Sabarimala Temple: ಶಬರಿಮಲೆಯಲ್ಲಿ ಮಕರ ಜ್ಯೋತಿ ನೋಡಲು ಜಮಾಯಿಸಿದ ಭಕ್ತರು

ಮಕರ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಶಬರಿಮಲೆಯಲ್ಲಿ ಜಮಾಯಿಸುತ್ತಿದ್ದಾರೆ. 2025ರ ಜನವರಿ 8 ರಿಂದ 15 ರವರೆಗೆ ಪ್ರತಿದಿನ 5 ಸಾವಿರ ಭಕ್ತರಿಗೆ ಮಾತ್ರ ಸನ್ನಿಧಾನಂ ಸ್ಪಾಟ್ ಬುಕಿಂಗ್ ಅನ್ನು ಸೀಮಿತಗೊಳಿಸಿದೆ.ಭಕ್ತರ ದಟ್ಟಣೆಯ ಬಗ್ಗೆ ಕೇರಳ ಹೈಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಅಲ್ಲದೆ, ಪಾಸ್ ವಿತರಣೆಯ ಮಿತಿಯನ್ನು ದಿನಕ್ಕೆ 5 ಸಾವಿರಕ್ಕೆ ಸೀಮಿತಗೊಳಿಸುವಂತೆ ನಿರ್ದೇಶನ ನೀಡಿತ್ತು

Sabarimala Temple: ಶಬರಿಮಲೆಯಲ್ಲಿ ಮಕರ ಜ್ಯೋತಿ ನೋಡಲು ಜಮಾಯಿಸಿದ ಭಕ್ತರು
ಶಬರಿಮಲೆImage Credit source: News24
Follow us
ನಯನಾ ರಾಜೀವ್
|

Updated on: Jan 14, 2025 | 10:13 AM

ಅಯ್ಯಪ್ಪ ಸ್ವಾಮಿಯನ್ನು ಪೂಜಿಸಲು ಅಪಾರ ಸಂಖ್ಯೆಯ ಭಕ್ತರು ಶಬರಿಮಲೆಗೆ ಆಗಮಿಸಿದ್ದಾರೆ. ಮಕರವಿಳಕ್ಕು ಉತ್ಸವದ ಹಿನ್ನೆಲೆಯಲ್ಲಿ ಭಕ್ತರ ಸುರಕ್ಷತೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಮಕರವಿಳಕ್ಕು ಉತ್ಸವಕ್ಕೂ ಮುನ್ನ ಅಯ್ಯಪ್ಪನ ದರ್ಶನ ಪಡೆಯಲು ಹಾಗೂ ಮಕರವಿಳಕ್ಕು ಉತ್ಸವದಲ್ಲಿ ಪಾಲ್ಗೊಳ್ಳಲು ಅಪಾರ ಸಂಖ್ಯೆಯ ಭಕ್ತರು ಶಬರಿಮಲೆ ದೇವಸ್ಥಾನಕ್ಕೆ ಆಗಮಿಸಿದ್ದಾರೆ.

ದೇವಸ್ಥಾನದಲ್ಲಿ ಭದ್ರತೆಗೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಉತ್ಸವದ ಭದ್ರತೆ ಮತ್ತು ಸುಗಮ ನಿರ್ವಹಣೆಗಾಗಿ ಒಟ್ಟು 5,000 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾತ್ರಿಕರ ಒಳಹರಿವನ್ನು ನಿರ್ವಹಿಸಲು ಮತ್ತು ಧಾರ್ಮಿಕ ಕಾರ್ಯಕ್ರಮದ ಸಮಯದಲ್ಲಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ವಿಸ್ತಾರವಾದ ಯೋಜನೆಗಳನ್ನು ಮಾಡಿದ್ದಾರೆ.

ಪಂದಳಂ ದೇವಸ್ಥಾನದಿಂದ ಶಬರಿಮಲೆಗೆ ಪವಿತ್ರ ತಿರುವಾಭರಣಂ ( ಅಯ್ಯಪ್ಪನ ಆಭರಣ) ಹೊತ್ತ ವಾರ್ಷಿಕ ಮೆರವಣಿಗೆ ಪ್ರಾರಂಭವಾಯಿತು. ಜನವರಿ 14 ರಂದು ಆಚರಿಸಲಾಗುವ ಮಕರವಿಳಕ್ಕು ಉತ್ಸವದಲ್ಲಿ ಈ ಆಭರಣಗಳನ್ನು ಅಯ್ಯಪ್ಪ ದೇವರಿಗೆ ಅಲಂಕರಿಸಲಾಗುತ್ತದೆ.

ಮತ್ತಷ್ಟು ಓದಿ: ರಾಯಚೂರು: ಹತ್ತು ವರ್ಷಗಳಿಂದ ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆಗೆ ತೆರಳುತ್ತಿದ್ದಾರೆ ಈ ಮುಸ್ಲಿಂ ವ್ಯಕ್ತಿ

ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಪ್ರತಿನಿಧಿಗಳು ಮತ್ತು ಹೆಚ್ಚಿನ ಸಂಖ್ಯೆಯ ಭಕ್ತರೊಂದಿಗೆ ತಿರುವಾಭರಣ ಘೋಷಯಾತ್ರೆ (ಮೆರವಣಿಗೆ) ಬೆಟ್ಟದ ದೇವಸ್ಥಾನಕ್ಕೆ ಪ್ರಯಾಣವನ್ನು ಪ್ರಾರಂಭಿಸಿತು.

ಜನವರಿ 12ರ ಭಾನುವಾರ 60,000, ಜನವರಿ 13ರ ಸೋಮವಾರ 50,000 ಹಾಗೂ ಜನವರಿ 14ರ ಮಂಗಳವಾರ 40,000 ಬುಕಿಂಗ್ ಗೆ ಮಿತಿಗೊಳಿಸಲಾಗಿದೆ ಎಂದು ವರದಿಯಾಗಿದೆ.

ಸಂಜೆ 6:00 ರಿಂದ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಮಕರವಿಳಕ್ಕು ಉತ್ಸವ ಜನವರಿ 19 ರಂದು ಕೊನೆಗೊಳ್ಳುತ್ತದೆ. ಮಕರ ಜ್ಯೋತಿ ದರ್ಶನಕ್ಕಾಗಿ ಈಗಾಗಲೇ ಹಲವು ಭಕ್ತರು ಶಬರಿಮಲೆಗೆ ಆಗಮಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ
ಬೆಂಗಳೂರಿನ ಬಯೋ ಇನ್ನೋವೇಶನ್ ಸೆಂಟರ್​ನಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಬಯೋ ಇನ್ನೋವೇಶನ್ ಸೆಂಟರ್​ನಲ್ಲಿ ಅಗ್ನಿ ಅವಘಡ
ಬಿಗ್ ಬಾಸ್ ಮುಗಿದ ಬಳಿಕ ಎಲ್​ಎಲ್​ಬಿ ಓದಲು ರೆಡಿ ಆದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮುಗಿದ ಬಳಿಕ ಎಲ್​ಎಲ್​ಬಿ ಓದಲು ರೆಡಿ ಆದ ಚೈತ್ರಾ ಕುಂದಾಪುರ