ಐಎಸ್​ಐ ಜೊತೆ ನಂಟು; ದೆಹಲಿ, ಪಂಜಾಬ್​ನಲ್ಲಿ 11 ಗೂಢಚಾರರ ಬಂಧನ

ದೆಹಲಿ ಪೊಲೀಸರು ದೆಹಲಿ ಮತ್ತು ಪಂಜಾಬ್‌ನಲ್ಲಿ ಐಎಸ್‌ಐ ಜೊತೆ ಸಂಪರ್ಕ ಹೊಂದಿರುವ ಗೂಢಚಾರ ಜಾಲವನ್ನು ಭೇದಿಸಿ, 11 ಜನರನ್ನು ಬಂಧಿಸಿದ್ದಾರೆ. ಇದರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ದೆಹಲಿ ಪೊಲೀಸರ ವಿಶೇಷ ದಳವು ಶುಕ್ರವಾರ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಮತ್ತು ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ (ಬಿಕೆಐ) ಜೊತೆ ನಂಟು ಹೊಂದಿದ್ದ ಭಯೋತ್ಪಾದನಾ ಮಾಡ್ಯೂಲ್ ಅನ್ನು ಭೇದಿಸಿದ್ದು, ಪಂಜಾಬ್ ಮತ್ತು ದೆಹಲಿಯಲ್ಲಿ 11 ಶಂಕಿತರನ್ನು ಬಂಧಿಸಿದೆ.

ಐಎಸ್​ಐ ಜೊತೆ ನಂಟು; ದೆಹಲಿ, ಪಂಜಾಬ್​ನಲ್ಲಿ 11 ಗೂಢಚಾರರ ಬಂಧನ
11 Suspects Linked To Isi Arrested

Updated on: Apr 10, 2026 | 8:40 PM

ನವದೆಹಲಿ, ಏಪ್ರಿಲ್ 10: ದೆಹಲಿ ಪೊಲೀಸರು ಪಾಕಿಸ್ತಾನ ಗುಪ್ತಚರ ಸಂಸ್ಥೆಯಾದ ಐಎಸ್‌ಐ (ISI) ಜೊತೆ ಸಂಪರ್ಕ ಹೊಂದಿರುವ ಪ್ರಮುಖ ಗೂಢಚಾರ ಜಾಲವನ್ನು ಭೇದಿಸಿದ್ದು, 11 ಜನರನ್ನು ಬಂಧಿಸಿದ್ದಾರೆ. ಐಎಸ್‌ಐ ಜೊತೆಗೆ ಮಾತ್ರವಲ್ಲದೆ ಈ ಗೂಢಚಾರ ಜಾಲವು ನಿಷೇಧಿತ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ (ಬಿಕೆಐ) ನೊಂದಿಗೆ ಸಂಪರ್ಕ ಹೊಂದಿದೆ ಎಂದು ಮಾಹಿತಿ ಲಭ್ಯವಾಗಿದೆ. ದೆಹಲಿ ಮತ್ತು ಪಂಜಾಬ್‌ನ ವಿವಿಧ ಸ್ಥಳಗಳಿಂದ 11 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇವರು ದೇಶದ ವಿವಿಧ ಭಾಗಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಈ ಗುಂಪು ದೇಶದ ವಿವಿಧ ಭಾಗಗಳಲ್ಲಿ ಸಕ್ರಿಯವಾಗಿದ್ದು, ಬೇಹುಗಾರಿಕೆ ಗುಂಪಾಗಿ ಮಾತ್ರವಲ್ಲದೆ ಭಯೋತ್ಪಾದಕ ಘಟಕವಾಗಿಯೂ ಕಾರ್ಯನಿರ್ವಹಿಸುತ್ತಿತ್ತು. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ದೇಶಾದ್ಯಂತ 9 ಸೂಕ್ಷ್ಮ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು ಎಂದು ತಿಳಿದುಬಂದಿದೆ. ಕಥುವಾದಿಂದ ಉತ್ತರ ಭಾರತದವರೆಗಿನ ಹಲವಾರು ಮಿಲಿಟರಿ ಪ್ರದೇಶಗಳಲ್ಲಿ ಬೇಹುಗಾರಿಕೆ ನಡೆಸಲಾಗುತ್ತಿತ್ತು.


ಇದನ್ನೂ ಓದಿ: 16 ವರ್ಷಗಳಿಂದ ಭಾರತದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಪಾಕಿಸ್ತಾನದ ಎಲ್​ಇಟಿ ಉಗ್ರ ಸೆರೆ

ಈ ಜಾಲವು ಮಿಲಿಟರಿ ನೆಲೆಗಳು, ರೈಲು ನಿಲ್ದಾಣಗಳು ಮತ್ತು ಇತರ ಸೂಕ್ಷ್ಮ ಪ್ರದೇಶಗಳ ಡೇಟಾ, ಸ್ಥಳ, ಫೋಟೋಗಳು ಮತ್ತು ವಿಡಿಯೋಗಳನ್ನು ಸಂಗ್ರಹಿಸಿ ಪಾಕಿಸ್ತಾನಕ್ಕೆ ಕಳುಹಿಸುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಇದಲ್ಲದೆ, ಈ ಆರೋಪಿಗಳು ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳನ್ನು ತರಲು ಪ್ರಯತ್ನಿಸುತ್ತಿದ್ದರು. ತನಿಖಾ ಸಂಸ್ಥೆಗಳ ಪ್ರಕಾರ, ಆರೋಪಿಗಳು ಕಂಟೋನ್ಮೆಂಟ್ ಮತ್ತು ರೈಲ್ವೆ ನಿಲ್ದಾಣದಂತಹ ಸೂಕ್ಷ್ಮ ಸ್ಥಳಗಳಲ್ಲಿ ಸೌರಶಕ್ತಿ ಚಾಲಿತ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಈ ಕ್ಯಾಮೆರಾಗಳಿಂದ ಲೈವ್ ಫೀಡ್‌ಗಳನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುತ್ತಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 pm, Fri, 10 April 26

Follow Us