ಮತ್ತೆ ನಾಲಿಗೆ ಹರಿಬಿಟ್ಟ ಎಐಸಿಸಿ ಅಧ್ಯಕ್ಷ: ಪ್ರಧಾನಿ ಮೋದಿ ತಂದೆಯನ್ನೇ ಸುಳ್ಳಗಾರ ಎಂದ ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ವಿಷದ ಹಾವಿದ್ದಂತೆ, ನೆಕ್ಕಿದರೆ ಸತ್ತು ಹೋಗುತ್ತಾರೆ ಎಂದು ಹೇಳಿದ್ದರು. ಅದೇ ರೀತಿಯಾಗಿ ಇದೀಗ ಮತ್ತೆ ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ನಾಲಿಗೆ ಹರಿಬಿಟ್ಟಿದ್ದು, ಪ್ರಧಾನಿ ತಂದೆಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ವಿಷದ ಹಾವಿದ್ದಂತೆ, ನೆಕ್ಕಿದರೆ ಸತ್ತು ಹೋಗುತ್ತಾರೆ ಎಂದು ಹೇಳಿದ್ದರು. ಅದೇ ರೀತಿಯಾಗಿ ಇದೀಗ ಮತ್ತೆ ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ನಾಲಿಗೆ ಹರಿಬಿಟ್ಟಿದ್ದು, ಪ್ರಧಾನಿ ತಂದೆಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸಭೆಯೊಂದರಲ್ಲಿ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ಅವರನ್ನು ಸುಳ್ಳುಗಾರ ಎಂದಿದ್ದಾರೆ. ಇದನ್ನು ನಾವು ಹೇಳಿದರೆ ಜನರಿಗೆ ಸಿಟ್ಟು ಬರುತ್ತದೆ. ಒಂದು ಪಕ್ಷ ಪ್ರಧಾನಿ ಮೋದಿ ಅವರನ್ನು ಬಿಡಿ ಆದರೆ ಅವರ ತಂದೆ ಕೂಡ ಸುಳ್ಳಗಾರ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.
ಪರಶಿಷ್ಟ ಜಾತಿಗಳ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರಿಗೆ ಸವಾಲು ಹಾಕಿದ್ದಾರೆ. ಪರಿಶಿಷ್ಟ ಜಾತಿಗಳ ವರ್ಗೀಕರಣದ ಬೇಡಿಕೆಗೆ ಸಂಬಂಧಿಸಿದಂತೆ ಮಾದಿಗರ (ಎಸ್‌ಸಿ ಸಮುದಾಯ) ಸಬಲೀಕರಣಕ್ಕಾಗಿ ಸಮಿತಿಯನ್ನು ಸ್ಥಾಪಿಸುವ ಕುರಿತು ಪ್ರಧಾನಿ ಮೋದಿ ಅವರ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಮೋದಿ ಅವರಿಗೆ ಅಧಿಕಾರ ಮತ್ತು ಬಹುಮತ ಇರುವಾಗ ಅದನ್ನು ಜಾರಿಗೆ ತರಲು ಏನು ಅಡ್ಡಿಯಾಗಿತ್ತು ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ತೆಲಂಗಾಣ ಚುನಾವಣೆ: ಕಾಂಗ್ರೆಸ್ನಿಂದ ಪ್ರಣಾಳಿಕೆ ಬಿಡುಗಡೆ, ಕರ್ನಾಟಕದಂತೆಯೇ ಖಾತರಿಗಳ ಘೋಷಣೆ ಮಾಡಿದ ಖರ್ಗೆ
ನೀನು ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. ಇದನ್ನು ಮಾಡದಂತೆ ನಿಮ್ಮನ್ನು ತಡೆದವರು ಯಾರು? ಆದರೆ ನೀನು ಮಾಡಲಿಲ್ಲ. ಈಗ ಆ ನಿಟ್ಟಿನಲ್ಲಿ ಸಮಿತಿ ರಚಿಸುವುದಾಗಿ ಹೇಳಿದ್ದೀರಿ. ನಿಮಗೆ ಮೂರನೇ ಎರಡರಷ್ಟು ಬಹುಮತವಿದೆ. ಸುಗ್ರೀವಾಜ್ಞೆ ತಂದು ಕೊಡಿ. ತೆಲಂಗಾಣ ರಚನೆಗೆ ಕಾಂಗ್ರೆಸ್ ನೀಡಿದ ಭರವಸೆಯನ್ನು ನಾವು ಈಡೇರಿಸಿದ್ದೇವೆ. ನಿಮ್ಮ ಕೈಯಲ್ಲಿ ಅಧಿಕಾರವಿದೆ ಮತ್ತು ಬಹುಮತವೂ ಇದೆ ಎಂದು ಖರ್ಗೆ ಹೇಳಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಭಾಷಣ ವೇಳೆ ಲೈಟ್ ಟವರ್ ಏರಿದ ಮಹಿಳೆ; ಯುವ ಜನತೆ ಬೇಸರಗೊಂಡಿದೆ: ಖರ್ಗೆ ಟೀಕೆ
ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪ್ರತಿಯೊಬ್ಬ ನಾಗರಿಕರ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಮತ್ತು ಪ್ರತಿ ವರ್ಷ 2 ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅವು ಯಾವೂ ಆಗಿಲ್ಲ ದೂರಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.