AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದ ಬಗ್ಗೆ ಪ್ರಧಾನಿ ಮೋದಿ ವಿಸ್ತೃತ ಹೇಳಿಕೆ ನೀಡಲಿ: ಸಂಸತ್​​ನಲ್ಲಿ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ಮಣಿಪುರ ಹೊತ್ತಿ ಉರಿಯುತ್ತಿದೆ, ಮಹಿಳೆಯರ ಮೇಲೆ ಅತ್ಯಾಚಾರ, ಬೆತ್ತಲೆ ಮೆರವಣಿಗೆ, ಭೀಕರ ಹಿಂಸಾಚಾರ ನಡೆಯುತ್ತಿದೆ. ಆದರೆ ಪ್ರಧಾನಿಯವರು ಇವತ್ತಿನವರೆಗೂ ಮೌನವಾಗಿದ್ದರು.ಸಂಸತ್ತಿನ ಹೊರಗೆ ಮಾತ್ರ ಹೇಳಿಕೆ ನೀಡಿದ್ದಾರೆ ಎಂದು ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಹೇಳಿದ್ದಾರೆ.

ಮಣಿಪುರದ ಬಗ್ಗೆ ಪ್ರಧಾನಿ ಮೋದಿ ವಿಸ್ತೃತ ಹೇಳಿಕೆ ನೀಡಲಿ: ಸಂಸತ್​​ನಲ್ಲಿ ಮಲ್ಲಿಕಾರ್ಜುನ ಖರ್ಗೆ ಒತ್ತಾಯ
ಮಲ್ಲಿಕಾರ್ಜುನ ಖರ್ಗೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 20, 2023 | 5:24 PM

Share

ದೆಹಲಿ ಜುಲೈ 20:ಇಬ್ಬರು ಕುಕಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವಿಡಿಯೊ ವೈರಲ್ ಆದ ನಂತರ ಮಣಿಪುರದಲ್ಲಿ (Manipur) ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮಾತನಾಡಿದ್ದಾರೆ. ಏತನ್ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಮೋದಿ ಸಂಸತ್​​ನಲ್ಲಿ ಈ ಬಗ್ಗೆ ವಿಸ್ತೃತ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. “ಮಣಿಪುರ ಹೊತ್ತಿ ಉರಿಯುತ್ತಿದೆ, ಮಹಿಳೆಯರ ಮೇಲೆ ಅತ್ಯಾಚಾರ, ಬೆತ್ತಲೆ ಮೆರವಣಿಗೆ, ಭೀಕರ ಹಿಂಸಾಚಾರ ನಡೆಯುತ್ತಿದೆ. ಆದರೆ ಪ್ರಧಾನಿಯವರು ಇವತ್ತಿನವರೆಗೂ ಮೌನವಾಗಿದ್ದರು. ಸಂಸತ್ತಿನ ಹೊರಗೆ ಮಾತ್ರ ಹೇಳಿಕೆ ನೀಡಿದ್ದಾರೆ ಎಂದು ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಹೇಳಿದ್ದಾರೆ.

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕೂಡಲೇ ರಾಜೀನಾಮೆ ನೀಡಬೇಕು. ಈಶಾನ್ಯ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಖರ್ಗೆ ಒತ್ತಾಯಿಸಿದರು.

ಸಂಸತ್ತಿನ ಮುಂಗಾರು ಅಧಿವೇಶನವು ಮಣಿಪುರ ಹಿಂಸಾಚಾರದ ಬಗ್ಗೆ ಗದ್ದಲದೊಂದಿಗೆ ಪ್ರಾರಂಭವಾಯಿತು, ಉಭಯ ಸದನಗಳನ್ನು ಸೋಮವಾರ ದಿನದ ಮಟ್ಟಿಗೆ ಮುಂದೂಡಲಾಯಿತು. ಲೋಕಸಭೆಯು ಮಧ್ಯಾಹ್ನ 2 ಗಂಟೆಗೆ ಮುಗಿಯುತ್ತಿದ್ದಂತೆ ಹಲವು ವಿರೋಧ ಪಕ್ಷದ ನಾಯಕರು ‘ಮಣಿಪುರ ಮಣಿಪುರ’ ಮತ್ತು ‘ಮಣಿಪುರ ಉರಿಯುತ್ತಿದೆ’ ಎಂಬ ಘೋಷಣೆಗಳನ್ನು ಕೂಗುತ್ತಿದ್ದರು.

ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ; ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ಮಾಡುತ್ತೇವೆ: ಸುಪ್ರೀಂಕೋರ್ಟ್

ಮಣಿಪುರ ಕುರಿತು ಪ್ರಧಾನಿ ಮೋದಿ ಹೇಳಿಕೆ

ಸಂಸತ್ ಅಧಿವೇಶನದ ಮೊದಲು, ಮಣಿಪುರದ ಪರಿಸ್ಥಿತಿಯ ಮಾತನಾಡಿದ ಮೋದಿ, “ಇದು ಯಾವುದೇ ಸಮಾಜಕ್ಕೆ ನಾಚಿಕೆಗೇಡಿನ ಘಟನೆ.. ಇದನ್ನು ಯಾರು ಮಾಡಿದರು ಮತ್ತು ಯಾರು ಹೊಣೆ ಎಂಬುದು ಮತ್ತೊಂದು ವಿಷಯ. ಆದರೆ ಇದು ನಮ್ಮ ದೇಶಕ್ಕೆ ನಾಚಿಕೆಗೇಡನ್ನುಂಟು ಮಾಡಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಬಿಗಿಗೊಳಿಸುವಂತೆ ನಾನು ಎಲ್ಲ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಅದು ರಾಜಸ್ಥಾನ, ಛತ್ತೀಸ್‌ಗಢ ಅಥವಾ ಮಣಿಪುರವೇ ಆಗಿರಲಿ… ಮಹಿಳೆಯ ಗೌರವದ ವಿಷಯವು ಎಲ್ಲ ರಾಜಕೀಯಕ್ಕಿಂತ ಮಿಗಿಲಾಗಿದೆ ಎಂದಿದ್ದಾರೆ.

ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ

ಮೇ 4 ರಂದು ಇಬ್ಬರು ಮಹಿಳೆಯರನ್ನು  ಕೆಲವು ಪುರುಷರು ಬೆತ್ತಲೆಯಾಗಿ ಮೆರವಣಿಗೆ ಮಾಡುವುದನ್ನು ತೋರಿಸುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ. ಹಸಿರು ಟೀ ಶರ್ಟ್ ಧರಿಸಿ ಮಹಿಳೆಯನ್ನು ಹಿಡಿದಿದ್ದ ಪ್ರಮುಖ ಆರೋಪಿಯನ್ನು ಸರಿಯಾದ ಗುರುತಿನ ನಂತರ ಕಾರ್ಯಾಚರಣೆಯಲ್ಲಿ ಇಂದು ಬೆಳಿಗ್ಗೆ ಬಂಧಿಸಲಾಗಿದೆ. ಈತನ ಹೆಸರು  ಹುಯಿರೆಮ್ ಹೆರೋಡಾಸ್ ಮೈಟೆಯಿ (32 ವರ್ಷ) ಎಂದು ಸರ್ಕಾರಿ ಮೂಲಗಳು ಹೇಳಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Thu, 20 July 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!