ನೆಹರೂ ವಿಚಾರದಲ್ಲಿ ಬಿಜೆಪಿ ದೇಶದ ಹಾದಿ ತಪ್ಪಿಸುತ್ತಿದೆ; ಮಲ್ಲಿಕಾರ್ಜುನ ಖರ್ಗೆ ಆರೋಪ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕಟುವಾಗಿ ಟೀಕಿಸಿದ್ದಾರೆ. ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವವರ ಇಮೇಜ್ ಅನ್ನು ಸ್ವಚ್ಛಗೊಳಿಸಲು ಅಮಿತ್ ಶಾ "ದೊಡ್ಡ ವಾಷಿಂಗ್ ಮೆಷಿನ್" ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನೆಹರೂ ವಿಚಾರದಲ್ಲಿ ಬಿಜೆಪಿ ದೇಶದ ಹಾದಿ ತಪ್ಪಿಸುತ್ತಿದೆ; ಮಲ್ಲಿಕಾರ್ಜುನ ಖರ್ಗೆ ಆರೋಪ
ಮಲ್ಲಿಕಾರ್ಜುನ ಖರ್ಗೆ
Follow us
ಸುಷ್ಮಾ ಚಕ್ರೆ
|

Updated on:Dec 16, 2024 | 7:51 PM

ನವದೆಹಲಿ: ರಾಜ್ಯಸಭಾ ಅಧಿವೇಶನದಲ್ಲಿ ಇಂದು ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜವಾಹರಲಾಲ್ ನೆಹರು, ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಂತಹ ರಾಷ್ಟ್ರೀಯ ನಾಯಕರ ಪರಂಪರೆಯನ್ನು ಬಿಜೆಪಿ ತಿರುಚುತ್ತಿದೆ ಎಂದು ಖರ್ಗೆ ಆರೋಪಿಸಿದರು. 1950ರಲ್ಲಿ ವಲ್ಲಭಬಾಯಿ ಪಟೇಲ್ ನೆಹರೂಗೆ ಬರೆದ ಪತ್ರವನ್ನು ಉಲ್ಲೇಖಿಸಿದ ಮಲ್ಲಿಕಾರ್ಜುನ ಖರ್ಗೆ, “ಜುಲೈ 3, 1950ರಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ನೆಹರೂ ಅವರಿಗೆ ಸಂವಿಧಾನದ ತಿದ್ದುಪಡಿಗಳು ದೇಶದ ಸಮಸ್ಯೆಗಳಿಗೆ ಏಕೈಕ ಪರಿಹಾರ ಎಂದು ಬರೆದಿದ್ದರು. ಆದರೆ, ಸತ್ಯಗಳನ್ನು ತಿರುಚುವ ಮೂಲಕ, ಪಟೇಲರ ಕೊಡುಗೆಗಳನ್ನು ಸಹ ಅಗೌರವಿಸಲಾಗಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

ಇಂದು ಮುಂಜಾನೆ ಮೇಲ್ಮನೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯನ್ನು ಆರಂಭಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಸೇರಿದಂತೆ ಮಾಜಿ ಕಾಂಗ್ರೆಸ್ ನಾಯಕರ ವಿರುದ್ಧ ಕಟುವಾಗಿ ವಾಗ್ದಾಳಿ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಜವಾಹರಲಾಲ್ ನೆಹರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದ ಬಗ್ಗೆ “ಸತ್ಯವನ್ನು ತಿರುಚುತ್ತಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಅದಕ್ಕೆ ಪ್ರತಿಯಾಗಿ ಮೇಲ್ಮನೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನೆಹರೂ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಮೋದಿ ವಾಸ್ತವವನ್ನು ತಿರುಚುವ ಮೂಲಕ ನೆಹರೂ ಅವರ ಮಾನಹಾನಿ ಮಾಡಲು ಪ್ರಯತ್ನಿಸಿದ್ದಾರೆ. ಇದಕ್ಕಾಗಿ ಅವರು ದೇಶದ ಕ್ಷಮೆ ಯಾಚಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಮ್ಮ ದೇಶದ ಭೂಮಿಯನ್ನು ಭಾರತದ ವಿರುದ್ಧ ಬಳಸಲು ಬಿಡುವುದಿಲ್ಲ; ಮೋದಿಗೆ ಶ್ರೀಲಂಕಾ ಅಧ್ಯಕ್ಷ ಭರವಸೆ

ಪ್ರಧಾನಿಯಾಗಿ, ಮಾಜಿ ಪ್ರಧಾನಿ ಜವಹರಲಾಲ್ ನೆಹರೂ ಅವರು ಮುಖ್ಯಮಂತ್ರಿಗಳಿಗೆ 15 ದಿನಕ್ಕೊಮ್ಮೆ ಪತ್ರಗಳನ್ನು ಬರೆಯುವ ಅಭ್ಯಾಸವನ್ನು ಹೊಂದಿದ್ದರು. ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ಮತ್ತು 15ರಂದು ಅವರು ಪತ್ರ ಬರೆಯುತ್ತಿದ್ದರು. ಇದು ಸ್ವಾತಂತ್ರ್ಯದ ನಂತರ ಅವರು ಪ್ರಾರಂಭಿಸಿದ ಅಭ್ಯಾಸವಾಗಿತ್ತು ಮತ್ತು ಅವರ ಮರಣದ ಕೆಲವು ತಿಂಗಳುಗಳವರೆಗೂ ಇದು ಮುಂದುವರೆಯಿತು. ನೆಹರೂ ಅವರು ಸುಮಾರು 400 ಪತ್ರಗಳನ್ನು ಬರೆದರು. ಅವರು ವಿವಿಧ ವಿಷಯಗಳ ಬಗ್ಗೆ ಅವರ ಅಭಿಪ್ರಾಯಗಳ ಮೇಲೆ ಬೆಳಕು ಚೆಲ್ಲುತ್ತಿದ್ದರು ಎಂದು ಖರ್ಗೆ ಹೇಳಿದ್ದಾರೆ.

ಬಿಜೆಪಿ ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ. ಆಡಳಿತ ಪಕ್ಷದ ಕ್ರಮಗಳು ಮೀಸಲಾತಿ ವ್ಯವಸ್ಥೆಯನ್ನು ಕಿತ್ತುಹಾಕುವ ಗುರಿಯನ್ನು ಹೊಂದಿವೆ ಎಂದು ಖರ್ಗೆ ಆರೋಪಿಸಿದ್ದಾರೆ. ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದವರು ಡಾ.ಬಿ.ಆರ್. ಅಂಬೇಡ್ಕರ್. ಆದರೆ, ಬಿಜೆಪಿಯವರು ಮೊದಲಿನಿಂದಲೂ ಅಂಬೇಡ್ಕರ್ ಅವರನ್ನು ಗೌರವಿಸಿಲ್ಲ. ಹಿಂದಿನ ಆರ್‌ಎಸ್‌ಎಸ್ ನಾಯಕರು ಸಂವಿಧಾನಕ್ಕೆ ವಿರುದ್ಧವಾಗಿದ್ದರು. ಬಿಜೆಪಿ ಜಾತಿ ಗಣತಿಯನ್ನು ವಿರೋಧಿಸುತ್ತಿದೆ ಮತ್ತು ಅಂಬೇಡ್ಕರ್ ನೀಡಿದ ಕೊಡುಗೆಗಳನ್ನು ಅಗೌರವಿಸಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ ಮತ್ತು ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ನಾವು ಸುಳ್ಳು ಹೇಳುತ್ತೇವೆ ಎಂದು ಪ್ರಧಾನಿ ಮೋದಿ ಹೇಳುತ್ತಿದ್ದರು. ಆದರೆ, ನಂಬರ್ ಒನ್ ಸುಳ್ಳುಗಾರ ಪ್ರಧಾನಿ ಮೋದಿ. ಜನರಿಗೆ 15 ಲಕ್ಷ ಬರುವುದಾಗಿ ಹೇಳಿದ್ದರೂ ಏನೂ ಬಂದಿಲ್ಲ. ಬಿಜೆಪಿಯವರು ಸುಳ್ಳು ಹೇಳುವ ಮೂಲಕ ದೇಶವನ್ನು ದಾರಿ ತಪ್ಪಿಸುತ್ತಿದ್ದಾರೆ ಮತ್ತು ಜನರನ್ನು ವಂಚಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಹೆಚ್ಚಿದ ಹಿಂಸಾಚಾರ; ಅಮಿತ್ ಶಾ ಮಹತ್ವದ ಸಭೆ, 50 ಕೇಂದ್ರೀಯ ತುಕಡಿಗಳ ನಿಯೋಜನೆ

ಅಮಿತ್ ಶಾ ವಿರುದ್ಧ ಟೀಕೆ:

ಅಮಿತ್ ಶಾ ಬಿಜೆಪಿಯನ್ನು ವಾಷಿಂಗ್ ಮಷಿನ್ ಆಗಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿಯನ್ನು “ದೊಡ್ಡ ವಾಷಿಂಗ್ ಮೆಷಿನ್” ಆಗಿ ಪರಿವರ್ತಿಸಿದ್ದಾರೆ ಎಂದು ಆರೋಪಿಸಿದ ಮಲ್ಲಿಕಾರ್ಜುನ ಖರ್ಗೆ, ಹಗರಣ, ಅಪವಾದಗಳನ್ನು ಹೊಂದಿರುವ ರಾಜಕಾರಣಿಗಳನ್ನು ಶುದ್ಧೀಕರಿಸುತ್ತಾರೆ ಎಂದಿದ್ದಾರೆ.

ಸಂವಿಧಾನದ ಮೇಲಿನ ಚರ್ಚೆಯ ವೇಳೆ ಮೇಲ್ಮನೆಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಅಮಿತ್ ಶಾ ಅವರು ದೊಡ್ಡ ವಾಷಿಂಗ್ ಮೆಷಿನ್ ಖರೀದಿಸಿದ್ದಾರೆ. ಬಿಜೆಪಿಯ ಒಳಗೆ ಹೋದವರು ಶುದ್ಧವಾಗಿ ಹೊರಬರುತ್ತಾರೆ. ಒಂದು ರಾಜ್ಯ ಅಥವಾ ಪ್ರದೇಶವು ನಿಮಗೆ ಮತ ಹಾಕದಿದ್ದರೆ ಅವರ ವಿರುದ್ಧ ನೀವು ಸೇಡು ತೀರಿಸಿಕೊಳ್ಳುವುದು ಸರಿಯಲ್ಲ ಎಂದು ಖರ್ಗೆ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 pm, Mon, 16 December 24

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!