ಬಿಜೆಪಿಯಿಂದ ಅಘೋಷಿತ ತುರ್ತು ಪರಿಸ್ಥಿತಿ ಹೇರಿಕೆ; ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ತುರ್ತು ಪರಿಸ್ಥಿತಿ ಘೋಷಿಸಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿದವರಿಗೆ ಸಂವಿಧಾನದ ಮೇಲೆ ಪ್ರೀತಿ ತೋರುವ ಹಕ್ಕು ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದರು. ಈ ಟೀಕೆಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.

ಬಿಜೆಪಿಯಿಂದ ಅಘೋಷಿತ ತುರ್ತು ಪರಿಸ್ಥಿತಿ ಹೇರಿಕೆ; ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು
ಮಲ್ಲಿಕಾರ್ಜುನ ಖರ್ಗೆ Image Credit source: PTI
Follow us
|

Updated on: Jun 25, 2024 | 7:04 PM

ನವದೆಹಲಿ: ತುರ್ತು ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತಿರುಗೇಟು ನೀಡಿದ್ದು, ಮೋದಿ ಕೇಂದ್ರದಲ್ಲಿ ಕಳೆದ 10 ವರ್ಷಗಳ ಅಧಿಕಾರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ” ಜಾರಿಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮ ವೈಫಲ್ಯಗಳನ್ನು ಮರೆಮಾಚಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಗತಕಾಲವನ್ನು ಮೆಲುಕು ಹಾಕುತ್ತಿದ್ದಾರೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಮ್ಮ ವೈಫಲ್ಯಗಳನ್ನು ಮರೆಮಾಚಲು ಭೂತಕಾಲವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. “ನರೇಂದ್ರ ಮೋದಿಯವರೇ, ನಮ್ಮ ದೇಶವು ಭವಿಷ್ಯವನ್ನು ಎದುರು ನೋಡುತ್ತಿದೆ. ಆದರೆ, ನಿಮ್ಮ ವೈಫಲ್ಯಗಳನ್ನು ಮರೆಮಾಡಲು ನೀವು ಹಿಂದಿನದನ್ನು ಮತ್ತೆ ಕೆದಕುತ್ತಿದ್ದೀರಿ. ಕಳೆದ 10 ವರ್ಷಗಳಲ್ಲಿ ನೀವು 140 ಕೋಟಿ ಭಾರತೀಯರಿಗೆ ‘ಅಘೋಷಿತ ತುರ್ತುಸ್ಥಿತಿ’ ಏನೆಂದು ಅನುಭವ ಉಂಟಾಗುವಂತೆ ಮಾಡಿದ್ದೀರಿ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಭಾರೀ ಆಘಾತವನ್ನು ಉಂಟುಮಾಡಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವದ ಮೇಲಿನ ಕಪ್ಪು ಚುಕ್ಕೆ ಎಂದ ಮೋದಿ; ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಪಕ್ಷಗಳನ್ನು ಒಡೆಯುವುದು, ಚುನಾಯಿತ ಸರ್ಕಾರಗಳನ್ನು ಹಿಂಬಾಗಿಲಿನ ಮೂಲಕ ಉರುಳಿಸುವುದು, ಇಡಿ, ಸಿಬಿಐ, ಐಟಿಯಂತಹ ಸಂಸ್ಥೆಗಳ ದುರುಪಯೋಗ, ಪ್ರತಿಪಕ್ಷಗಳ ನಾಯಕರ ವಿರುದ್ಧ ಕುರಂತ್ರ, ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕುವುದು, ಚುನಾವಣೆಗೆ ಮುನ್ನ ಅಧಿಕೃತ ಯಂತ್ರೋಪಕರಣಗಳನ್ನು ಬಳಸುವುದು ಇವೆಲ್ಲವೂ ಅಘೋಷಿತ ತುರ್ತು ಪರಿಸ್ಥಿತಿಯಲ್ಲವೇ?” ಎಂದು ಮೋದಿ ಕೇಳಿದ್ದಾರೆ.

ಪ್ರಧಾನಿ ಮೋದಿ ಹೇಳಿದ್ದೇನು?:

ತುರ್ತು ಪರಿಸ್ಥಿತಿಯನ್ನು ಹೇರಿದವರಿಗೆ ಸಂವಿಧಾನದ ಮೇಲಿನ ಪ್ರೀತಿಯನ್ನು ಪ್ರತಿಪಾದಿಸುವ ಹಕ್ಕಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ ನಂತರ ಅವರ ಟೀಕೆಗಳು ಹೊರಬಿದ್ದಿವೆ. ತುರ್ತು ಪರಿಸ್ಥಿತಿ ಹೇರಲು ಕಾರಣವಾದ ಮನಸ್ಥಿತಿಯು ಅದನ್ನು ಹೇರಿದ ಅದೇ ಪಕ್ಷದಲ್ಲಿ ಹೆಚ್ಚು ಜೀವಂತವಾಗಿದೆ. ಅವರು ತಮ್ಮ ಟೋಕನಿಸಂ ಮೂಲಕ ಸಂವಿಧಾನದ ಬಗ್ಗೆ ತಮ್ಮ ತಿರಸ್ಕಾರವನ್ನು ಮರೆಮಾಡುತ್ತಾರೆ ಎಂದು ಮೋದಿ ಹೇಳಿದ್ದರು.

ಇದನ್ನೂ ಓದಿ: ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ

ಜೂನ್ 25, 1975ರಂದು ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದರು. ನಾಗರಿಕ ಸ್ವಾತಂತ್ರ್ಯಗಳನ್ನು ವಜಾಗೊಳಿಸಿದರು. ವಿರೋಧ ಪಕ್ಷದ ನಾಯಕರು ಮತ್ತು ಭಿನ್ನಮತೀಯರನ್ನು ಜೈಲಿಗೆ ಹಾಕಿದರು. ಪತ್ರಿಕಾ ಸೆನ್ಸಾರ್​ಶಿಪ್ ಅನ್ನು ಜಾರಿಗೊಳಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ