Sign In

By signing in or creating an account, you agree with Associated Broadcasting Company's Terms & Conditions and Privacy Policy.

Mallikarjuna Kharge: ಭಾರತ್ ಜೋಡೋ ಯಾತ್ರೆಗೆ ಭದ್ರತೆ ಕೊಡಿ: ಗೃಹ ಸಚಿವರಿಗೆ ಮಲ್ಲಿಕಾರ್ಜುನ ಖರ್ಗೆ ಮನವಿ

Bharat Jodo Yatra Security Arrangement: ಕಾಶ್ಮೀರದಲ್ಲಿ ಭಾರತ್ ಜೋಡೋ ಪಾದಯಾತ್ರೆ ವೇಳೆ ಪೊಲೀಸ್ ಭದ್ರತಾ ವ್ಯವಸ್ಥೆ ಕುಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶಿಸಿ ಭದ್ರತೆ ವ್ಯವಸ್ಥೆ ಮಾಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ.

Mallikarjuna Kharge: ಭಾರತ್ ಜೋಡೋ ಯಾತ್ರೆಗೆ ಭದ್ರತೆ ಕೊಡಿ: ಗೃಹ ಸಚಿವರಿಗೆ ಮಲ್ಲಿಕಾರ್ಜುನ ಖರ್ಗೆ ಮನವಿ
ಭಾರತ್ ಜೋಡೋ ಯಾತ್ರೆ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Jan 28, 2023 | 1:21 PM

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress leader Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ (Bharat Jodo Yatra) ಅಗತ್ಯ ಭದ್ರತೆ ಒದಗಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಪತ್ರ ಬರೆದಿದ್ದಾರೆ. ದೇಶಾದ್ಯಂತ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆ ಸದ್ಯ ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿದೆ. ನಿನ್ನೆ ಶುಕ್ರವಾರ ಪೊಲೀಸ್ ಭದ್ರತೆ ವೈಫಲ್ಯದಿಂದಾಗಿ ಕಾಂಗ್ರೆಸ್ ಪಕ್ಷ ಈ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿರುವ ಖರ್ಗೆ, ವೈಯಕ್ತಿಕವಾಗಿ ಮಧ್ಯಪ್ರವೇಶಿಸಿ ಭಾರತ್ ಜೋಡೋ ಯಾತ್ರೆಯ ವೇಳೆ ಸಮರ್ಪಕ ಭದ್ರತೆಯ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಮುಂದಿನ ಎರಡು ದಿನಗಳ ಕಾಲ ಭಾರತ್ ಜೋಡೋ ಯಾತ್ರೆಗೆ ಭಾರೀ ಜನರು ಸೇರುವ ನಿರೀಕ್ಷೆ ಇದೆ. ಶ್ರೀನಗರದಲ್ಲಿ ಜನವರಿ 30ರಂದು ನಡೆಯುವ ಕಾರ್ಯಕ್ರಮಕ್ಕೂ ಭಾರೀ ಜನಸ್ತೋಮ ಇರಲಿದೆ. ಹಿರಿಯ ಕಾಂಗ್ರೆಸ್ಸಿಗರು ಮಾತ್ರವಲ್ಲ ಇತರ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ…. ನೀವು ವೈಯಕ್ತಿಕವಾಗಿ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಯಾತ್ರೆ ಸಮಾಪ್ತಿಯಾಗುವವರೆಗೂ ಮತ್ತು ಜನವರಿ 30ರ ಕಾರ್ಯಕ್ರಮ ಮುಗಿಯುವವರೆಗೂ ಅಗತ್ಯ ಭದ್ರತೆ ಒದಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಬೇಕುಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಪತ್ರದಲ್ಲಿ ಕೇಳಿಕೊಂಡಿದ್ದಾರೆ.

ನಿನ್ನೆ ಶುಕ್ರವಾರ ಕಾಶ್ಮೀರ ಕಣಿವೆಯಲ್ಲಿ ಭಾರತ್ ಜೋಡೋ ಪಾದಯಾತ್ರೆ ನಡೆಸುವ ವೇಳೆ ಪೊಲೀಸ್ ಭದ್ರತೆಯಲ್ಲಿ ವ್ಯತ್ಯಯವಾಗಿತ್ತು. ಅದೇ ದಿನ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿ ಈ ವಿಚಾರವನ್ನು ಉಲ್ಲೇಖಿಸಿ ತಾನು ಯಾತ್ರೆ ಈ ದಿನಕ್ಕೆ ಸ್ಥಗಿತಗೊಳಿಸುತ್ತಿರುವುದಾಗಿ ಹೇಳಿದರು.

ಯಾತ್ರೆಯ ವೇಳೆ ಜನರ ಗುಂಪನ್ನು ನಿಯಂತ್ರಿಸಲು ಪೊಲೀಸರೇ ಇರಲಿಲ್ಲ ಎಂಬುದು ರಾಹುಲ್ ಗಾಂಧಿ ಆರೋಪ.

ಇವತ್ತು ಬೆಳಗ್ಗೆ ಭಾರತ್ ಜೋಡೋ ಯಾತ್ರೆಯಲ್ಲಿ ದುರದೃಷ್ಟಕ್ಕೆ ಪೊಲೀಸ್ ಭದ್ರತಾ ವ್ಯವಸ್ಥೆ ಸಂಪೂರ್ಣ ಕುಸಿದುಹೋಗಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರೇ ಇರಲಿಲ್ಲ. ನಾನು ಪಾದಯಾತ್ರೆ ಮುಂದುವರಿಸುವುದರಿಂದ ನನ್ನ ಭದ್ರತಾ ಸಿಬ್ಬಂದಿಯ ಆತಂಕಗೊಂಡಿದ್ದರು. ಆದ್ದರಿಂದ ನನ್ನ ನಡಿಗೆಯನ್ನು ನಿಲ್ಲಿಸಬೇಕಾಯಿತು. ಇತರರು ಪಾದಯಾತ್ರೆ ಮುಂದುವರಿಸಿದರುಎಂದು ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ತಿಳಿಸಿದರು.

ಪಾದಯಾತ್ರೆ ಟೈಮ್​ಲೈನ್

2022 ಸೆಪ್ಟೆಂಬರ್​ನಲ್ಲಿ ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭಗೊಂಡ ಭಾರತ್ ಜೋಡೋ ಯಾತ್ರೆ ಕೇರಳ, ಕರ್ನಾಟಕ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಹರ್ಯಾಣ, ದೆಹಲಿ, ಉತ್ತರಪ್ರದೇಶ, ಪಂಜಾಬ್, ಹಿಮಾಚಲಪ್ರದೇಶ ರಾಜ್ಯಗಳಲ್ಲಿ ಸಂಚರಿಸಿ ಇದೀಗ ಜಮ್ಮು ಕಾಶ್ಮೀರದಲ್ಲಿದೆ. ಜನವರಿ 30ರಂದು ಶ್ರೀನಗರದಲ್ಲಿ ಸಮಾರೋಪ ನಡೆಯಲಿದೆ. ರಾಹುಲ್ ಗಾಂಧಿ ಇಡೀ ಯಾತ್ರೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಒಟ್ಟು 150ಕ್ಕೂ ಹೆಚ್ಚು ದಿನಗಳ ಕಾಲ ನಡೆಯುತ್ತಿರುವ ಮತ್ತು 3,500 ಕಿಮೀಗೂ ಹೆಚ್ಚು ದೂರ ಸಂಚರಿಸಿರುವ ಭಾರತ್ ಜೋಡೋ ಯಾತ್ರೆ ನಾನಾ ಕಾರಣಗಳಿಗೆ ಗಮನ ಸೆಳೆದಿದೆ.

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !