ರಾಹುಲ್ ಗಾಂಧಿ ವಿರುದ್ಧ ಕೋರ್ಟ್ ತೀರ್ಪು ಬಗ್ಗೆ ಚರ್ಚಿಸಲು ಕಾಂಗ್ರೆಸ್ ನಾಯಕರ ಸಭೆ ಕರೆದ ಮಲ್ಲಿಕಾರ್ಜುನ ಖರ್ಗೆ

|

Updated on: Mar 23, 2023 | 10:05 PM

ಜುಲೈ 2013ರ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಲೋಕಸಭೆಯಿಂದ ಅನರ್ಹಗೊಳಿಸುವ ಸಾಧ್ಯತೆಯಿರುವ ಕಾರಣ ಗಾಂಧಿ ಅವರು ಶುಕ್ರವಾರ ಸಂಸತ್ತಿಗೆ ಹೋಗಬೇಕೆ ಎಂಬ ಬಗ್ಗೆ ಭಿನ್ನಾಭಿಪ್ರಾಯವಿದೆ ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ವಿರುದ್ಧ ಕೋರ್ಟ್ ತೀರ್ಪು ಬಗ್ಗೆ ಚರ್ಚಿಸಲು ಕಾಂಗ್ರೆಸ್ ನಾಯಕರ ಸಭೆ ಕರೆದ ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Follow us on

ದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಗುರುವಾರ ತಮ್ಮ ನಿವಾಸದಲ್ಲಿ ಪಕ್ಷದ ಉನ್ನತ ನಾಯಕರ ಸಭೆ ಕರೆದಿದ್ದು, ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯವು (Surat court) ರಾಹುಲ್ ಗಾಂಧಿಗೆ (Rahul Gandhi)  ವರ್ಷ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಉದ್ಭವಿಸಿರುವ ಪರಿಸ್ಥಿತಿಯ ಕುರಿತು ಚರ್ಚಿಸಲು ನಿರ್ಧರಿಸಿದ್ದಾರೆ. ಪಕ್ಷದ ಸಂಸದರು ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಸಂಜೆ ಖರ್ಗೆ ಅವರ ನಿವಾಸದಲ್ಲಿ ಸೇರಿದ್ದು ರಾಹುಲ್ ಗಾಂಧಿಯವರ ಶಿಕ್ಷೆ ಬಗ್ಗೆ ಚರ್ಚಿಸಿದ್ದಾರೆ. ಗುಜರಾತಿನ ಸೂರತ್‌ನಲ್ಲಿರುವ ನ್ಯಾಯಾಲಯವು ಗುರುವಾರ ಗಾಂಧಿಯವರಿಗೆ 2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎಲ್ಲಾ ಕಳ್ಳರ ಸರ್ ನೇಮ್ ಮೋದಿ ಎಂದು ಯಾಕಿದೆ?ಎಂಬ ಹೇಳಿಕೆಗಾಗಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ನ್ಯಾಯಾಲಯವು ಮಾಜಿ ಕಾಂಗ್ರೆಸ್ ಮುಖ್ಯಸ್ಥರಿಗೆ ಜಾಮೀನು ನೀಡಿದ್ದು, ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲು ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಿದೆ.

ಸೂರತ್ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಲು ಮತ್ತು ಉನ್ನತ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ತಕ್ಷಣದ ಕಾನೂನು ಪರಿಹಾರಗಳನ್ನು ತೆಗೆದುಕೊಳ್ಳಬೇಕು ಎಂದು ಪಕ್ಷದ ಮುಖಂಡರು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಳು ಅವರು ದೇಶದ ಸಂಸ್ಥೆಗಳನ್ನು ಗೌರವಿಸುವುದಿಲ್ಲ ಎಂಬುದನ್ನು ತೋರಿಸುತ್ತದೆ: ಪ್ರಲ್ಹಾದ್ ಜೋಶಿ

ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗುವುದು.
ಜುಲೈ 2013ರ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಲೋಕಸಭೆಯಿಂದ ಅನರ್ಹಗೊಳಿಸುವ ಸಾಧ್ಯತೆಯಿರುವ ಕಾರಣ ಗಾಂಧಿ ಅವರು ಶುಕ್ರವಾರ ಸಂಸತ್ತಿಗೆ ಹೋಗಬೇಕೆ ಎಂಬ ಬಗ್ಗೆ ಭಿನ್ನಾಭಿಪ್ರಾಯವಿದೆ ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ವಿರುದ್ಧದ ಸೂರತ್ ಕೋರ್ಟ್ ತೀರ್ಪನ್ನು ಕಾನೂನು ತಜ್ಞರು ಪರಿಶೀಲಿಸಲಿದ್ದು, ಆ ಬಳಿಕವೇ ಮುಂದಿನ ಕ್ರಮದ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ