್ ಗಾಂಧಿ ಕೋಲಾರದಲ್ಲಿ ನಡೆದಿದ್ದ ಚುನಾವಣಾ ರ‍್ಯಾಲಿಯಲ್ಲಿ ಹೇಳಿದ್ದರು. ಇದರ ವಿರುದ್ಧ ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ದೇಶದಲ್ಲಿ ಈ ಹಿಂದೆಯೂ ಹಲವಾರು ಇಂಥ ಮಾನನಷ್ಟ ಮೊಕದ್ದಮೆ ಪ್ರಕರಣಗಳು ವಿಚಾರಣೆಗೆ ಬಂದಿವೆ. ಕೆಲವು ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದರೆ ಇನ್ನು ಕೆಲವು ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾಗಿದ್ದಾರೆ. ಕೆಲವು ಪ್ರಕರಣಗಳು ರಾಜಿ ಸಂಧಾನದ ಮೂಲಕ ಬಗೆಹರಿದಿವೆ. ಕಳೆದ ಕೆಲವು ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿದ್ದ ಕೆಲವು ಮಾನನಷ್ಟ ಮೊಕದ್ದಮೆ ಪ್ರಕರಣಗಳ ಸಂಕ್ಷಿಪ್ತ ಹಿನ್ನೋಟ ಇಲ್ಲಿದೆ.

ಅರುಣ್ ಜೇಟ್ಲಿ vs ಅರವಿಂದ ಕೇಜ್ರಿವಾಲ್

ಕೇಂದ್ರದ ಮಾಜಿ ಸಚಿವ, ದಿ. ಅರುಣ್ ಜೇಟ್ಲಿ ಅವರು ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಇತರರ ಎಎಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದು ದೇಶದಾದ್ಯಂದ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅರುಣ್ ಜೇಟ್ಲಿ ಅವರು 13 ವರ್ಷಗಳ ಕಾಲ ದೆಹಲಿ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸಂಸ್ಥೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಅರವಿಂದ ಕೇಜ್ರಿವಾಲ್ ಹಾಗೂ ಎಎಪಿ ನಾಯಕರು ಆರೋಪಿಸಿದ್ದರು. ಇದು ಆಧಾರರಹಿತ ಆರೋಪ ಎಂದಿದ್ದ ಜೇಟ್ಲಿ, ಮಾನನಷ್ಟ ಮೊಕದ್ದಮೆ ಹೂಡಿದ್ದರು. 2015ರಲ್ಲಿ ಮೊಕದ್ದಮೆ ಹೂಡಲಾಗಿತ್ತು. ಇದೇ ಪ್ರಕರಣದ ವಿಚಾರಣೆ ವೇಳೆ ಅರವಿಂದ ಕೇಜ್ರಿವಾಲ್ ಪರ ವಕೀಲ ರಾಮ್ ಜೇಠ್ಮಲಾನಿ ಅರುಣ್ ಜೇಟ್ಲಿಯನ್ನು ವಂಚಕ ಎಂದು ಹೇಳಿದ್ದರು. ಇದರಿಂದ ಮತ್ತೆ ಕುಪಿತಗೊಂಡ ಜೇಟ್ಲಿ, ಮತ್ತೊಂದು ಮಾನನಷ್ಟ ಮೊಕದ್ದಮೆ ಹೂಡಿದ್ದರ ಜತೆಗೆ, 10 ಕೋಟಿ ರೂ. ಪರಿಹಾರ ಒದಗಿಸುವಂತೆ ಕೋರಿದ್ದರು. ಅಂತಿಮವಾಗಿ ಕೇಜ್ರಿವಾಲ್ ಕ್ಷಮೆ ಕೋರುವುದರೊಂದಿಗೆ ಪ್ರಕರಣ ಸುಖಾಂತ್ಯಗೊಂಡಿತ್ತು. ಕ್ಷಮೆಯಾಚನೆ ಮಾಡಿರುವ ಕಾರಣ 2018ರ ಏಪ್ರಿಲ್​ನಲ್ಲಿ ಕೇಜ್ರಿವಾಲ್ ಹಾಗೂ ಇತರ ಎಎಪಿ ನಾಯಕರನ್ನು ದೆಹಲಿಯ ನ್ಯಾಯಾಲಯ ಖುಲಾಸೆಗೊಳಿಸಿತ್ತು.

ಎಂಜೆ ಅಕ್ಬರ್‌ vs ಪ್ರಿಯಾ ರಮಣಿ

ಕೇಂದ್ರದ ಮಾಜಿ ಸಚಿವ ಹಾಗೂ ಪತ್ರಕರ್ತ ಎಂಜೆ ಅಕ್ಬರ್ ವಿರುದ್ಧ ಪತ್ರಕರ್ತೆ ಪ್ರಿಯಾ ರಮಣಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. 2018ರಲ್ಲಿ #MeToo ಅಭಿಯಾನ ಮುನ್ನೆಲೆಗೆ ಬಂದಾಗ ಪ್ರಿಯಾ ರಮಣಿ ಕೂಡ ತಮ್ಮ ವಿರುದ್ಧದ ದೌರ್ಜನ್ಯದ ಬಗ್ಗೆ ದನಿಯೆತ್ತಿದ್ದರು. ಆದರೆ ಈ ಆರೋಪಗಳನ್ನು ನಿರಾಕರಿಸಿದ್ದ ಅಕ್ಬರ್, 2018ರ ಅಕ್ಟೋಬರ್​ನಲ್ಲಿ ಪ್ರಿಯಾ ರಮಣಿ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ದೆಹಲಿಯ ಮೆಟ್ರೋಪಾಲಿಟನ್ ಕೋರ್ಟ್ 2021ರ ಫೆಬ್ರುವರಿಯಲ್ಲಿ ಪ್ರಿಯಾ ರಮಣಿ ಅವರನ್ನು ಖುಲಾಸೆಗೊಳಿಸಿ ಆದೇಶ ನೀಡಿತ್ತು.

ರೋಹಿಣಿ ಸಿಂಧೂರಿ vs ಸಾರಾ ಮಹೇಶ್

ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಶಾಸಕ ಸಾರಾ ಮಹೇಶ್ ಕಳೆದ ವರ್ಷ (2022) 1 ಕೋಟಿ ರೂ. ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಮೈಸೂರಿನ 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿತ್ತು. ರೋಹಿಣಿ ಸಿಂಧೂರಿ ಇತ್ತೀಚೆಗೆ ಸಾರಾ ಮಹೇಶ್ ಜತೆ ಸಂಧಾನಕ್ಕೆ ಯತ್ನಿಸಿದ್ದರು ಎಂಬ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿತ್ತು.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ದೋಷಿ ಎಂದ ಸೂರತ್ ಕೋರ್ಟ್; ರಾಜಕೀಯ ನಾಯಕರ ಪ್ರತಿಕ್ರಿಯೆ ಹೀಗಿದೆ

ಈ ವಿಚಾರವಾಗಿ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ರೋಹಿಣಿ ಸಿಂಧೂರಿ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದರು. ಇದು ಕರ್ನಾಟಕ ರಾಜಕೀಯದಲ್ಲಿಯೂ ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಪರಿಹಾರ ಕೋರಿ ಲೀಗಲ್‌ ನೋಟಿಸ್‌ ಜಾರಿ ಮಾಡಿದ್ದರು. ಒಂದೋ ಕ್ಷಮೆ ಕೇಳಬೇಕು, ಇಲ್ಲವಾದಲ್ಲಿ 1 ಕೋಟಿ ರೂ. ಮಾನನಷ್ಟ ಪರಿಹಾರ ನೀಡಬೇಕು ಎಂದು ನೋಟಿಸ್​ನಲ್ಲಿ ಉಲ್ಲೇಖಿಸಲಾಗಿತ್ತು.

ಮಾನನಷ್ಟ ಮೊಕದ್ದಮೆಯ ಸಿಂಧುತ್ವವನ್ನೇ ಪ್ರಶ್ನಿಸಿದ್ದ ರಾಹುಲ್ ಗಾಂಧಿ

ಮಾನನಷ್ಟ ಮೊಕದ್ದಮೆ ಹೂಡಲು ಅವಕಾಶ ನೀಡುವ ಭಾರತೀಯ ದಂಡಸಂಹಿತೆಯ (ಐಪಿಸಿ) ಸೆಕ್ಷನ್‌ಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ರಾಹುಲ್ ಗಾಂಧಿ, ಅರವಿಂದ ಕೇಜ್ರಿವಾಲ್ ಹಾಗೂ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ 2015ರಲ್ಲಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಮಾನನಷ್ಟ ಮೊಕದ್ದಮೆ ಹೂಡಲು ಅವಕಾಶ ನೀಡುವ ಸೆಕ್ಷನ್​ಗಳನ್ನು ರದ್ದುಪಡಿಸುವಂತೆಯೂ ಮನವಿ ಮಾಡಿದ್ದರು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿತ್ತು. ಅದಕ್ಕುತ್ತರಿಸಿದ್ದ ಕೇಂದ್ರ ಸರ್ಕಾರ, ಸಾಮಾಜಿಕ ಮಾಧ್ಯಮಗಳಲ್ಲಿ ಜನರನ್ನು ನಿಂದಿಸುವ, ಜನರ ಗೌರವಕ್ಕೆ ಚ್ಯುತಿ ತರುವಂಥ ಕೆಲಸಗಳು ಹೆಚ್ಚೆಚ್ಚು ನಡೆಯುತ್ತಿವೆ. ಅಂಥವುಗಳಿಗೆ ಕಡಿವಾಣ ಹಾಕಲು ಮಾನನಷ್ಟ ಮೊಕದ್ದಮೆ ಹೂಡಲು ಅವಕಾಶ ನೀಡುವ ಸೆಕ್ಷನ್​ಗಳನ್ನು ಉಳಿಸಿಕೊಳ್ಳಬೇಕು ಎಂದು ಹೇಳಿತ್ತು. ಸರ್ಕಾರದ ಅಭಿಪ್ರಾಯಕ್ಕೆ ಕೋರ್ಟ್ ಮನ್ನಣೆ ನೀಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ