ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್​​ಗೆ ಅಭಿನಂದನೆ ಸಲ್ಲಿಸುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚಂದ್ರಯಾನ ಯಶಸ್ವಿ ಆಗುವ ಮುನ್ನ ಕಾರ್ಯಕ್ರಮವೊಂದರಲ್ಲಿ ಚಂದ್ರಯಾನದ ಬಗ್ಗೆ ಗೊಂದಲದ ಮಾತುಗಳನ್ನು ಹಾಡಿದ್ದಾರೆ. ಗಗನಯಾತ್ರಿ ರಾಕೇಶ್ ಶರ್ಮಾ ಬದಲು ಬಾಲಿವುಡ್ ನಟ-ಚಿತ್ರ ನಿರ್ಮಾಪಕ ರಾಕೇಶ್ ರೋಷನ್ ಎಂದು ಹೇಳಿದ್ದಾರೆ.

ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್​​ಗೆ ಅಭಿನಂದನೆ ಸಲ್ಲಿಸುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Follow us
|

Updated on: Aug 24, 2023 | 12:14 PM

ಭಾರತವು ಬುಧವಾರದಂದು (ಆ.23) ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 (Chandrayaan-3) ಮಿಷನ್ ಲ್ಯಾಂಡಿಂಗ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಇಸ್ರೋದ ಈ ಸಾಧನೆಗೆ ದೇಶದ ಅನೇಕ ಗಣ್ಯರು ಮತ್ತು ನಟ-ನಟಿಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಆದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಚಂದ್ರಯಾನ ಯಶಸ್ವಿ ಆಗುವ ಮುನ್ನ ಕಾರ್ಯಕ್ರಮವೊಂದರಲ್ಲಿ ಚಂದ್ರಯಾನದ ಬಗ್ಗೆ ಗೊಂದಲದ ಮಾತುಗಳನ್ನು ಹಾಡಿದ್ದಾರೆ. ಗಗನಯಾತ್ರಿ ರಾಕೇಶ್ ಶರ್ಮಾ ಬದಲು ಬಾಲಿವುಡ್ ನಟ-ಚಿತ್ರ ನಿರ್ಮಾಪಕ ರಾಕೇಶ್ ರೋಷನ್ ಎಂದು ಹೇಳಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗುತ್ತಿದೆ.

ವೈರಲ್​​ ವಿಡಿಯೋದಲ್ಲಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಜನರ ಪರವಾಗಿ, ನಾನು ಇಸ್ರೋಗೆ ಚಂದ್ರಯಾನ ಯಶಸ್ವಿಗೂ ಮುನ್ನ ಅಭಿನಂದನೆಗಳನ್ನು ತಿಳಿಸುತ್ತೇನೆ. ಈ ಸಾಧನೆಯ ಕ್ರೆಡಿಟ್ ವಿಜ್ಞಾನಿಗಳು ಮತ್ತು ದೇಶಕ್ಕೆ ಸಲ್ಲಬೇಕು. ರಾಕೇಶ್ ರೋಷನ್ ಚಂದ್ರನ ಮೇಲೆ ಇಳಿದಾಗ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜತೆಗೆ ಸಂವಾದ ನಡೆಸಿದ್ದಾರೆ ಎಂದು ಹೇಳುವ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ. ಇಲ್ಲಿ ಮಮತಾ ಬ್ಯಾನರ್ಜಿ ಅವರು ರಾಕೇಶ್ ಶರ್ಮಾ ಎಂದು ಹೇಳುವ ಬದಲು ರಾಕೇಶ್ ರೋಷನ್ ಎಂದು ಹೇಳಿದ್ದಾರೆ.

ರಾಕೇಶ್ ಶರ್ಮಾ, ಭಾರತೀಯ ವಾಯುಪಡೆಯ ಪೈಲಟ್, 1984ರಲ್ಲಿ ಸೋವಿಯತ್ ಒಕ್ಕೂಟದ ಸೋಯುಜ್ T-11 ಭಾಗವಾಗಿ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಮೊದಲ ಭಾರತೀಯರಾಗಿದ್ದರು. ದೂರದರ್ಶನದ ನೇರ ಪ್ರಸಾರದ ಮೂಲಕ ಗಗನಯಾತ್ರಿಗಳು ಬಾಹ್ಯಾಕಾಶದಿಂದ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಸಂವಹನ ನಡೆದಿದೆ; ಚಂದ್ರನಲ್ಲಿ ಇಳಿದ ನಂತರ ಮೊದಲ ಚಿತ್ರ ಹಂಚಿಕೊಂಡ ವಿಕ್ರಮ್ ಲ್ಯಾಂಡರ್

ಇಂದಿರಾ ಗಾಂಧಿಯವರು ರಾಕೇಶ್​​ ಶರ್ಮಾ ಅವರ ಜತೆಗೆ ಮಾತನಾಡಿದ್ದು ಹೀಗೆ “ಉಪರ್ ಸೆ ಭಾರತ್ ಕೈಸಾ ದಿಖ್ತಾ ಹೈ ಆಪ್ಕೋ?” (ಬಾಹ್ಯಾಕಾಶದಿಂದ ಭಾರತವು ಹೇಗೆ ಕಾಣುತ್ತದೆ?) ಎಂದು ಕೇಳುತ್ತಾರೆ. ಅದಕ್ಕೆ ಉತ್ತರಿಸಿದ ರಾಕೇಶ್​​ ಶರ್ಮಾ ಅವರು ಕವಿ ಇಕ್ಬಾಲ್ ಅವರನ್ನು ಉಲ್ಲೇಖಿಸಿ, “ಸಾರೆ ಜಹಾನ್ ಸೆ ಅಚ್ಚಾ” (ಇಡೀ ಪ್ರಪಂಚಕ್ಕಿಂತ ಉತ್ತಮ) ಎಂದು ಹೇಳುವ ಮೂಲಕ ಪ್ರತಿಕ್ರಿಯಿಸಿದರು. ಆದರೆ ಈ ಘಟನೆಯನ್ನು ಹೇಳುವ ಭರದಲ್ಲಿ ಮಮತಾ ಬ್ಯಾನರ್ಜಿ ಅವರು ರಾಕೇಶ್​​ ಶರ್ಮಾ ಹೇಳುವ ಬದಲು ರಾಕೇಶ್​​ ರೋಷನ್ ಎಂದು ಹೇಳಿ, ಎಲ್ಲ ಕಡೆ ಟ್ರೋಲ್​​ ಆಗಿದ್ದಾರೆ.

ಇನ್ನು ಚಂದ್ರಯಾನ-3 ಸಂಬಂಧಿತ ಗೂಫ್-ಅಪ್‌ನಲ್ಲಿ ಮಮತಾ ಬ್ಯಾನರ್ಜಿ ಮಾತ್ರವಲ್ಲ, ರಾಜಸ್ಥಾನದ ಸಚಿವರೊಬ್ಬರು ಕೂಡ ವೈರಲ್​​ ಆಗುತ್ತಿದ್ದಾರೆ. ಚಂದ್ರಯಾನ -3 ಮಿಷನ್‌ನ ಪ್ರಯಾಣಿಕರಿಗೆ ಅಭಿನಂದನೆ ಎಂದು ಹೇಳಿದ್ದಾರೆ. ಆದರೆ ಈ ಚಂದ್ರಯಾನ -3 ಮಾನವರಹಿತ ಮಿಷನ್ ಆಗಿರುವ ಕಾರಣ, ಮಾತಿನ ಭರದಲ್ಲಿ ಈ ಎಡವಟ್ಟು ಮಾಡಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ.

ಬುಧವಾರದಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್​​ ಆಗಿರುವ ಪ್ರಗ್ಯಾನ್ ರೋವರ್ ಮುಂದಿನ 14 ದಿನಗಳವರೆಗೆ ಚಂದ್ರನ ಮೇಲ್ಮೈಯನ್ನು ಅನ್ವೇಷಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?