AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದ ಹಿಂದಿದೆ ಜೈಶ್ ಉಗ್ರ ಸಂಘಟನೆ ಕೈವಾಡ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) 1267 ನಿರ್ಬಂಧಗಳ ಮೇಲ್ವಿಚಾರಣಾ ಸಮಿತಿಯ ಹೊಸ ವರದಿಯು ಪಾಕಿಸ್ತಾನದ ಬಗ್ಗೆ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (JeM) ದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಬಳಿ ನಡೆದ ಭಯೋತ್ಪಾದಕ ದಾಳಿಗೆ ನೇರ ಸಂಬಂಧ ಹೊಂದಿದೆ ಎಂದು ವರದಿಯು ಸ್ಪಷ್ಟವಾಗಿ ಹೇಳುತ್ತದೆ. ಜೈಶ್-ಎ-ಮೊಹಮ್ಮದ್ ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಿದ್ದು ಮಾತ್ರವಲ್ಲದೆ, ತನ್ನ ಬಲ ಮತ್ತು ಜಾಲವನ್ನು ವಿಸ್ತರಿಸುತ್ತಿದೆ.

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದ ಹಿಂದಿದೆ ಜೈಶ್ ಉಗ್ರ ಸಂಘಟನೆ ಕೈವಾಡ
ಸ್ಫೋಟ Image Credit source: DD News
ನಯನಾ ರಾಜೀವ್
|

Updated on: Feb 12, 2026 | 12:11 PM

Share

ನವದೆಹಲಿ, ಫೆಬ್ರವರಿ 12: ಇತ್ತೀಚೆಗೆ ದೆಹಲಿಯ ಕೆಂಪುಕೋಟೆ ಬಳಿ ನಡೆದಿದ್ದ ಕಾರು ಸ್ಫೋಟ(Car Blast)ಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಹೊಸ ವರದಿಯನ್ನು ಬಿಡುಗಡೆ ಮಾಡಿದೆ. ಆ ವರದಿಯಲ್ಲಿ ಈ ದಾಳಿಯಲ್ಲ ಪಾಕಿಸ್ತಾನಿ ಉಗ್ರ ಸಂಘಟನೆ ಜೈಶ್-ಎ ಮೊಹಮ್ಮದ್ ಕೈವಾಡವಿತ್ತು ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ವಿಶ್ವಸಂಸ್ಥೆಯ 37 ನೇ ವರದಿಯು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ನಂಟು ಈ ದಾಳಿಯಲ್ಲಿ ಬೆಳಕಿಗೆ ಬಂದಿದೆ ಎಂದು ಹೇಳಿದೆ.

ವರದಿ ಪ್ರಕಾರ, ಜೈಶ್ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಸದಸ್ಯ ರಾಷ್ಟ್ರವೊಂದು ಹೇಳಿದೆ. ವರದಿಯು ಗಡಿಯಾಚೆಗಿನ ಭಯೋತ್ಪಾದನೆಯ ಬಗ್ಗೆ ಪ್ರಶ್ನೆಗಳನ್ನು ಮತ್ತೆ ಹುಟ್ಟುಹಾಕಿದೆ. ಮಸೂದ್ ಅಜರ್ ಅಕ್ಟೋಬರ್ 8 ರಂದು ಪ್ರತ್ಯೇಕ ಮಹಿಳಾ ವಿಭಾಗವನ್ನು ರಚಿಸುವುದಾಗಿ ಘೋಷಿಸಿದ್ದಾನೆ. ಹೊಸ ವಿಭಾಗಕ್ಕೆ ಜಮಾತ್-ಉಲ್-ಮುಮಿನಾತ್ ಎಂದು ಹೆಸರಿಲಾಗಿದೆ. ಈ ವಿಭಾಗವನ್ನು ವಿಶ್ವಸಂಸ್ಥೆಯ ಪಟ್ಟಿಯಲ್ಲಿ ಸೇರಿಸಲಾಗಿಲ್ಲ, ಆದರೆ ಸಂಘಟನೆಯು ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಲಾಗಿದೆ.

ಈ ವಿಷಯದ ಬಗ್ಗೆ ಸದಸ್ಯ ರಾಷ್ಟ್ರಗಳಲ್ಲಿ ಭಿನ್ನಾಭಿಪ್ರಾಯವಿದೆ. ಒಂದು ದೇಶ ಜೈಶ್ ಇನ್ನೂ ಸಕ್ರಿಯವಾಗಿದೆ ಎಂದು ಹೇಳಿಕೊಂಡರೆ, ಇನ್ನೊಂದು ದೇಶ ಜೈಶ್ ಈಗ ನಿಷ್ಕ್ರಿಯ ಎಂದು ಹೇಳಿದೆ. ನಿಷೇಧದ ನಂತರ ಜೈಶ್ ಮತ್ತು ಲಷ್ಕರ್ ಇನ್ನು ಮುಂದೆ ಸಕ್ರಿಯವಾಗಿಲ್ಲ ಎಂದು ಪಾಕಿಸ್ತಾನ ಈಗಾಗಲೇ ಹೇಳಿದೆ.ವರದಿಯು ಪಹಲ್ಗಾಮ್ ದಾಳಿಯ ಬಗ್ಗೆಯೂ ಉಲ್ಲೇಖಿಸಿದೆ. ಏಪ್ರಿಲ್ 2025 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ್ದರು. ಲಷ್ಕರ್‌ನ ಪ್ರತಿನಿಧಿ ಎಂದು ಪರಿಗಣಿಸಲಾದ ದಿ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯನ್ನು ನಡೆಸಿತ್ತು.

ಮತ್ತಷ್ಟು ಓದಿ: ದೆಹಲಿ ನಿಗೂಢ ಸ್ಫೋಟ: ಘಟನೆಗೆ ಕಾರಣವಾದ ಕಾರಿನ ಸ್ಥಿತಿ ಹೇಗಾಗಿದೆ ವಿಡಿಯೋ ನೋಡಿ

ಜುಲೈ 28, 2025 ರಂದು ಮೂವರು ಶಂಕಿತರನ್ನು ಕೊಲ್ಲಲಾಯಿತು. ಮೇ ತಿಂಗಳಲ್ಲಿ, ಭಾರತ ಪಾಕಿಸ್ತಾನದಲ್ಲಿನ ಭಯೋತ್ಪಾದಕ ಅಡಗುತಾಣಗಳ ವಿರುದ್ಧ ಕ್ರಮ ಕೈಗೊಂಡಿತ್ತು. ನವೆಂಬರ್ 10, 2025 ರಂದು ನವದೆಹಲಿಯ ಕೆಂಪು ಕೋಟೆಯ ಬಳಿ ದಾಳಿ ನಡೆದಿತ್ತು. ದಾಳಿಯಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’