AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​ನಲ್ಲಿ ಉಗ್ರ ದಾಳಿಯ ಸಂಚು ವಿಫಲಗೊಳಿಸಿದ ಭದ್ರತಾ ಪಡೆಗಳು; 19 ಗ್ರೆನೇಡ್​ ವಶ

ಪೂಂಚ್​​ನ ಫಾಗ್ಲಾ ಪ್ರದೇಶದಲ್ಲಿ ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್​ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಜ

ಪೂಂಚ್​ನಲ್ಲಿ ಉಗ್ರ ದಾಳಿಯ ಸಂಚು ವಿಫಲಗೊಳಿಸಿದ ಭದ್ರತಾ ಪಡೆಗಳು; 19 ಗ್ರೆನೇಡ್​ ವಶ
ಗ್ರೆನೇಡ್​ಗಳು
Lakshmi Hegde
|

Updated on:May 09, 2021 | 4:58 PM

Share

ಪೂಂಚ್​: ಭದ್ರತಾ ಪಡೆಗಳ ಮೇಲೆ ಅತಿದೊಡ್ಡ ಪ್ರಮಾಣದಲ್ಲಿ ದಾಳಿಗೆ ಸಂಚು ಹೂಡಿದ್ದ ಉಗ್ರರ ಯೋಜನೆಯನ್ನು ರಕ್ಷಣಾ ಸಿಬ್ಬಂದಿ ವಿಫಲಗೊಳಿಸಿದ್ದಾರೆ. ಪೂಂಚ್​ ಜಿಲ್ಲೆಯಲ್ಲಿರುವ ಭಯೋತ್ಪಾದಕರ ಅಡಗುತಾಣದಲ್ಲಿ ಸಂಗ್ರಹಿಸಿಡಲಾಗಿದ್ದ 19 ಗ್ರೆನೇಡ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ರಕ್ಷಣಾ ಇಲಾಖೆ ವಕ್ತಾರ ಭಾನುವಾರ ಮಾಹಿತಿ ನೀಡಿದ್ದಾರೆ.

ಪೂಂಚ್​​ನಲ್ಲಿ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದರು. ಅದಕ್ಕಾಗಿಯೇ ಈ ಪ್ರಮಾಣದ ಗ್ರನೇಡ್​ಗಳನ್ನು ಸಂಗ್ರಹ ಮಾಡಿಟ್ಟಿದ್ದರು. ಪೊಲೀಸ್​ ಹಾಗೂ ರಕ್ಷಣಾ ಪಡೆಗಳ ಜಂಟಿ ಕಾರ್ಯಾಚರಣೆಯಿಂದ ದಾಳಿಯ ಸಂಚನ್ನು ವಿಫಲಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೂಂಚ್​​ನ ಫಾಗ್ಲಾ ಪ್ರದೇಶದಲ್ಲಿ ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್​ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಜಮ್ಮು-ರಾಜೌರಿ-ಪೂಂಚ್​ ಹೆದ್ದಾರಿ ಎನ್​ಎಚ್​ 144A ಬಳಿ ಉಗ್ರರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂಬ ಗುಪ್ತಚರ ಇಲಾಖೆಯ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು. ಫಾಗ್ಲಾದಲ್ಲಿರುವ ಅಡಗುತಾಣದಲ್ಲಿ ಈ ಗ್ರೆನೇಡ್​ಗಳನ್ನು ಅಡಗಿಸಿ ಇಡಲಾಗಿತ್ತು ಎಂದು ವಕ್ತಾರ ವಿವರಿಸಿದ್ದಾರೆ.

ಇದನ್ನೂ ಓದಿ: ಅಗತ್ಯವಾಗಿ ರಸ್ತೆಗೆ ಬಂದು ಅವಾಜ್ ಹಾಕಿದ ಕಾರ್​ ಚಾಲಕನಿಗೆ ಲೇಡಿ ಪೊಲೀಸ್ ಪಂಚ್ ಕೊಟ್ಟಿದ್ದಾರೆ

ಲಾಕ್​ಡೌನ್ ಉಲ್ಲಂಘಿಸಿದರೆ ಬಿಡಲ್ಲ, ವಾಹನ ಸೀಜ್ ಜೊತೆ ಅರೆಸ್ಟ್ ಮಾಡ್ತಿವಿ | ಬೆಂಗಳೂರು ಪೊಲೀಸ್ ಆಯುಕ್ತ

Published On - 4:57 pm, Sun, 9 May 21

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ