ಪ್ರಧಾನಿ ಮೋದಿ ಧ್ಯಾನ ಸುದ್ದಿ ಟಿವಿಯಲ್ಲಿ ಪ್ರಸಾರವಾದ್ರೆ ಚುನಾವಣಾ ಆಯೋಗಕ್ಕೆ ದೂರು ಕೊಡ್ತೀನಿ ಎಂದ ಮಮತಾ

ಪ್ರಧಾನಿ ನರೇಂದ್ರ ಮೋದಿ ಕನ್ಯಾಕುಮಾರಿಗೆ ತೆರಳಿ ಎರಡು ದಿನಗಳ ಕಾಲ ಧ್ಯಾನ ಮಾಡಲಿದ್ದು, ಒಂದೊಮ್ಮೆ ಆ ಸುದ್ದಿ ಟಿವಿಯಲ್ಲಿ ಪ್ರಸಾರವಾದರೆ ನಾನು ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪ್ರಧಾನಿ ಮೋದಿ ಧ್ಯಾನ ಸುದ್ದಿ ಟಿವಿಯಲ್ಲಿ ಪ್ರಸಾರವಾದ್ರೆ ಚುನಾವಣಾ ಆಯೋಗಕ್ಕೆ ದೂರು ಕೊಡ್ತೀನಿ ಎಂದ ಮಮತಾ
ಮಮತಾ ಬ್ಯಾನರ್ಜಿ

Updated on: May 30, 2024 | 8:58 AM

ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಧ್ಯಾನವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಿದರೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಎಚ್ಚರಿಕೆ ನೀಡಿದ್ದಾರೆ.

ಸ್ಪಷ್ಟವಾಗಿ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮೇ 30 ರಂದು ಲೋಕಸಭಾ ಚುನಾವಣಾ ಪ್ರಚಾರ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿ ಕನ್ಯಾಕುಮಾರಿಗೆ ಭೇಟಿ ನೀಡಲಿದ್ದಾರೆ.

ಸ್ವಾಮಿ ವಿವೇಕಾನಂದರಿಗೆ ಗೌರವ ಸಲ್ಲಿಸಲು ನಿರ್ಮಿಸಲಾದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಧ್ಯಾನ ಮಾಡಲಿದ್ದಾರೆ.
ಪ್ರಧಾನಿ ಮೋದಿ ಧ್ಯಾನ ಮಾಡಬಹುದು ಆದರೆ ದೂರದರ್ಶನದಲ್ಲಿ ಪ್ರಸಾರ ಮಾಡಲು ಸಾಧ್ಯವಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇದು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಲಿದ್ದು, ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದಿದ್ದಾರೆ.

ಮತ್ತಷ್ಟು ಓದಿ: Mamata Banerjee: ಚುನಾವಣೆ ಪ್ರಚಾರದ ವೇಳೆ ಸಿಎಂ ಮಮತಾ ಬ್ಯಾನರ್ಜಿ ಡ್ಯಾನ್ಸ್; ವಿಡಿಯೋ ವೈರಲ್

ಧ್ಯಾನ ಮಾಡುವಾಗ ಕ್ಯಾಮರಾಗಳ ಅಗತ್ಯವಿದೆಯೇ ಎಂಬ ಪ್ರಶ್ನೆಯನ್ನು ಅವರು ಕೇಳಿದರು. 2019ರಲ್ಲೂ ಚುನಾವಣಾ ಪ್ರಚಾರದ ಬಳಿಕ ಪ್ರಧಾನಿ ಕೇದಾರನಾಥದ ಧ್ಯಾನ ಗುಹೆಗೆ ತೆರಳಿದ್ದರು ಎಂದು ಹೇಳಿದರು.

ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ನೀಡಲಿದೆ ಎಂಬ ಪ್ರಧಾನಿ ಹೇಳಿಕೆಯನ್ನು ಟಿಎಂಸಿ ಮುಖ್ಯಸ್ಥೆ ತಿರಸ್ಕರಿಸಿದ್ದಾರೆ . ಈ ಬಾರಿ ಬಿಜೆಪಿ ಅಧಿಕಾರಕ್ಕೆ ಮರಳಿದರೆ ದೇಶದಲ್ಲಿ ಯಾವುದೇ ರಾಜಕೀಯ ಪಕ್ಷ, ಚುನಾವಣೆಗಳು, ಸ್ವಾತಂತ್ರ್ಯ ಧರ್ಮ, ಮಾನವೀಯತೆ ಮತ್ತು ಸಂಸ್ಕೃತಿ ಅಸ್ತಿತ್ವದಲ್ಲಿ ಇರುವುದಿಲ್ಲ ಎಂದು ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ