Mallikarjuna Kharge: ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಲ್ಲಿಕಾರ್ಜುನ ಖರ್ಗೆ

| Updated By: ಅಕ್ಷಯ್​ ಪಲ್ಲಮಜಲು​​

Updated on: Oct 01, 2022 | 11:26 AM

ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಹಿನ್ನೆಲೆ ಖರ್ಗೆ ರಾಜೀನಾಮೆ ನೀಡಿದ್ದಾರೆ.

Mallikarjuna Kharge: ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಲ್ಲಿಕಾರ್ಜುನ ಖರ್ಗೆ
Mallikarjuna Kharge
Follow us on

ದೆಹಲಿ: ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಹಿನ್ನೆಲೆ ಖರ್ಗೆ ರಾಜೀನಾಮೆ ನೀಡಿದ್ದಾರೆ. ನಿನ್ನೆಯಷ್ಟೇ ನಾಮಪತ್ರ ಸಲ್ಲಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅಕ್ಟೋಬರ್​ 17ರಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಈ ಕಾರಣಕ್ಕೆ ಕಾಂಗ್ರೆಸ್ ನಿಯಮದಂತೆ ಒಬ್ಬ ವ್ಯಕ್ತಿ ಒಂದು ಹುದ್ದೆ ಎಂಬ ನಿಯಮ ಇರುವಂತೆ ಇದೀಗ ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಕೆಲವೇ ಗಂಟೆಗಳ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ .

ಅವರು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು ಮತ್ತು ಪಕ್ಷ ಮಾಡಿರುವ ನಿಯಮದ ಪ್ರಕಾರ ಒಬ್ಬ ವ್ಯಕ್ತಿ, ಒಂದು ಹುದ್ದೆ ತತ್ವಕ್ಕೆ ಅನುಗುಣವಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಅವರು ಇದೀಗ ಹೊಸ ನಾಯಕನನ್ನು ನೇಮಿಸಿ ರಾಜ್ಯಸಭಾ ಅಧ್ಯಕ್ಷರಿಗೆ ನಿರ್ಧಾರವನ್ನು ತಿಳಿಸಲಿದ್ದಾರೆ.

ಖರ್ಗೆ ಅವರ ನಂತರ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಯಾರು ಆಯ್ಕೆಯಾಗುತ್ತಾರೆ ಎಂಬುದು ಸದ್ಯದ ಪ್ರಶ್ನೆಯಾಗಿದೆ. ಪಕ್ಷವು ಯಾವುದೇ ಆತುರದಿಂದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಮೂಲಗಳು ಹೇಳಿದೆ, ಮುಂದಿನ ವಿರೋಧ ಪಕ್ಷದ ನಾಯಕ ಸ್ಥಾನ ಉತ್ತರ ಭಾರತದ ನಾಯಕರಿಗೆ ಹೋಗಬಹುದು ಎಂದು ಹೇಳಲಾಗಿದೆ.

ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿದಿರುವ ದಿಗ್ವಿಜಯ ಸಿಂಗ್, ಪ್ರಮೋದ್ ತಿವಾರಿ ಮತ್ತು ಮಹಾರಾಷ್ಟ್ರದ ಮುಕುಲ್ ವಾಸ್ನಿಕ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸ್ಪರ್ಧೆಯಲ್ಲಿರಬಹುದು ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಭಾರತದಿಂದ ಬಂದಿರುವ ಖರ್ಗೆ ಅವರು ಪಕ್ಷದ ಅಧ್ಯಕ್ಷರಾಗಲು ಸಿದ್ಧರಿದ್ದಾರೆ ಮತ್ತು ಪಕ್ಷವು ಈಗಾಗಲೇ ಅಧೀರ್ ರಂಜನ್ ಚೌಧರಿ ಅವರನ್ನು ಲೋಕಸಭೆಯಲ್ಲಿ ನಾಯಕರನ್ನಾಗಿ ಮಾಡಿರುವುದರಿಂದ ಉತ್ತರ ಭಾರತದ ವ್ಯಕ್ತಿಯನ್ನು ಮೇಲ್ಮನೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬಹುದು. ಪ್ರಾದೇಶಿಕ ಸಮೀಕರಣಗಳನ್ನು ಸಮತೋಲನಗೊಳಿಸಲು ಈ ಕ್ರಮವನ್ನು ಕಾಂಗ್ರೆಸ್ ಮಾಡಿದೆ ಎಂದು ಹೇಳಲಾಗಿದೆ.

Published On - 11:18 am, Sat, 1 October 22