AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್​ ನಿಷೇಧಕ್ಕೆ ಸರ್ದಾರ್ ಪಟೇಲ್ ಪತ್ರ ಬರೆದಿದ್ದರು; ಮಲ್ಲಿಕಾರ್ಜುನ ಖರ್ಗೆ

ಇಂದು ಉಕ್ಕಿನ ಮನುಷ್ಯ ಎಂದೇ ಹೆಸರಾದ ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ. ಸರ್ದಾರ್ ಪಟೇಲ್ ಅವರು ಆರ್​ಎಸ್​ಎಸ್​, ಸಂಘ ಪರಿವಾರದ ರೀತಿಯ ಸಂಘಟನೆಗಳ ಚಟುವಟಿಕೆಗಳನ್ನು ನಿಗ್ರಹಿಸುವ ಬಗ್ಗೆ 1948ರಲ್ಲೇ ಪತ್ರ ಬರೆದಿದ್ದರು ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರ್​ಎಸ್​ಎಸ್​ ಅನ್ನು ನಿಷೇಧ ಮಾಡಬೇಕೆಂದು ಪುನರುಚ್ಛರಿಸಿದ್ದಾರೆ. ತಮ್ಮ ಈ ಬೇಡಿಕೆಗೆ ಸರ್ದಾರ್ ಪಟೇಲ್ ಬರೆದಿದ್ದರು ಎನ್ನಲಾದ ಪತ್ರವನ್ನು ಉಲ್ಲೇಖಿಸಿದ್ದಾರೆ.

ಆರ್​ಎಸ್​ಎಸ್​ ನಿಷೇಧಕ್ಕೆ ಸರ್ದಾರ್ ಪಟೇಲ್ ಪತ್ರ ಬರೆದಿದ್ದರು; ಮಲ್ಲಿಕಾರ್ಜುನ ಖರ್ಗೆ
Mallikarjun Kharge
ಸುಷ್ಮಾ ಚಕ್ರೆ
|

Updated on:Oct 31, 2025 | 5:41 PM

Share

ನವದೆಹಲಿ, ಅಕ್ಟೋಬರ್ 31: ಆರ್​ಎಸ್​ಎಸ್​ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ತನ್ನ ಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಈ ನಡುವೆ ದೇಶಾದ್ಯಂತ ಆರ್​ಎಸ್​ಎಸ್​ (RSS) ಅನ್ನು ನಿಷೇಧಿಸಬೇಕೆಂದು ಕಾಂಗ್ರೆಸ್ ಹಾಗೂ ಆರ್​ಜೆಡಿ ಒತ್ತಾಯಿಸುತ್ತಲೇ ಇದೆ. ತಮ್ಮ ಈ ಹಿಂದಿನ ಮನವಿಯನ್ನು ಪುನರುಚ್ಛರಿಸಿರುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳನ್ನು ತಂದೊಡ್ಡುತ್ತಿರುವ ಆರ್​ಎಸ್​ಎಸ್​ ಸಂಘಟನೆಯನ್ನು ಬ್ಯಾನ್ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಭಾರತದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಚೌಕಟ್ಟನ್ನು ರಕ್ಷಿಸಲು ಒಮ್ಮೆ ಸರ್ದಾರ್ ವಲ್ಲಭಭಾಯಿ ಪಟೇಲ್ ಇದೇ ರೀತಿಯ ನಿರ್ಬಂಧಗಳನ್ನು ವಿಧಿಸಿದ್ದರು ಎಂದು ನೆನಪಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ನಿಷೇಧ ಹೇರಬೇಕೆಂದು ಒತ್ತಾಯಿಸಿದ್ದಾರೆ.

“ಆರ್‌ಎಸ್‌ಎಸ್ ಅನ್ನು ನಿಷೇಧಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಸರ್ಕಾರಿ ಸೇವೆಯಲ್ಲಿರುವಾಗ ಆರ್‌ಎಸ್‌ಎಸ್‌ಗಾಗಿ ಕೆಲಸ ಮಾಡಬಾರದು ಎಂದು ಸರ್ದಾರ್ ಪಟೇಲ್ ಕೂಡ ಹೇಳಿದ್ದರು. ಆಗ ಹೇರಿದ್ದ ನಿಷೇಧವನ್ನು ಮೋದಿ ಸರ್ಕಾರ 2024ರಲ್ಲಿ ತೆಗೆದುಹಾಕಿತ್ತು. ಜಮಾತ್-ಇ-ಇಸ್ಲಾಮಿ ಮತ್ತು ಆರ್‌ಎಸ್‌ಎಸ್ ರೀತಿಯ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದನ್ನು ಸರ್ದಾರ್ ಪಟೇಲ್ ಅವರು ನಿಷೇಧಿಸಿದ್ದರು. ಈ ನಿಷೇಧವನ್ನು ಪುನಃಸ್ಥಾಪಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಖರ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಅಕ್ಟೋಬರ್ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ಆರ್​ಎಸ್​ಎಸ್​ ಮಹಿಳಾ ಸಮನ್ವಯ ಕಾರ್ಯಾಗಾರ

ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯಂದು ಅವರನ್ನು ಸ್ಮರಿಸಿದ ಮಲ್ಲಿಕಾರ್ಜುನ ಖರ್ಗೆ, “ಸರ್ದಾರ್ ಪಟೇಲ್ ಅವರು ದೇಶವನ್ನು ಒಗ್ಗೂಡಿಸಿದರು. ದೇಶಕ್ಕೆ ಸರ್ದಾರ್ ಪಟೇಲ್ ಅವರ ಕೊಡುಗೆ ಅಪಾರ ಎಂದು ಜವಾಹರಲಾಲ್ ನೆಹರು ನಂಬಿದ್ದರು. ಫೆಬ್ರವರಿ 4, 1948ರಂದು, ಸರ್ದಾರ್ ಪಟೇಲ್ ಆರ್‌ಎಸ್‌ಎಸ್ ಬಗ್ಗೆ ಪತ್ರ ಬರೆದಿದ್ದರು. ಆರ್‌ಎಸ್‌ಎಸ್ ಗಾಂಧೀಜಿಯವರ ಮರಣವನ್ನು ಆಚರಿಸಿತು ಮತ್ತು ಸಿಹಿತಿಂಡಿಗಳನ್ನು ವಿತರಿಸಿತು” ಎಂದು ಕಾಂಗ್ರೆಸ್ ಮುಖ್ಯಸ್ಥ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: ಸರ್ದಾರ್ ಪಟೇಲ್ ಮೇಲೆ ಮುಸ್ಲಿಂ ಲೀಗ್​ನಿಂದ ನಡೆದಿತ್ತು 2 ಮಾರಕ ದಾಳಿ; 86 ವರ್ಷದ ಹಿಂದಿನ ಕತೆ ಬಿಚ್ಚಿಟ್ಟ ಬಿಜೆಪಿ

ಈ ವೇಳೆ ಸರ್ದಾರ್ ಪಟೇಲ್ ಅವರು ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಬರೆದ ಪತ್ರವನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಉಲ್ಲೇಖಿಸಿದ್ದಾರೆ. ಅದರಲ್ಲಿ ಆಗಿನ ಗೃಹ ಸಚಿವ ಸರ್ದಾರ್ ಪಟೇಲ್ “ಆರ್‌ಎಸ್‌ಎಸ್ ಮಹಾತ್ಮ ಗಾಂಧಿಯವರ ಹತ್ಯೆಯ ದುರಂತಕ್ಕೆ ಕಾರಣವಾದ ವಾತಾವರಣವನ್ನು ಸೃಷ್ಟಿಸಿದೆ. ಇಂತಹ ಪರಿಸ್ಥಿತಿಯಲ್ಲಿ ನಮಗೆ ಆರ್​ಎಸ್​ಎಸ್​ ಅನ್ನು ನಿಷೇಧಿಸದ ಬೇರೆ ದಾರಿಯಿಲ್ಲ” ಎಂದು ಹೇಳಿದ್ದರು ಎಂದಿದ್ದಾರೆ.

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಸರ್ದಾರ್ ಪಟೇಲ್ ನಡುವಿನ ಬಿರುಕು ಚಿತ್ರಿಸುವ ಮೂಲಕ ಬಿಜೆಪಿ ಇತಿಹಾಸವನ್ನು ವಿರೂಪಗೊಳಿಸುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:33 pm, Fri, 31 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ