AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಫ್ಟಿನೆಂಟ್ ಜನರಲ್ ಹುದ್ದೆಗೇರಿದ ಮೂರನೇ ಮಹಿಳೆ ಮಾಧುರಿ ಕಾನಿಟ್ಕರ್

ಲೆಫ್ಟಿನೆಂಟ್ ಜನರಲ್ ಹುದ್ದೆಗೆ ಏರಿದ ದೇಶದ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಮಾಧುರಿ ಕಾನಿಟ್ಕರ್ ಪಾತ್ರರಾಗಿದ್ದಾರೆ. ಮಾಧುರಿ ಅವರ ಪತಿ ರಾಜೀವ್ ಕೂಡ ಲೆಫ್ಟಿನೆಂಟ್ ಜನರಲ್ ಆಗಿದ್ದು, ಈ ಶ್ರೇಣಿಗೆ ಏರಿದ ಮೊದಲ ದಂಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾಧುರಿ ಸೇನೆಯಲ್ಲಿ 37 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಪೌರತ್ವದ ಕಿಚ್ಚಿಗೆ ಇಬ್ಬರು ಬಲಿ: ಮೇಘಾಲಯದ ಪೂರ್ವ ಖಾಶಿ ಪರ್ವತ ಪ್ರದೇಶದಲ್ಲಿ ಸಿಎಎ ಪರ-ವಿರೋಧಿ ಗುಂಪುಗಳ ನಡುವೆ ಭುಗಿಲೆದ್ದ ಹಿಂಸಾಚಾರ ಇಬ್ಬರನ್ನು ಬಲಿ ಪಡೆದಿದೆ. ಗಲಭೆಯಲ್ಲಿ ಹಲವರಿಗೆ ಗಾಯಗಳಾಗಿವೆ. […]

ಲೆಫ್ಟಿನೆಂಟ್ ಜನರಲ್ ಹುದ್ದೆಗೇರಿದ ಮೂರನೇ ಮಹಿಳೆ ಮಾಧುರಿ ಕಾನಿಟ್ಕರ್
ಸಾಧು ಶ್ರೀನಾಥ್​
|

Updated on: Mar 01, 2020 | 8:58 AM

Share

ಲೆಫ್ಟಿನೆಂಟ್ ಜನರಲ್ ಹುದ್ದೆಗೆ ಏರಿದ ದೇಶದ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಮಾಧುರಿ ಕಾನಿಟ್ಕರ್ ಪಾತ್ರರಾಗಿದ್ದಾರೆ. ಮಾಧುರಿ ಅವರ ಪತಿ ರಾಜೀವ್ ಕೂಡ ಲೆಫ್ಟಿನೆಂಟ್ ಜನರಲ್ ಆಗಿದ್ದು, ಈ ಶ್ರೇಣಿಗೆ ಏರಿದ ಮೊದಲ ದಂಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾಧುರಿ ಸೇನೆಯಲ್ಲಿ 37 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

ಪೌರತ್ವದ ಕಿಚ್ಚಿಗೆ ಇಬ್ಬರು ಬಲಿ: ಮೇಘಾಲಯದ ಪೂರ್ವ ಖಾಶಿ ಪರ್ವತ ಪ್ರದೇಶದಲ್ಲಿ ಸಿಎಎ ಪರ-ವಿರೋಧಿ ಗುಂಪುಗಳ ನಡುವೆ ಭುಗಿಲೆದ್ದ ಹಿಂಸಾಚಾರ ಇಬ್ಬರನ್ನು ಬಲಿ ಪಡೆದಿದೆ. ಗಲಭೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಶಿಲ್ಲಾಂಗ್ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. 6 ಜಿಲ್ಲೆಗಳಲ್ಲಿ ಇಂಟರ್​ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲಕಿಗೆ ಥಳಿಸಿ, ತಲೆ ಬೋಳಿಸಿದ್ರು: ಹುಡುಗನ ಜೊತೆ ಫೋನ್​​ನಲ್ಲಿ ಮಾತನಾಡುತ್ತಿದ್ದ ಆರೋಪದಡಿ ಅಪಾಪ್ತ ಬಾಲಕಿಗೆ ಥಳಿಸಿ, ತಲೆಬೋಳಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಸೊಂಡ್ವಾ ಪ್ರದೇಶದ ಅಲಿರಾಜ್​ಪುರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಬಾಲಕಿ ನೆರವಿಗೆ ಯಾರೂ ಕೂಡ ಧಾವಿಸಿಲ್ಲ. ಘಟನೆ ಸಂಬಂಧ ಮೂವರ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದು ಬಂಧಿಸಿದ್ದಾರೆ.

ಬೋಟ್​ ಮಗುಚಿ ಹಲವರು ನಾಪತ್ತೆ: ಉತ್ತರಪ್ರದೇಶದ ಗಂಗಾನದಿಯಲ್ಲಿ ಬೋಟ್​​ ಮಗುಚಿ ಹಲವರು ಕಣ್ಮರೆಯಾಗಿರೋ ಘಟನೆ ನಡೆದಿದೆ. ಮಾಹೇಜಿ ಹಳ್ಳಿಯ ಜನರು ಗಾಜೀಪುರದಿಂದ ಬೋಟ್​ನಲ್ಲಿ ವಾಪಸ್ ಆಗುತ್ತಿದ್ರು. ಈ ವೇಳೆ ಚಾಂಡೌಲಿಯಲ್ಲಿ ಬೋಟ್ ಮಗುಚಿದ್ದು ಕಣ್ಮರೆಯಾದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಕಾಲು ಜಾರಿ ಬಿದ್ದ ನ್ಯಾಯಮೂರ್ತಿಗಳು: ಉತ್ತರಾಖಂಡ್​​ನ ಹೈಕೋರ್ಟ್​​ ನ್ಯಾಯಮೂರ್ತಿ ಪೂಜೆ ಸಲ್ಲಿಸುವ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ಅದೃಷ್ಟವಶಾತ್ ನ್ಯಾಯಮೂರ್ತಿ ರಮೇಶ್ ರಂಗನಾಥನ್​ ಅಪಾಯದಿಂದ ಪಾರಾಗಿದ್ದಾರೆ. ದೇವಪ್ರಯಾಗ್​​​ನಲ್ಲಿ ಸಂಗಮಕ್ಕೆ ಭೇಟಿ ನೀಡಿದ್ದ ಈ ಘಟನೆ ಸಂಭವಿಸಿದೆ.

ಜೀವಜಲಕ್ಕೆ ಹಾಹಾಕಾರ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕುಡಿಯೋ ನೀರಿಗೆ ಜನರು ಪರದಾಡುತ್ತಿದ್ದಾರೆ. ದೆಹಲಿಯ ಕಾರ್ವಾಲ್​ ನಗರ ಪ್ರದೇಶದಲ್ಲಿ ಜೀವಜಲಕ್ಕೆ ಹಾಹಾಕಾರ ಶುರುವಾಗಿದೆ. ನೀರಿನ ಕ್ಯಾನ್​ಗಳನ್ನು ಹಿಡಿದು ಟ್ಯಾಂಕರ್​​ನಲ್ಲಿ ಜನರು ನೀರು ತುಂಬಿಕೊಂಡು ಹೋಗ್ತಿದ್ದಾರೆ..

ಅಮೆರಿಕದಲ್ಲಿ ಕೊರೊನಾಗೆ ಮೊದಲ ಬಲಿ: ಅಮೆರಿಕದಲ್ಲಿ ಕೊರೊನಾ ವೈರಸ್ ಮೊದಲ ಬಲಿ ಪಡೆದಿದೆ. ವಾಷಿಂಗ್ಟನ್​ಲ್ಲಿ 50 ವರ್ಷದ ಮಹಿಳೆಯೊಬ್ಬರು ಕೊರೊನಾ ವೈರಸ್​ಗೆ ಬಲಿಯಾಗಿದ್ದು, ಅಮೆರಿಕದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಬಗ್ಗೆ ಮಾತನಾಡಿರೋ ಅಧ್ಯಕ್ಷ ಟ್ರಂಪ್, ಈ ಬಗ್ಗೆ ಯಾರೂ ಹೆದರಿಕೊಳ್ಳೋ ಅವಶ್ಯತಕತೆ ಇಲ್ಲ. ಕೂಲಾಗಿ ಇರುವಂತೆ ಮನವಿ ಮಾಡಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ