PM Modi in Chennai ತಮಿಳು ಭಾಷೆಗೆ ಹಿಂದಿಯ ಸ್ಥಾನ ನೀಡಿ: ವೇದಿಕೆ ಮೇಲೆ ಪ್ರಧಾನಿ ಮೋದಿಗೆ ಮನವಿ ಮಾಡಿದ ಸ್ಟಾಲಿನ್

ಗೌರವಾನ್ವಿತ ಪ್ರಧಾನಮಂತ್ರಿಗಳೇ, ತಮಿಳುನಾಡು ಆರ್ಥಿಕ ಬೆಳವಣಿಗೆ, ಗ್ರಾಮೀಣ ಆರೋಗ್ಯ ಸೌಲಭ್ಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪ್ರಮುಖ ರಾಜ್ಯವಾಗಿದೆ. ನಮ್ಮ ರಾಜ್ಯವು ಆರ್ಥಿಕ ಮತ್ತು ಇತರ ಸಂಬಂಧಿತ ಅಂಶಗಳಲ್ಲಿ ಮಾತ್ರವಲ್ಲದೆ ಸಾಮಾಜಿಕ ನ್ಯಾಯ...

PM Modi in Chennai ತಮಿಳು ಭಾಷೆಗೆ ಹಿಂದಿಯ ಸ್ಥಾನ ನೀಡಿ: ವೇದಿಕೆ ಮೇಲೆ ಪ್ರಧಾನಿ ಮೋದಿಗೆ ಮನವಿ ಮಾಡಿದ ಸ್ಟಾಲಿನ್
ಎಂಕೆ ಸ್ಟಾಲಿನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 26, 2022 | 9:07 PM

ಚೆನ್ನೈ: ತಮಿಳು ಭಾಷೆಗೆ ಹಿಂದಿಯ (Hindi) ಸ್ಥಾನ ನೀಡಬೇಕು, ಮದ್ರಾಸ್ ಹೈಕೋರ್ಟ್‌ನಲ್ಲಿ ತಮಿಳು ಭಾಷೆಯನ್ನು ಅಧಿಕೃತವಾಗಿ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಪ್ರಧಾನಿ ನರೇಂದ್ರ ಮೋದಿಯವರಲ್ಲಿ (Narendra Modi) ಮನವಿ ಮಾಡಿದ್ದಾರೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ವೇದಿಕೆ ಹಂಚಿಕೊಂಡಿದ್ದಾರೆ. 2021ರ ವಿಧಾನಸಭಾ ಚುನಾವಣೆಯ ನಂತರ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (DMK) ಅಧಿಕಾರಕ್ಕೆ ಬಂದ ನಂತರ ಮೋದಿ ಅವರು ಮೊದಲ ಬಾರಿಗೆ ದಕ್ಷಿಣ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ತಮಿಳು ಭಾಷೆ ಶಾಶ್ವತ ಮತ್ತು ತಮಿಳು ಸಂಸ್ಕೃತಿ ಜಾಗತಿಕವಾಗಿದೆ ಎಂದಿದ್ದಾರೆ. ಸ್ಟಾಲಿನ್ ತಮ್ಮ ಭಾಷಣದಲ್ಲಿ ರಾಜ್ಯದಲ್ಲಿ ಅನುಸರಿಸುತ್ತಿರುವ ದ್ರಾವಿಡ ಮಾದರಿಯ ಬಗ್ಗೆ ಮಾತನಾಡಿದ್ದಾರೆ. ಇಲ್ಲಿ ಸಮಗ್ರ ಬೆಳವಣಿಗೆ ಕಂಡುಬಂದಿದೆ. ಹಾಗಾಗಿ ತಮಿಳುನಾಡು ಹಲವಾರು ನಿಯತಾಂಕಗಳಲ್ಲಿ ಪ್ರಮುಖ ರಾಜ್ಯಗಳಲ್ಲಿ ಒಂದಾಗಲು ಸಹಾಯ ಮಾಡಿದೆ ಎಂದಿದ್ದಾರೆ ಅವರು. “ಗೌರವಾನ್ವಿತ ಪ್ರಧಾನಮಂತ್ರಿಗಳೇ, ತಮಿಳುನಾಡು ಆರ್ಥಿಕ ಬೆಳವಣಿಗೆ, ಗ್ರಾಮೀಣ ಆರೋಗ್ಯ ಸೌಲಭ್ಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪ್ರಮುಖ ರಾಜ್ಯವಾಗಿದೆ. ನಮ್ಮ ರಾಜ್ಯವು ಆರ್ಥಿಕ ಮತ್ತು ಇತರ ಸಂಬಂಧಿತ ಅಂಶಗಳಲ್ಲಿ ಮಾತ್ರವಲ್ಲದೆ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಮಹಿಳಾ ಉದ್ಯೋಗದಲ್ಲಿಯೂ ಮೇಲ್ಪಂಕ್ತಿಯಲ್ಲಿದ್ದೇವೆ ಎಂದು ಸ್ಟಾಲಿನ್ ಹೇಳಿದರು.

ತಮಿಳುನಾಡು ಅಂತರ್ಗತ ಬೆಳವಣಿಗೆಯ ರಾಜ್ಯವಾಗಿದೆ. ಇದನ್ನೇ ನಾವು ದ್ರಾವಿಡ ಮಾದರಿ ಎನ್ನುತ್ತೇವೆ. ಈ ದ್ರಾವಿಡ ಮಾದರಿಯ ಆಡಳಿತದಲ್ಲಿ, ವಿವಿಧ ಕಲ್ಯಾಣ ಮತ್ತು ಅಭಿವೃದ್ಧಿ ಕ್ರಮಗಳನ್ನು ತೆಗೆದುಕೊಳ್ಳುವಾಗ, ನಾವು ಹಣಕಾಸಿನ ಅಸಮತೋಲನವನ್ನು ಸರಿಪಡಿಸಿದ್ದೇವೆ ಮತ್ತು ರಾಜ್ಯದ ಹಣಕಾಸುಗಳನ್ನು ಪುನರ್ರಚಿಸಿದ್ದೇವೆ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ ಎಂದಿದ್ದಾರೆ ಸ್ಟಾಲಿನ್.

ಇತ್ತೀಚೆಗೆ ರಾಜ್ಯ ವಿಧಾನಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಿದ ನಂತರ ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ (NEET) ನಿಂದ ತಮಿಳುನಾಡಿಗೆ ವಿನಾಯಿತಿ ನೀಡುವಂತೆ ಸ್ಟಾಲಿನ್ ಕರೆ ನೀಡಿದರು.   ರಾಜ್ಯಪಾಲ ಆರ್.ಎನ್.ರವಿ ಅವರು ಈ ಮಸೂದೆಯನ್ನು ಕೇಂದ್ರಕ್ಕೆ ಇನ್ನೂ ರವಾನಿಸಿಲ್ಲ. ಅವರು ಮಸೂದೆಯನ್ನು ಅನುಮೋದಿಸುವ ಅಗತ್ಯ ರಾಜ್ಯಕ್ಕಿಲ್ಲ. ಆದರೆ ಅದನ್ನು “ಪೋಸ್ಟ್‌ಮ್ಯಾನ್‌ನಂತೆ” ರಾಷ್ಟ್ರಪತಿಗಳ ಒಪ್ಪಿಗೆಗೆ ಕಳುಹಿಸಬೇಕು ಎಂದಿದ್ದಾರೆ. ಸುಮಾರು 200 ದಿನಗಳ ನಂತರ ರಾಜ್ಯಪಾಲರು ಈ ಹಿಂದೆ ಮಸೂದೆಯನ್ನು ಹಿಂದಿರುಗಿಸಿದ್ದರು. ತಮಿಳುನಾಡು ವಿಧಾನಸಭೆಯು ಮತ್ತೊಮ್ಮೆ ಮಸೂದೆಯನ್ನು ಅವಿರೋಧವಾಗಿ ಅಂಗೀಕರಿಸಿ ರಾಜ್ಯಪಾಲರಿಗೆ ಕಳುಹಿಸಿದ್ದು, ಅವರು ಅದನ್ನು ಕೇಂದ್ರಕ್ಕೆ ಕಳುಹಿಸುತ್ತಾರೆ ಎಂದು ಭಾವಿಸಿದೆ.

ಇದನ್ನೂ ಓದಿ
Image
ತಮಿಳು ಭಾಷೆ ಮತ್ತು ಸಂಸ್ಕೃತಿಯನ್ನು ಜನಪ್ರಿಯಗೊಳಿಸಲು ಸರ್ಕಾರ ಬದ್ಧ: ಚೆನ್ನೈನಲ್ಲಿ ಪ್ರಧಾನಿ ಮೋದಿ
Image
ಈ ಬಾರಿ ರಾಷ್ಟ್ರಮಟ್ಟದಲ್ಲಿ ಬದಲಾವಣೆಯಾಗಲಿದೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಮೋದಿ ವಾಗ್ದಾಳಿಗೆ ಕೆಸಿಆರ್ ಪ್ರತಿಕ್ರಿಯೆ
Image
PM Modi in Hyderabad: ಹೈದರಾಬಾದಿನಲ್ಲಿ ಯೋಗಿ ಆದಿತ್ಯನಾಥರನ್ನು ಹೊಗಳಿ, KCR ಕುಟುಂಬವಾದಕ್ಕೆ ಛೀಮಾರಿ ಹಾಕಿದ ಪ್ರಧಾನಿ ಮೋದಿ! ಇನ್ನೂ ಏನು ಹೇಳಿದರು?
Image
Bharat Drone Mahotsav 2022 ಭಾರತ್ ಡ್ರೋನ್ ಮಹೋತ್ಸವವನ್ನು ನಾಳೆ ಉದ್ಘಾಟಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ನೀಟ್ ಪರೀಕ್ಷೆಯನ್ನು ತಮಿಳುನಾಡು ವಿರೋಧಿಸುತ್ತಿದ್ದು, ಇದು ಖಾಸಗಿ ತರಬೇತಿಯನ್ನು ಪಡೆಯಲು ಸಾಧ್ಯವಾಗುವವರಿಗೆ ಅನುಕೂಲಕರವಾಗಿದೆ. ಬಡ ವಿದ್ಯಾರ್ಥಿಗಳಿಗೆ ಮತ್ತು ಹಳ್ಳಿಗಳಲ್ಲಿ ವಾಸಿಸುವವರು ಅವಕಾಶ ವಂಚಿತರಾಗುತ್ತಾರೆ ಎಂದು ವಾದಿಸಿದೆ. ಸುಮಾರು ಒಂದು ದಶಕದಿಂದ, ರಾಜ್ಯ ಸರ್ಕಾರವು ವಿದ್ಯಾರ್ಥಿಗಳ 12 ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 8:49 pm, Thu, 26 May 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್