AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India-Maldives Row: ಮಾಲ್ಡೀವ್ಸ್ ರಾಯಭಾರಿಗೆ ಸಮನ್ಸ್ ನೀಡಿದ ಭಾರತ

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾಲ್ಡೀವ್ಸ್ ಸಚಿವರು ಮಾಡಿರುವ ವಿವಾದಾತ್ಮಕ ಹೇಳಿಕೆಯಿಂದ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಈ ಮಧ್ಯೆ ಭಾರತದ ವಿದೇಶಾಂಗ ಸಚಿವಾಲಯ ಮಾಲ್ಡೀವ್ಸ್‌ನ ರಾಯಭಾರಿಗೆ ಸಮನ್ಸ್‌ ನೀಡಿದೆ. ಮಾಲ್ಡೀವ್ಸ್ ರಾಯಭಾರಿ ಇಬ್ರಾಹಿಂ ಶಾಹಿಬ್ ದೆಹಲಿಯ ಸೌತ್ ಬ್ಲಾಕ್‌ನಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ತೆರಳಿದ್ದಾರೆ. ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗಳ ಕುರಿತು ಸಚಿವರ ಕಾಮೆಂಟ್‌ಗಳ ಬಗ್ಗೆ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ನಯನಾ ರಾಜೀವ್
|

Updated on: Jan 08, 2024 | 10:44 AM

Share

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾಲ್ಡೀವ್ಸ್ ಸಚಿವರು ಮಾಡಿರುವ ವಿವಾದಾತ್ಮಕ ಹೇಳಿಕೆಯಿಂದ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಈ ಮಧ್ಯೆ ಭಾರತದ ವಿದೇಶಾಂಗ ಸಚಿವಾಲಯ ಮಾಲ್ಡೀವ್ಸ್‌ನ ರಾಯಭಾರಿಗೆ ಸಮನ್ಸ್‌ ನೀಡಿದೆ. ಮಾಲ್ಡೀವ್ಸ್ ರಾಯಭಾರಿ ಇಬ್ರಾಹಿಂ ಶಾಹಿಬ್ ದೆಹಲಿಯ ಸೌತ್ ಬ್ಲಾಕ್‌ನಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ತೆರಳಿದ್ದಾರೆ. ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗಳ ಕುರಿತು ಸಚಿವರ ಕಾಮೆಂಟ್‌ಗಳ ಬಗ್ಗೆ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಮಾಲ್ಡೀವ್ಸ್ ಸರ್ಕಾರ ಇದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿಕೆ ನೀಡಿದೆ. ಚಿವರ ಅವಹೇಳನಕಾರಿ ಹೇಳಿಕೆಗಳ ನಂತರ, ಮಾಲ್ಡೀವ್ಸ್ ವಿರುದ್ಧ ಭಾರತದಲ್ಲಿ ವಿರೋಧ ಪ್ರಾರಂಭವಾಯಿತು. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಲ್ಡೀವ್ಸ್ ವಿರುದ್ಧ ಪ್ರತಿಭಟನೆ ನಡೆಸಿದರು.

#BoycottMaldives ಭಾನುವಾರದಂದು ಭಾರತದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಅನೇಕ ಜನರು ತಮ್ಮ ರದ್ದಾದ ವಿಮಾನ ಪ್ರಯಾಣ ಮತ್ತು ಹೋಟೆಲ್ ಬುಕಿಂಗ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಮತ್ತಷ್ಟು ಓದಿ: ಪ್ರಧಾನಿ ಮೋದಿ ವಿರುದ್ಧ ಲೇವಡಿ, ಮಾಲ್ಡೀವ್ಸ್​ಗೆ ತೆರಳುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದ EaseMyTrip

ಸೋಮವಾರ, ಭಾರತೀಯ ಟ್ರಾವೆಲ್ ದೈತ್ಯ EaseMyTrip ಮಾಲ್ಡೀವ್ಸ್‌ಗೆ ಎಲ್ಲಾ ವಿಮಾನಗಳ ಬುಕಿಂಗ್ ರದ್ದುಗೊಳಿಸಿದೆ. ಈ ವಿವಾದವು ಮಾಲ್ಡೀವ್ಸ್ ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತವನ್ನು ಉಂಟುಮಾಡಬಹುದು ಎಂದು ಹೇಳಲಾಗುತ್ತಿದೆ.

ಮೂವರು ಮಂತ್ರಿಗಳಾದ ಮರ್ಯಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜಿದ್ ಅವರನ್ನು ಅಮಾನತುಗೊಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ

ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ

ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ