AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಲಜಪತ್ ನಗರದ ಕಣ್ಣಿನ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 12 ಅಗ್ನಿಶಾಮಕ ವಾಹನಗಳು ದೌಡು

ಅಗ್ನಿ ಅವಘಡದಲ್ಲಿ ಇಲ್ಲಿಯವರೆಗೆ ಯಾರೂ ಗಾಯಗೊಂಡಿರುವ ವರದಿಗಳಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (DFS) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಳಗ್ಗೆ 11.30ಕ್ಕೆ ಬೆಂಕಿ ಅವಘಡ ಸಂಭವಿಸಿದ್ದ ಬಗ್ಗೆ  ಕರೆ ಬಂದಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ದೆಹಲಿಯ ಲಜಪತ್ ನಗರದ ಕಣ್ಣಿನ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 12 ಅಗ್ನಿಶಾಮಕ ವಾಹನಗಳು ದೌಡು
ಆಸ್ಪತ್ರೆಯಲ್ಲಿ ಬೆಂಕಿ ಅವಘಡ
ರಶ್ಮಿ ಕಲ್ಲಕಟ್ಟ
|

Updated on:Jun 05, 2024 | 1:54 PM

Share

ದೆಹಲಿ ಜೂನ್ 05: ದೆಹಲಿಯ ಲಜಪತ್ ನಗರದಲ್ಲಿರುವ (Lajpat Nagar) ಕಣ್ಣಿನ ಆಸ್ಪತ್ರೆಯಲ್ಲಿ (eye hospital) ಬುಧವಾರ ಭಾರೀ ಅಗ್ನಿ  ಅವಘಡ (Fire)ಸಂಭವಿಸಿದೆ. ಬೆಂಕಿಯನ್ನು ನಂದಿಸಲು 12 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಯೊಬ್ಬರು  ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾರೂ ಗಾಯಗೊಂಡಿರುವ ವರದಿಗಳಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (DFS) ಅಧಿಕಾರಿಯೊಬ್ಬರು ಹೇಳಿದ್ದಾರೆ. ಬೆಳಗ್ಗೆ 11.30ಕ್ಕೆ ಬೆಂಕಿ ಅವಘಡ ಸಂಭವಿಸಿದ್ದರ ಬಗ್ಗೆ  ಕರೆ ಬಂದಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.  ಈ ಆಸ್ಪತ್ರೆಯು ನವದೆಹಲಿಯ ಲಜಪತ್ ನಗರ ಪ್ರದೇಶದ ವಿನೋಬಪುರಿ ಮೆಟ್ರೋ ನಿಲ್ದಾಣದ ಸಮೀಪದಲ್ಲಿದೆ.

ನವದೆಹಲಿಯ ಪಶ್ಚಿಮ ವಿಹಾರ್‌ನಲ್ಲಿರುವ ಐ ಮಂತ್ರ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದಕೆಲವೇ ದಿನಗಳಲ್ಲಿ ಐ 7 ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಅವಘಡ ಸಂಭವಿಸಿರುವುದು ಗೊತ್ತಾದ ಕೂಡಲೇ ಜನರನ್ನು ಸುರಕ್ಷಿತವಾಗಿ ಕಟ್ಟಡದಿಂದ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಕಳೆದ ತಿಂಗಳು, ವಿವೇಕ್ ವಿಹಾರ್‌ನ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಆರು ನವಜಾತ ಶಿಶುಗಳು ಸಾವಿಗೀಡಾದ್ದವು. ವಿವೇಕ್ ವಿಹಾರ್‌ನಲ್ಲಿರುವ ಐದು ಹಾಸಿಗೆಗಳ ನವಜಾತ ಶಿಶು ಕೇಂದ್ರದಲ್ಲಿ ಹಲವಾರು ಸುರಕ್ಷತಾ ಲೋಪಗಳು ಬೆಳಕಿಗೆ ಬಂದಿದ್ದರೂ ಸಹ, 27 ಆಮ್ಲಜನಕ ಸಿಲಿಂಡರ್‌ಗಳನ್ನು ಏಕೆ ಇರಿಸಲಾಗಿದೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದೆ. ದೆಹಲಿ ಸರ್ಕಾರವು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳಿಗೆ ಅಗ್ನಿಶಾಮಕ ಲೆಕ್ಕಪರಿಶೋಧನೆ ನಡೆಸಲು ನಿರ್ದೇಶಿಸಿದೆ.

ಇದನ್ನೂ ಓದಿ: ಒಂದೇ ವಿಮಾನದಲ್ಲಿ ದೆಹಲಿಗೆ ಹಾರಿದ ನಿತೀಶ್​ ಕುಮಾರ್, ತೇಜಸ್ವಿ ಯಾದವ್

ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಐದು ಆಮ್ಲಜನಕ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಇತರ ಐದು ನವಜಾತ ಶಿಶುಗಳು ಸಹ ಗಾಯಗೊಂಡಿದ್ದಾರೆ. ಇದಕ್ಕೂ ಮುನ್ನ, ಮಂಗಳವಾರ ಮುಂಜಾನೆ ಗುರುಗ್ರಾಮ್‌ನ ಆಂಬಿಯೆನ್ಸ್ ಮಾಲ್‌ನ ಹಿಂಭಾಗದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ಸೋಮವಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ನಿಯಂತ್ರಕ ಪ್ರೋಟೋಕಾಲ್‌ಗಳು ಮತ್ತು ಅಗ್ನಿ ಸುರಕ್ಷತಾ ಮಾನದಂಡಗಳ ಕಟ್ಟುನಿಟ್ಟಾದ ಅನುಸರಣೆಗೆ ಒತ್ತು ನೀಡಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:50 pm, Wed, 5 June 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ