Malappuram: ಪ್ರವಾಸಿಗರಿದ್ದ ಬೋಟ್ ಪಲ್ಟಿ: ಆರು ಮಕ್ಕಳು, ಮಹಿಳೆಯರು ಸೇರಿದಂತೆ 15 ಜನರು ದುರ್ಮರಣ
ಮಲಪ್ಪುರಂ ಜಿಲ್ಲೆಯ ತಿರೂರು ತಾಲೂಕಿನ ತಾನೂರ್ ಬಳಿ ಬೋಟ್ ಪಲ್ಟಿಯಾಗಿ 15 ಜನರು ದುರ್ಮರಣ ಹೊಂದಿದ್ದಾರೆ ಎಂದು ಸಚಿವ ವಿ ಅಬ್ದುರಾಹಿಮಾನ್ ದೃಢಪಡಿಸಿದ್ದಾರೆ.
ಕೇರಳ: ಮಲಪ್ಪುರಂ (Malappuram) ಜಿಲ್ಲೆಯ ತಿರೂರು ತಾಲೂಕಿನ ತಾನೂರ್ ಬಳಿ ಬೋಟ್ ಪಲ್ಟಿಯಾಗಿ ಆರು ಮಕ್ಕಳು, ಮಹಿಳೆಯರು ಸೇರಿದಂತೆ 15 ಜನರು ದುರ್ಮರಣ ಹೊಂದಿದ್ದಾರೆ ಎಂದು ಸಚಿವ ವಿ ಅಬ್ದುರಾಹಿಮಾನ್ ದೃಢಪಡಿಸಿದ್ದಾರೆ. ಸುಮಾರು 30ರಿಂದ 40ಕ್ಕೂ ಹೆಚ್ಚು ಪ್ರವಾಸಿಗರಿದ್ದ ಬೋಟ್ ಪಲ್ಟಿಯಾಗಿ ದುರಂತ ಸಂಭವಿಸಿದೆ. ದುರಂತದಲ್ಲಿ ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಗ್ನಿಶಾಮಕ ದಳ, ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದೆ. ತೂವಲ್ ತೀರ್ಥಂ ಪ್ರವಾಸಿ ತಾಣದ ಪುರಪುಜಾ ನದಿಯಲ್ಲಿ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಟೈಮ್ಸ್ ನೌ ವರದಿ ಪ್ರಕಾರ ಈವರೆಗೆ ಸುಮಾರು 10 ಜನರನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ, ಬೋಟ್ನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ಜೀವ ರಕ್ಷಕ ಸಾಧನಗಳು ಇರಲಿಲ್ಲವೆಲ್ಲಾಗಿದೆ. ದೋಣಿ ದಡದಿಂದ 300 ಮೀಟರ್ ದೂರಲ್ಲಿದೆ.
#UPDATE | The Death toll has increased to 15 in boat capsize accident in Malappuram district of Kerala: Minister V Abdurahiman
— ANI (@ANI) May 7, 2023
ಇದನ್ನೂ ಓದಿ: Uttar Pradesh Accident: ಉತ್ತರಪ್ರದೇಶದಲ್ಲಿ ಪಿಕಪ್, ಟ್ರಕ್ ಡಿಕ್ಕಿಯಾಗಿ 8 ಜನರು ದುರ್ಮರಣ
ದೋಣಿಯಲ್ಲಿದ್ದ ಪ್ರಯಾಣಿಕರು ಮಲಪ್ಪುರಂ ಜಿಲ್ಲೆಯ ಪರಪ್ಪನಂಗಡಿ ಮತ್ತು ತನೂರ್ ಪ್ರದೇಶಗಳಿಗೆ ಸೇರಿದವರು ಎಂದು ಗುರತಿಸಲಾಗಿದೆ. ಇಲ್ಲಿನ ಮನರಂಜನಾ ದೋಣಿ ಸೇವೆಗಳಿಗೆ ಸಂಜೆ 5 ರವರೆಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.
ಮತ್ತಷ್ಟು ರಾಷ್ಟೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:23 pm, Sun, 7 May 23