AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಎಂಸಿಯಲ್ಲಿ ಬಂಡಾಯ; ಫಿರ್ಹಾದ್ ಹಕೀಮ್ ಸೇರಿದಂತೆ 8 ಶಾಸಕರನ್ನು ಉಚ್ಛಾಟಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಮತ್ತೊಮ್ಮೆ ಮಹತ್ವದ ಬೆಳವಣಿಗೆ ನಡೆದಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಬಂಡಾಯ ಉಂಟಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರಿ ಕ್ರಮ ಜರುಗಿಸಿದ್ದಾರೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಟಿಎಂಸಿ ಮುಖ್ಯಸ್ಥರ ಹುದ್ದೆಯಿಂದ ತೆಗೆದುಹಾಕಲು ಯತ್ನಿಸಿದ ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪದ ಮೇಲೆ ಹಿರಿಯ ನಾಯಕ ಫಿರ್ಹಾದ್ ಹಕೀಮ್, ಅರೂಪ್ ರಾಯ್ ಮತ್ತು ಇತರ 8 ಬಂಡಾಯ ಶಾಸಕರನ್ನು ಮಮತಾ ಬ್ಯಾನರ್ಜಿ ಪಕ್ಷದಿಂದ ಉಚ್ಛಾಟಿಸಿದ್ದಾರೆ.

ಟಿಎಂಸಿಯಲ್ಲಿ ಬಂಡಾಯ; ಫಿರ್ಹಾದ್ ಹಕೀಮ್ ಸೇರಿದಂತೆ 8 ಶಾಸಕರನ್ನು ಉಚ್ಛಾಟಿಸಿದ ಮಮತಾ ಬ್ಯಾನರ್ಜಿ
Mamata Banerjee Image Credit source: PTI
ಸುಷ್ಮಾ ಚಕ್ರೆ
|

Updated on:Jun 23, 2026 | 7:21 PM

Share

ಕೊಲ್ಕತ್ತಾ, ಜೂನ್ 23: ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಆಂತರಿಕ ಭಿನ್ನಮತ ಈಗ ತಾರಕಕ್ಕೇರಿದೆ. ಪಶ್ಚಿಮ ಬಂಗಾಳದ ಪ್ರತಿಪಕ್ಷ ನಾಯಕ ರಿತಬ್ರತಾ ಬ್ಯಾನರ್ಜಿ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಫಿರ್ಹಾದ್ ಹಕೀಮ್ ಮತ್ತು ಅರೂಪ್ ರಾಯ್ ಸೇರಿದಂತೆ 8 ಹಿರಿಯ ನಾಯಕರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಉಂಟಾಗಿರುವ ಭಿನ್ನಮತ ಈಗ ಮತ್ತೆ ಸ್ಫೋಟಗೊಂಡಿದೆ.

ಮಮತಾ ಬ್ಯಾನರ್ಜಿ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಸಂಚು ರೂಪಿಸಿದ ಆರೋಪದ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಬಣವು ಹಿರಿಯ ನಾಯಕ ಹಾಗೂ ಕೊಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್, ಸಚಿವ ಅರೂಪ್ ರಾಯ್ ಸೇರಿದಂತೆ 8 ಬಂಡಾಯ ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಉಚ್ಛಾಟಿಸಿದೆ. ಟಿಎಂಸಿ ನಾಯಕ ರಿತಬ್ರತಾ ಬ್ಯಾನರ್ಜಿ ಅವರೊಂದಿಗೆ ನಡೆಸಿದ ರಹಸ್ಯ ಸಭೆಯ ಬೆನ್ನಲ್ಲೇ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಸೋಮವಾರ ನಡೆದಿದ್ದ ಈ ರಹಸ್ಯ ಸಭೆಯಲ್ಲಿ ಭಾಗವಹಿಸಿದ್ದ ಹಲವು ನಾಯಕರಿಗೆ ಮೊದಲು ಶೋಕಾಸ್ ನೋಟಿಸ್ ಜಾರಿ ಮಾಡಲಾಗಿತ್ತು. ನಂತರ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ.

ಫಿರ್ಹಾದ್ ಹಕೀಮ್ ಅವರನ್ನು ಟಿಎಂಸಿ ಪಕ್ಷದ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಒಬ್ಬರೆಂದು ಪರಿಗಣಿಸಲಾಗಿತ್ತು. ಕೊಲ್ಕತ್ತಾದ ಬಂದರು ಪ್ರದೇಶದ ಶಾಸಕರಾಗಿರುವ ಹಕೀಮ್, 2018ರಿಂದ ಕೊಲ್ಕತ್ತಾ ಮಹಾನಗರ ಪಾಲಿಕೆಯ ಮೇಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಹಲವು ಪ್ರಮುಖ ಸಚಿವ ಸ್ಥಾನಗಳನ್ನು ನಿಭಾಯಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರೊಂದಿಗೆ ಹಕೀಮ್ ಅವರ ರಾಜಕೀಯ ಸಂಬಂಧವು ದಶಕಗಳಷ್ಟು ಹಳೆಯದಾಗಿದೆ. ಮತ್ತೊಬ್ಬ ಪ್ರಮುಖ ನಾಯಕ ಅರೂಪ್ ರಾಯ್ ಅವರು 2011ರಿಂದ 2026ರವರೆಗೆ ರಾಜ್ಯದ ಸಹಕಾರ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ

ಪಶ್ಚಿಮ ಬಂಗಾಳದ ಪ್ರತಿಪಕ್ಷ ನಾಯಕ ರಿತಬ್ರತಾ ಬ್ಯಾನರ್ಜಿ ನೇತೃತ್ವದ ಬಂಡಾಯ ಬಣವು, ಸೋಮವಾರ ‘ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್ ಸಮಿತಿ’ಗೆ ಹೊಸ ನಾಯಕತ್ವದ ರಚನೆಯನ್ನು ಘೋಷಿಸಿ, ಅರೂಪ್ ರಾಯ್ ಅವರನ್ನು ಅದರ ಅಧ್ಯಕ್ಷರನ್ನಾಗಿ ನೇಮಿಸಿದ ಬೆನ್ನಲ್ಲೇ ಈ ಉಚ್ಛಾಟನೆ ನಡೆದಿದೆ. ಈ ಬಂಡಾಯ ಬಣವು 30 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (NWC) ಸಹ ರಚಿಸಿದೆ.

ಕಟ್ಟುನಿಟ್ಟಿನ ಕ್ರಮ ಕೈಗೊಂಡ ಮಮತಾ ಬಣ:

ಪಕ್ಷದ ಶಿಸ್ತು ಸಮಿತಿಯು ಈ ನಾಯಕರ ವರ್ತನೆಯನ್ನು ಗಂಭೀರ ಶಿಸ್ತು ಉಲ್ಲಂಘನೆ ಮತ್ತು ದ್ರೋಹ ಎಂದು ಪರಿಗಣಿಸಿದೆ. ಪಕ್ಷದ ಆಂತರಿಕ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರಲು ಯತ್ನಿಸಿದ ಕಾರಣಕ್ಕಾಗಿ ಫಿರ್ಹಾದ್ ಹಕೀಮ್ ಮತ್ತು ಅರೂಪ್ ರಾಯ್ ಅವರೊಂದಿಗೆ ಗುರುತಿಸಿಕೊಂಡಿದ್ದ ಇತರ ಶಾಸಕರನ್ನು ಪಕ್ಷದಿಂದ ಹೊರಹಾಕಲು ಮಮತಾ ಬ್ಯಾನರ್ಜಿ ಆದೇಶಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ, ಅಭಿಷೇಕ್ ಬ್ಯಾನರ್ಜಿ ಅಮಾನತು, ಅರೂಪ್ ರಾಯ್ ಹೊಸ ಮುಖ್ಯಸ್ಥ

ಟಿಎಂಸಿ ಇತಿಹಾಸದಲ್ಲೇ ಅತಿ ದೊಡ್ಡ ಬಿಕ್ಕಟ್ಟು:

ಫಿರ್ಹಾದ್ ಹಕೀಮ್ ಅವರು ಮಮತಾ ಬ್ಯಾನರ್ಜಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಾಯಕರಾಗಿದ್ದರು. ಕೊಲ್ಕತ್ತಾದ ಮೇಯರ್ ಆಗಿ ಮತ್ತು ಸಚಿವರಾಗಿ ಅವರು ಪಕ್ಷದಲ್ಲಿ ಭಾರಿ ಹಿಡಿತ ಹೊಂದಿದ್ದರು. ಅಂತಹ ಹಿರಿಯ ನಾಯಕರೇ ಈಗ ಬಂಡಾಯ ಎದ್ದಿರುವುದು ಮತ್ತು ಅವರನ್ನು ಪಕ್ಷದಿಂದ ಉಚ್ಛಾಟಿಸಿರುವುದು ತೃಣಮೂಲ ಕಾಂಗ್ರೆಸ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ರಾಜಕೀಯ ಬಿಕ್ಕಟ್ಟನ್ನು ಸೃಷ್ಟಿಸಿದೆ.

ಮುಂದಿನ ರಾಜಕೀಯ ನಡೆ ಏನು?:

ಈ ಉಚ್ಛಾಟನೆಯ ಬೆನ್ನಲ್ಲೇ ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಯಾಗಿದೆ. ಉಚ್ಛಾಟಿತ ನಾಯಕರು ಮುಂದಿನ ದಿನಗಳಲ್ಲಿ ಹೊಸ ಬಣವನ್ನು ರಚಿಸುತ್ತಾರಾ ಅಥವಾ ಪ್ರತಿಪಕ್ಷಗಳೊಂದಿಗೆ ಕೈಜೋಡಿಸುತ್ತಾರಾ ಎಂಬುದು ಕುತೂಹಲ ಮೂಡಿಸಿದೆ. ಮತ್ತೊಂದೆಡೆ, ಮಮತಾ ಬ್ಯಾನರ್ಜಿ ಅವರು ತಮ್ಮ ಸರ್ಕಾರ ಮತ್ತು ಪಕ್ಷದ ಮೇಲಿನ ಹಿಡಿತವನ್ನು ಬಿಗಿಗೊಳಿಸಲು ಶಾಸಕರ ತುರ್ತು ಸಭೆಯನ್ನು ಕರೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:39 pm, Tue, 23 June 26

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ