ದೆಹಲಿ ವಿಧಾನಸಭೆಯಲ್ಲಿ ಭದ್ರತಾ ಲೋಪ; ಗೇಟ್ ಮುರಿದು ಒಳಗೆ ನುಗ್ಗಿ, ಹೂಗುಚ್ಛ ಇಟ್ಟು ಹೋದ ಕಾರು ಚಾಲಕ!

ದೆಹಲಿ ವಿಧಾನಸಭೆಯಲ್ಲಿ ಕಾರೊಂದು ಗೇಟ್ ಮುರಿದು ಒಳಗೆ ನುಗ್ಗಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ ದೆಹಲಿ ವಿಧಾನಸಭೆ ಆವರಣದ ಗೇಟ್‌ನೊಳಗೆ ಮುಸುಕುಧಾರಿ ವ್ಯಕ್ತಿಯೊಬ್ಬರು ಚಲಾಯಿಸುತ್ತಿದ್ದ ಕಾರು ಬಲವಂತವಾಗಿ ಪ್ರವೇಶಿಸಿದೆ. ಇದರಿಂದ ಭಾರಿ ಭದ್ರತಾ ಭೀತಿ ಎದುರಾಗಿದೆ. ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಗೇಟ್ ಸಂಖ್ಯೆ 2ರ ಮೂಲಕ ಕಾರು ಬಲವಂತವಾಗಿ ವಿಧಾನಸಭಾ ಆವರಣವನ್ನು ಪ್ರವೇಶಿಸಿತು. ಇದರಿಂದ ಕೆಲಕಾಲ ಆತಂಕ ಸೃಷ್ಟಿಯಾಯಿತು.

ದೆಹಲಿ ವಿಧಾನಸಭೆಯಲ್ಲಿ ಭದ್ರತಾ ಲೋಪ; ಗೇಟ್ ಮುರಿದು ಒಳಗೆ ನುಗ್ಗಿ, ಹೂಗುಚ್ಛ ಇಟ್ಟು ಹೋದ ಕಾರು ಚಾಲಕ!
Delhi Assembly

Updated on: Apr 06, 2026 | 4:58 PM

ನವದೆಹಲಿ, ಏಪ್ರಿಲ್ 6: ಇಂದು ಮಧ್ಯಾಹ್ನ ದೆಹಲಿ ವಿಧಾನಸಭೆಯಲ್ಲಿ (Delhi Assembly) ಗಂಭೀರ ಭದ್ರತಾ ಲೋಪ ಕಂಡುಬಂದಿದೆ. ಉತ್ತರ ಪ್ರದೇಶದ ನೋಂದಣಿ ನಂಬರ್ ಹೊಂದಿರುವ ಅಪರಿಚಿತ ಕಾರು ಗೇಟ್ ಅನ್ನು ಮುರಿದು ಒಳಗೆ ನುಗ್ಗಿದೆ. ಭದ್ರತಾ ಸಿಬ್ಬಂದಿ ನೋಡನೋಡುತ್ತಿದ್ದಂತೆ ಕಾರು ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಆಫೀಸ್ ಬಳಿ ತೆರಳಿದೆ. ಈ ಘಟನೆ ಕೋಲಾಹಲಕ್ಕೆ ಕಾರಣವಾಯಿತು. ಆ ಕಾರು, ಚಾಲಕ ಮತ್ತು ಘಟನೆಯ ಹಿಂದಿನ ಕಾರಣಗಳನ್ನು ಗುರುತಿಸಲು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಭದ್ರತಾ ವ್ಯವಸ್ಥೆಗಳ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ.

ದೆಹಲಿ ಪೊಲೀಸರ ಪ್ರಕಾರ, ಉತ್ತರ ಪ್ರದೇಶ ನೋಂದಣಿ ಸಂಖ್ಯೆಯನ್ನು ಹೊಂದಿರುವ ಟಾಟಾ ಸಿಯೆರಾ ಕಾರು ಕಬ್ಬಿಣದ ಗೇಟ್ ಅನ್ನು ಮುರಿದು ವಿಧಾನಸಭಾ ಕಟ್ಟಡದ ಒಳಗೆ ನುಗ್ಗಿತು. ಒಳಗೆ ಬಂದ ಕಾರಿನಿಂದ ಇಳಿದ ಮುಸುಕುಧಾರಿ ಚಾಲಕ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಕಚೇರಿಯ ಕಡೆಗೆ ತೆರಳಿ ಅದರ ಹೊರಗೆ ಹೂವಿನ ಹೂಗುಚ್ಛ ಇಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ!

ಇದನ್ನೂ ಓದಿ: Delhi Earthquake: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಪ್ರಬಲ ಭೂಕಂಪ

ಈ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ. ಕಾರಿನಲ್ಲಿ ಏನಿತ್ತು, ಅದರ ಮಾಲೀಕರು ಯಾರು ಮತ್ತು ಅದರಲ್ಲಿ ಯಾರಿದ್ದರು ಎಂಬುದನ್ನು ಕಂಡುಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ. “ಕಾರು ಚಾಲಕ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಕಚೇರಿಯ ಕಡೆಗೆ ತೆರಳಿ ಮುಖಮಂಟಪದ ಬಳಿ ಪುಷ್ಪಗುಚ್ಛವನ್ನು ಇರಿಸಿ ವಾಪಾಸ್ ತೆರಳಿದ್ದಾನೆ” ಎಂದು ದೆಹಲಿ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆ ಹೂಗುಚ್ಛದಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ. ಭದ್ರತೆಗಾಗಿ ವಿಐಪಿ ಗೇಟ್‌ನಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ನಂತರ ಚಾಲಕ ಪರಾರಿಯಾಗಿದ್ದಾನೆ.


ಇದನ್ನೂ ಓದಿ: ಬೆಂಗಳೂರು-ದೆಹಲಿ ಇಂಡಿಗೋ ಫ್ಲೈಟ್‌ನಲ್ಲಿ ಹುಸಿ ಬಾಂಬ್ ಬೆದರಿಕೆ!

ದೆಹಲಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ತನಿಖೆ ಆರಂಭಿಸಿದ್ದು, ಚಾಲಕ ಮತ್ತು ಕಾರನ್ನು ಹುಡುಕುತ್ತಿದ್ದಾರೆ. ಈ ಘಟನೆಯು ಗಂಭೀರ ಭದ್ರತಾ ಕಳವಳಗಳನ್ನು ಹುಟ್ಟುಹಾಕಿದೆ. ಇತ್ತೀಚೆಗೆ ಮುಕ್ತಾಯಗೊಂಡ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ವಿಧಾನಸಭೆಗೆ ಬಾಂಬ್ ಬೆದರಿಕೆ ಬಂದ ನಂತರ ಈ ಘಟನೆ ನಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us