ದೆಹಲಿ: ಭಾರತ ಇಂದು 77ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿಕೊಳ್ಳುತ್ತಿದೆ. ಈ ಪ್ರಯುಕ್ತ ಪ್ರಧಾನಿ ಮೋದಿ ಅವರು ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿ ಭಾಷಣ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಸಚಿವರು, ಪ್ರತಿಪಕ್ಷದ ನಾಯಕರುಗಳು, ವಿಶೇಷ ಆಹ್ವಾನಿತ ವ್ಯಕ್ತಿಗಳು ಭಾಗವಹಿಸಿದ್ದಾರೆ. ಆದರೆ ಈ ಕಾರ್ಯಕ್ರಮದಲ್ಲಿ ವಿರೋಧ ಪಕ್ಷ ನಾಯಕ ಮತ್ತು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಗೈರಾಗಿದ್ದರು. ಅವರಿಗಾಗಿ ಮೀಸಲಿಟ್ಟಿದ್ದ ಕುರ್ಚಿ ಖಾಲಿ ಇತ್ತು ಎಂದು ಹೇಳಲಾಗಿದೆ. ಇನ್ನು ಗೈರಾಗಿರುವ ಬಗ್ಗೆ ಸ್ವಷ್ಟನೆ ನೀಡಿದ ಕಾಂಗ್ರೆಸ್, ಭದ್ರತಾ ಕಾರಣಗಳಿಂದ ಅವರು ಕಾರ್ಯಕ್ರಮಕ್ಕೆ ಬಂದಿಲ್ಲ ಎಂದು ಹೇಳಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಆಗಮಿಸುವುದಕ್ಕಿಂತ ಮೊದಲು ತಮ್ಮ ಮನೆ ಮತ್ತು ಪಕ್ಷದ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಆದರೆ ಭದ್ರತಾ ಕಾರಣಗಳಿಂದ ಕೆಂಪು ಕೋಟೆಗೆ ನಡೆದ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಇನ್ನು ಮನೆ ಮತ್ತು ಕಚೇರಿಯಲ್ಲಿ ಕಾರ್ಯಕ್ರಮ ಮುಗಿಸಿ ಕೆಂಪು ಕೋಟೆಯಲ್ಲಿ ಹೋಗುವ ಹೊತ್ತಿಗೆ ಎರಡು ಗಂಟೆಯಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿದೆ.
ಇದನ್ನೂ ಓದಿ: ಕೆಂಪುಕೋಟೆಯಲ್ಲಿ ಭಾಯಿಯೋ ಔರ್ ಬೆಹೆನೋ ಬಿಟ್ಟು ಬೇರೆ ಪದ ಬಳಸಿ ಭಾಷಣ ಆರಂಭಿಸಿದ ಮೋದಿ
ಇನ್ನು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕಣ್ಣಿನ ಸಮಸ್ಯೆಗಳಿಂದಾಗಿ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಮತ್ತು ನಿವಾಸ ಮತ್ತು ಪಕ್ಷದ ಪ್ರಧಾನ ಕಚೇರಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಬೇಕಿತ್ತು ಎಂದು ಹೇಳಿದ್ದಾರೆ. ಕೆಂಪು ಕೋಟೆಯಲ್ಲಿ ಭದ್ರತೆ ತುಂಬಾ ಬಿಗಿಯಾಗಿತ್ತು. ಪ್ರಧಾನಿ ಮೋದಿ ಅವರು ಹೋಗುವ ಮೊದಲು ನಾವು ಹೋಗಬೇಕಿತ್ತು, ನಂತರ ಹೋದರೆ ಯಾರನ್ನೂ ಬಿಡಲಿಲ್ಲ ಎಂದು ಹೇಳಿದರು. ಜತೆಗೆ ಸಮಯದ ಅಭಾವದಿಂದ ಕೆಂಪು ಕೋಟೆಗೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಎರಡನೆಯದಾಗಿ, ನಾನು ಶಿಷ್ಟಾಚಾರದ ಪ್ರಕಾರ ಬೆಳಿಗ್ಗೆ 9.20ಕ್ಕೆ ನನ್ನ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಬೇಕಾಗಿತ್ತು, ನಂತರ ನಾನು ಕಾಂಗ್ರೆಸ್ ಕಚೇರಿಗೆ ಬಂದು ತ್ರಿವರ್ಣ ಧ್ವಜವನ್ನು ಹಾರಿಸಬೇಕಾಗಿತ್ತು ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:59 pm, Tue, 15 August 23