AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mallikarjun Kharge: ಲೋಕಸಭಾ ಚುನಾವಣೆ ನಿಮಗೆ ಮತ ಚಲಾಯಿಸಲಿರುವ ಕೊನೇ ಅವಕಾಶ, ಆಮೇಲೆ ಪ್ರಜಾಪ್ರಭುತ್ವವಿರಲ್ಲ: ಖರ್ಗೆ

ರಾಹುಲ್ ಗಾಂಧಿ ದೇಶವನ್ನು ಒಂದುಗೂಡಿಸಲು ಬಯಸುತ್ತಾರೆ, ಅವರು 'ಮೊಹಬ್ಬತ್ ಕಿ ದುಕಾನ್' ತೆರೆದಿದ್ದಾರೆ. ಆದರೆ ಬಿಜೆಪಿ ಮತ್ತು ಆರೆಸ್ಸೆಸ್ ನಫ್ರತ್ ಕಿ ದುಕಾನ್ ತೆರೆದಿವೆ. ಈ ಕಾರಣದಿಂದಾಗಿ ನೀವು ಜಾಗರೂಕರಾಗಿರಬೇಕು. ಬಿಜೆಪಿ ಮತ್ತು ಆರೆಸ್ಸೆಸ್ ವಿಷ, ಅವರು ನಮ್ಮ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Mallikarjun Kharge: ಲೋಕಸಭಾ ಚುನಾವಣೆ ನಿಮಗೆ ಮತ ಚಲಾಯಿಸಲಿರುವ ಕೊನೇ ಅವಕಾಶ, ಆಮೇಲೆ ಪ್ರಜಾಪ್ರಭುತ್ವವಿರಲ್ಲ: ಖರ್ಗೆ
ಮಲ್ಲಿಕಾರ್ಜುನ ಖರ್ಗೆ
ರಶ್ಮಿ ಕಲ್ಲಕಟ್ಟ
|

Updated on:Jan 29, 2024 | 5:49 PM

Share

ಭುವನೇಶ್ವರ ಜನವರಿ 29: ನರೇಂದ್ರ ಮೋದಿ (Narendra Modi) ಅವರು ಅಧಿಕಾರವನ್ನು ಉಳಿಸಿಕೊಂಡರೆ 2024ರ ಲೋಕಸಭೆ ಚುನಾವಣೆ (Lok Sabha Election) ಭಾರತದ ಕೊನೆಯ ಚುನಾವಣೆಯಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೋಮವಾರ ಹೇಳಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಈ ವರ್ಷದ ಸಾರ್ವತ್ರಿಕ ಚುನಾವಣೆಯ ನಂತರ ಪ್ರಧಾನಿ ಮೋದಿ ಸರ್ವಾಧಿಕಾರವನ್ನು ಘೋಷಿಸುತ್ತಾರೆ ಎಂದಿದ್ದಾರೆ. ಲೋಕಸಭಾ ಚುನಾವಣೆಯ ನಂತರ ಮೋದಿ ಅಧಿಕಾರಕ್ಕೆ ಬಂದರೆ, ಅಲ್ಲಿ ಸರ್ವಾಧಿಕಾರವಿರುತ್ತದೆ, ಪ್ರಜಾಪ್ರಭುತ್ವ ಮತ್ತು ಚುನಾವಣೆಗಳಿರಲ್ಲ” ಎಂದು ಖರ್ಗೆ ಹೇಳಿರುವುದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 2024ರ ಸಾರ್ವತ್ರಿಕ ಚುನಾವಣೆ ದೇಶದ ಜನತೆಗೆ ಮತ ಹಾಕಲು ಕೊನೆಯ ಅವಕಾಶ ಎಂದಿದ್ದಾರೆ ಖರ್ಗೆ.

“ಪ್ರತಿಯೊಬ್ಬರಿಗೂ (ಇಡಿ) ನೋಟಿಸ್ ನೀಡುತ್ತಿದ್ದಾರೆ. ಜನರನ್ನು ಹೆದರಿಸುತ್ತಿದ್ದಾರೆ.ಭಯದಿಂದ ಕೆಲವರು ಗೆಳೆತನ ತೊರೆಯುತ್ತಿದ್ದಾರೆ, ಕೆಲವರು ಪಕ್ಷ ತೊರೆಯುತ್ತಿದ್ದಾರೆ ಮತ್ತು ಕೆಲವರು ಮೈತ್ರಿ ತೊರೆಯುತ್ತಿದ್ದಾರೆ. ಮತ ಚಲಾಯಿಸಲು ಇದು ನಿಮಗೆ ಕೊನೆಯ ಅವಕಾಶ ಇದಾದ ನಂತರ ಯಾವುದೇ ಮತದಾನ ಇರುವುದಿಲ್ಲ ಎಂದು ಖರ್ಗೆ ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್ ವಿರುದ್ಧ ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ ಖರ್ಗೆ, ಅದು “ವಿಷ” ಎಂದಿದ್ದಾರೆ.

ರಾಹುಲ್ ಗಾಂಧಿ ದೇಶವನ್ನು ಒಂದುಗೂಡಿಸಲು ಬಯಸುತ್ತಾರೆ, ಅವರು ‘ಮೊಹಬ್ಬತ್ ಕಿ ದುಕಾನ್’ ತೆರೆದಿದ್ದಾರೆ. ಆದರೆ ಬಿಜೆಪಿ ಮತ್ತು ಆರೆಸ್ಸೆಸ್ ನಫ್ರತ್ ಕಿ ದುಕಾನ್ ತೆರೆದಿವೆ. ಈ ಕಾರಣದಿಂದಾಗಿ ನೀವು ಜಾಗರೂಕರಾಗಿರಬೇಕು. ಬಿಜೆಪಿ ಮತ್ತು ಆರೆಸ್ಸೆಸ್ ವಿಷ, ಅವರು ನಮ್ಮ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಖರ್ಗೆ ಹೇಳಿದರು.

ಬಿಜೆಡಿ ಮುಖ್ಯಸ್ಥ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ “ಸ್ನೇಹ” ದ ಬಗ್ಗೆ ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷರು, ನರೇಂದ್ರ ಮೋದಿ ಅವರೊಂದಿಗಿನ ಸ್ನೇಹದಿಂದ ನವೀನ್ ಪಟ್ನಾಯಕ್ ಅವರು ಏನು ಗಳಿಸಿದರು? ಡಬಲ್ ಎಂಜಿನ್ ಕೆಲವೊಮ್ಮೆ ವಿಫಲಗೊಳ್ಳುತ್ತದೆ. ಡಬಲ್ ಎಂಜಿನ್ ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ, ಮೊದಲ ಎಂಜಿನ್ ಸಹ ವಿಫಲಗೊಳ್ಳುತ್ತದೆ ಎಂದಿದ್ದಾರೆ. ಅಂದಹಾಗೆ ಸಂಸತ್ತಿನಲ್ಲಿ ಬಿಜೆಡಿ ಆಗಾಗ್ಗೆ ಬಿಜೆಪಿಯ ಪರವಾಗಿ ನಿಲ್ಲುತ್ತದೆ.

ಇದನ್ನೂ ಓದಿ:Suvendu Adhikari: ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಸುವೇಂದು ಅಧಿಕಾರಿ ವಿರುದ್ಧ ಗುಡುಗಿದ ಟಿಎಂಸಿ 

ಇಂಡಿಯಾ ಬಣದಿಂದ ನಿತೀಶ್ ಕುಮಾರ್ ನಿರ್ಗಮನದ ಕುರಿತು ಮಾತನಾಡಿದ ಅವರು, ಒಬ್ಬ ವ್ಯಕ್ತಿ ಮೈತ್ರಿಯಿಂದ ಹೊರಬರುವುದರಿಂದ ಚುನಾವಣಾ ಫಲಿತಾಂಶಗಳ ಮೇಲೆ ಪರಿಣಾಮ ಬೀರುವುದಿಲ್ಲ. ಇದು ನಮ್ಮನ್ನು ದುರ್ಬಲಗೊಳಿಸುವುದಿಲ್ಲ. ನಾವು ಬಿಜೆಪಿಯನ್ನು ಸೋಲಿಸುತ್ತೇವೆ ಎಂದು ಹೇಳಿದ್ದಾರೆ.

ನಿತೀಶ್ ಕುಮಾರ್ ಅವರು ಭಾನುವಾರ ಇಂಡಿಯಾ ಮೈತ್ರಿ ತೊರೆದು ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದರು. ಜನತಾ ದಳ (ಯುನೈಟೆಡ್) ಪಕ್ಷವು ಇಂಡಿಯಾ ಬ್ಲಾಕ್‌ನ ನಾಯಕತ್ವವನ್ನು ಕದಿಯಲು ಪ್ರಯತ್ನಿಸಿದೆ ಎಂದು ಹೇಳುವ ಮೂಲಕ ಈ ವೈಫಲ್ಯಕ್ಕೆ ಕಾಂಗ್ರೆಸ್ ಅನ್ನು ದೂಷಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Mon, 29 January 24

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ