AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಜರಾತ್ ಜನ ಅನಕ್ಷರಸ್ಥರು’ ಎಂದಿದ್ದ ಖರ್ಗೆ: ವಿವಾದ ಭುಗಿಲೇಳುತ್ತಿದ್ದಂತೆ ಕ್ಷಮೆಯಾಚಿಸಿದ ಕಾಂಗ್ರೆಸ್ ಅಧ್ಯಕ್ಷ

ಗುಜರಾತ್ ಜನರ ಬಗ್ಗೆ ತಾವು ನೀಡಿದ್ದ ಹೇಳಿಕೆಯ ಸುತ್ತಲಿನ ವಿವಾದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗ ಸ್ಪಷ್ಟನೆ ನೀಡಿದ್ದಾರೆ. ಅವರು ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಯಾರ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ತಮ್ಮ ಚುನಾವಣಾ ಭಾಷಣವನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ನಿರೂಪಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರು ಗುಜರಾತಿಗಳನ್ನು ಕಡಿಮೆ ವಿದ್ಯಾವಂತರು ಎಂದು ಕರೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

‘ಗುಜರಾತ್ ಜನ ಅನಕ್ಷರಸ್ಥರು’ ಎಂದಿದ್ದ ಖರ್ಗೆ: ವಿವಾದ ಭುಗಿಲೇಳುತ್ತಿದ್ದಂತೆ ಕ್ಷಮೆಯಾಚಿಸಿದ ಕಾಂಗ್ರೆಸ್ ಅಧ್ಯಕ್ಷ
ಮಲ್ಲಿಕಾರ್ಜುನ ಖರ್ಗೆ Image Credit source: PTI
ನಯನಾ ರಾಜೀವ್
|

Updated on:Apr 08, 2026 | 3:18 PM

Share

ನವದೆಹಲಿ, ಏಪ್ರಿಲ್ 08: ಕೇರಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗುಜರಾತ್ ಜನರ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಕ್ಷಮೆಯಾಚಿಸಿದ್ದಾರೆ. ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿಯೇ ತಿರುಚಲಾಗಿದೆ, ನಾನು ಕ್ಷಮೆಯಾಚಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಗುಜರಾತ್ ಜನ ಅನಕ್ಷರಸ್ಥರು ಎಂದು ಖರ್ಗೆ ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. ಕೇರಳದಲ್ಲಿ ಮಾಡಿದ ಚುನಾವಣಾ ಭಾಷಣದ ಬಗ್ಗೆ ಖರ್ಗೆ ಸ್ಪಷ್ಟೀಕರಣ ನೀಡಿದ್ದು, ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ  ಅರ್ಥೈಸಲಾಗುತ್ತಿದೆ ಎಂದು ಹೇಳಿದ್ದಾರೆ.

ಗುಜರಾತ್ ಜನರ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ನಾವು ಎಂದೂ ಹೊಂದಿಲ್ಲ. ಗುಜರಾತ್ ಜನರ ಬಗ್ಗೆ ತಮಗೆ ಯಾವಾಗಲೂ ಗೌರವವಿದೆ ಮತ್ತು ಮುಂದೆಯೂ ಇರುವುದಾಗಿ ಅವರು ಹೇಳಿದರು. ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಕೇರಳದ ಜನರ ಶಿಕ್ಷಣ ಮತ್ತು ಬುದ್ಧಿವಂತಿಕೆಯನ್ನು ಶ್ಲಾಘಿಸಿದರು.

ಗುಜರಾತ್ ಮತ್ತು ಇತರ ಸ್ಥಳಗಳಲ್ಲಿರುವಂತೆ, ಕಡಿಮೆ ಶಿಕ್ಷಣ ಹೊಂದಿರುವವರನ್ನು ಮೂರ್ಖರನ್ನಾಗಿಸಬಹುದು ಎಂದು ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿಕೊಂಡು ಅವರು ಟೀಕಿಸಿದ್ದರು. ಕೇರಳದ ಮತದಾರರನ್ನು ದಾರಿ ತಪ್ಪಿಸುವುದು ಅಸಾಧ್ಯ ಎಂದು ಅವರು ಹೇಳಿದ್ದರು.

ಮತ್ತಷ್ಟು ಓದಿ: RSS ಬಗ್ಗೆ ಅವಹೇಳನಕಾರಿ ಮಾತು: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಿಡಿದೆದ್ದ ಬಿಜೆಪಿ, ದೂರು ದಾಖಲು

ಈ ಹೇಳಿಕೆಯ ನಂತರ, ಭಾರತೀಯ ಜನತಾ ಪಕ್ಷವು ಕಾಂಗ್ರೆಸ್ ವಿರುದ್ಧ ಹೋರಾಟ ಆರಂಭಿಸಿತು. ಇದು ಕಾಂಗ್ರೆಸ್‌ನ ಒಡೆದು ಆಳುವ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ವಕ್ತಾರ ಶಹಜಾದ್ ಪೂನಾವಾಲಾ ಹೇಳಿದ್ದರು. ಹಿರಿಯ ನಾಯಕ ರವಿಶಂಕರ್ ಪ್ರಸಾದ್ ಈ ಹೇಳಿಕೆಯನ್ನು ನಾಚಿಕೆಗೇಡಿನ ಸಂಗತಿ ಎಂದು ಕರೆದರು.

ಮಲ್ಲಿಕಾರ್ಜುನ ಖರ್ಗೆ ಪೋಸ್ಟ್​

ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಮತ್ತು ಮೊರಾರ್ಜಿ ದೇಸಾಯಿ ಅವರಂತಹ ಮಹಾನ್ ವ್ಯಕ್ತಿಗಳು ಸಹ ಅನಕ್ಷರಸ್ಥರೇ ಎಂದು ಅವರು ಪ್ರಶ್ನಿಸಿದರು. ಖರ್ಗೆ ಅವರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯಿಸಿತು ಮತ್ತು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಈ ವಿಷಯದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಳಿದ್ದಾರೆ.

ಮೋದಿ ಜೀ ನೀವು ಗುಜರಾತ್​​ನ ಅನಕ್ಷರಸ್ಥ ಜನರನ್ನು ಮರುಳು ಮಾಡಬಹುದು, ಆದರೆ ನೀವು ಕೇರಳದ ಜನರನ್ನು ಮರುಳು ಮಾಡುವುದು ಅಸಾಧ್ಯ ಎಂದು ಖರ್ಗೆ ಹೇಳಿದ್ದರು. ಖರ್ಗೆ ಹೇಳಿಕೆಯನ್ನು ಖಂಡಿಸಿದ ಬಿಜೆಪಿ ನಾಯಕರು ವಿರೋಧ ಪಕ್ಷದ ಡಿಎನ್​ಎಯಲ್ಲಿ ಗುಜರಾತ್ ವಿರೋಧಿ ವಿಷವಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:17 pm, Wed, 8 April 26

Follow Us