ದೆಹಲಿ ಭೇಟಿಗೆ ಮುನ್ನ ತೃಣಮೂಲ ಕಾಂಗ್ರೆಸ್  ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಮಮತಾ ಬ್ಯಾನರ್ಜಿ ನೇಮಕ

Mamata Banerjee: ಸಂಸದ ಸುದೀಪ್ ಬಂಡೋಪಾಧ್ಯಾಯರಿಂದ ಅಧಿಕಾರ ವಹಿಸಿಕೊಂಡ ಮಮತಾ ಬ್ಯಾನರ್ಜಿ, ಸಂಸತ್ತಿಗೆ ಆಯ್ಕೆಯಾಗದೆ ತಮ್ಮ ಪಕ್ಷದ ಸಂಸದೀಯ ತುಕಡಿಯ ನೇತೃತ್ವ ವಹಿಸಿರುವ ಕೆಲವೇ ಕೆಲವು ರಾಜಕೀಯ ನಾಯಕರಲ್ಲಿ ಒಬ್ಬರಾಗಿದ್ದಾರೆ

ದೆಹಲಿ ಭೇಟಿಗೆ ಮುನ್ನ ತೃಣಮೂಲ ಕಾಂಗ್ರೆಸ್  ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಮಮತಾ ಬ್ಯಾನರ್ಜಿ ನೇಮಕ
ಮಮತಾ ಬ್ಯಾನರ್ಜಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 23, 2021 | 7:39 PM

ದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೃಣಮೂಲ ಕಾಂಗ್ರೆಸ್ ನ ಸಂಸದೀಯ ಪಕ್ಷದ ಹೊಸ ಅಧ್ಯಕ್ಷರಾಗಲಿದ್ದಾರೆ ಎಂದು ಸಂಸದ ಡೆರೆಕ್ ಒಬ್ರಿಯೆನ್ ಶುಕ್ರವಾರ ಹೇಳಿದ್ದಾರೆ. ಮುಂದಿನ ವಾರ ನವದೆಹಲಿ ಭೇಟಿಗೆ ಮುಂಚಿತವಾಗಿ ರಾಷ್ಟ್ರೀಯ ರಾಜಕಾರಣಕ್ಕೆ ಧುಮುಕಲು ಇದು ಅಡಿಪಾಯ ಆಗುವ ನಿರೀಕ್ಷೆ ಇದೆ. ಸಂಸದ ಸುದೀಪ್ ಬಂಡೋಪಾಧ್ಯಾಯರಿಂದ ಅಧಿಕಾರ ವಹಿಸಿಕೊಂಡ ಮಮತಾ ಬ್ಯಾನರ್ಜಿ, ಸಂಸತ್ತಿಗೆ ಆಯ್ಕೆಯಾಗದೆ ತಮ್ಮ ಪಕ್ಷದ ಸಂಸದೀಯ ತುಕಡಿಯ ನೇತೃತ್ವ ವಹಿಸಿರುವ ಕೆಲವೇ ಕೆಲವು ರಾಜಕೀಯ ನಾಯಕರಲ್ಲಿ ಒಬ್ಬರಾಗಿದ್ದಾರೆ. 1998 ರಲ್ಲಿ ಸೋನಿಯಾ ಗಾಂಧಿ ಅವರು ಪಕ್ಷದ ಮುಖ್ಯಸ್ಥರಾದಾಗ ಕಾಂಗ್ರೆಸ್ ಸಂಸದೀಯ ಪಕ್ಷವನ್ನು ಮುನ್ನಡೆಸಿದ್ದರು.

“ಮಮತಾ ಬ್ಯಾನರ್ಜಿ ನಮ್ಮ ತೃಣಮೂಲ ಸಂಸದೀಯ ಪಕ್ಷದ ಅಧ್ಯಕ್ಷರಾಗಲಿದ್ದಾರೆ.. ಮಮತಾ ಬ್ಯಾನರ್ಜಿ ಅವರು ಏಳು ಬಾರಿ ಸಂಸದರಾಗಿದ್ದಾರೆ. ಅವರು ಈಗಾಗಲೇ ಸಂಸದೀಯ ಪಕ್ಷಕ್ಕೆ ಮಾರ್ಗದರ್ಶನ ನೀಡುತ್ತಿದ್ದರು. ಇದು ಕಾರ್ಯತಂತ್ರದ ನಿರ್ಧಾರ” ಎಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಓಬ್ರಿಯೆನ್ ಹೇಳಿದರು.

ಪೆಗಾಸಸ್ ಕಣ್ಗಾವಲು ಹಗರಣದ ಬಗ್ಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರ ಪ್ರತಿಕ್ರಿಯೆಯನ್ನು ಹರಿದು ಹಾಕಿದ ತೃಣಮೂಲ ಸಂಸದ ಡಾ.ಸಂತನು ಸೇನ್ ವಿರುದ್ಧ ಕ್ರಮ ಕೈಗೊಂಡಿರುವ ಸಂಸತ್ತಿನ ಅಧಿವೇಶನದ ನಡುವೆಯೇ ಈ ಪ್ರಕಟಣೆ ಬಂದಿದೆ.

ಅಡೆತಡೆಗಳು ಮತ್ತು ವಿರೋಧ ಪಕ್ಷದ ಗದ್ದಲಗಳ ಕುರಿತು ಮಾತನಾಡಿದ ತೃಣಮೂಲ ನಾಯಕ, “ನಾವು ಸಂಸತ್ತು ನಡೆಸಬೇಕೆಂದು ಬಯಸುತ್ತೇವೆ. ಎರಡು ಅಥವಾ ಮೂರು ವಿಷಯಗಳ ಬಗ್ಗೆ ಚರ್ಚಿಸಬೇಕೆಂದು ನಾವು ಬಯಸುತ್ತೇವೆ. ಪೆಗಾಸಸ್ ಸಮಸ್ಯೆಯನ್ನು ಚರ್ಚಿಸಬೇಕಾಗಿದೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ನಾವು ಬಯಸುತ್ತೇವೆ” ಎಂದು ಹೇಳಿದರು.

ಡಾ. ಸೇನ್ ಅವರನ್ನು ಅಮಾನತುಗೊಳಿಸುವುದರಿಂದ ಪಕ್ಷವು “ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ಅವರು ಹೇಳಿದರು, “ಜನರು ಅವರನ್ನು (ಬಿಜೆಪಿ) ಅಮಾನತುಗೊಳಿಸುತ್ತಾರೆ. ನಮ್ಮ ಸಹೋದ್ಯೋಗಿ ಮೊಹುವಾ (ಮೊಯಿತ್ರಾ) ಹಕ್ಕುಚ್ಯುತಿ (ಅಮಾನತು ವಿರುದ್ಧ) ಮಂಡನೆ ಮಾಡಿದ್ದಾರೆ ” ಎಂದು ಹೇಳಿದರು.

ರಾಷ್ಟ್ರೀಯ ರಾಜಕಾರಣದಲ್ಲಿ ವ್ಯಾಪಕವಾದ ಪಾತ್ರವನ್ನು ವಹಿಸಿಕೊಳ್ಳುವ ಮತ್ತು ಬಿಜೆಪಿ ವಿರುದ್ಧ ದೇಶದ ಭಿನ್ನಾಭಿಪ್ರಾಯವನ್ನು ಒಗ್ಗೂಡಿಸುವ ಪ್ರಯತ್ನ ಇದು ಎಂದು ಹೇಳಲಾಗುತ್ತಿದೆ. ಸೋಮವಾರದಿಂದ ಪ್ರಾರಂಭವಾಗುವ ಮಮತಾ ಬ್ಯಾನರ್ಜಿ ದೆಹಲಿಗೆ ಪ್ರವಾಸವು ಸಾಕಷ್ಟು ಸಂಚಲನವನ್ನು ಸೃಷ್ಟಿಸಿದೆ.

ಭೇಟಿಯ ಪೂರ್ವಸಿದ್ಧತೆಗಾಗಿ ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರು ದೆಹಲಿಯಲ್ಲಿದ್ದಾರೆ. ಬಿಜೆಪಿ ವಿರುದ್ಧ ಬಂಗಾಳ ಚುನಾವಣೆಯಲ್ಲಿ ಭಾರಿ ಜಯಗಳಿಸಿದ ನಂತರ ಮಮತಾ ಅವರ ಮೊದಲ ಪ್ರವಾಸ ಇದಾಗಿದೆ. ಅವರು ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಸೋನಿಯಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ಇದನ್ನೂ ಓದಿ: Pegasus row ಭಾರತವನ್ನು ಕಣ್ಗಾವಲು ರಾಜ್ಯವನ್ನಾಗಿ ಮಾಡಲು ಬಿಜೆಪಿ ಬಯಸಿದೆ: ಮಮತಾ ಬ್ಯಾನರ್ಜಿ

ಇದನ್ನೂ ಓದಿ:  Monsoon Session 2021: ಕೇಂದ್ರ ಸಚಿವರ ಭಾಷಣದ ಪ್ರತಿಯನ್ನು ಹರಿದುಹಾಕಿದ್ದ ಟಿಎಂಸಿ ಸಂಸದ ರಾಜ್ಯಸಭೆಯಿಂದ ಅಮಾನತು

(Mamata Banerjee Named chairperson of the parliamentary party of the Trinamool Congress)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್