ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಣೆಗೆ ಪೆಟ್ಟಾಗಿರುವ ಕಾರಣ ಆಕೆ ಸದ್ಯ ತೀವ್ರ ನಿಗಾದಲ್ಲಿದ್ದಾರೆ. ರಾಜ್ಯ ಸರ್ಕಾರ ನಡೆಸುತ್ತಿರುವ ಎಸ್‌ಎಸ್‌ಕೆಎಂ ಆಸ್ಪತ್ರೆಯ ನಿರ್ದೇಶಕ ಡಾ.ಮಣಿಮೋಯ್ ಬಂದೋಪಾಧ್ಯಾಯ ಈ ಮಾಹಿತಿ ನೀಡಿದ್ದಾರೆ. ಮನೆಯಲ್ಲಿ ಬಿದ್ದಿದ್ದರಿಂದ ಮುಖ್ಯಮಂತ್ರಿ ಬ್ಯಾನರ್ಜಿ ಅವರ ಹಣೆಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ವೈದ್ಯರು ಮೂರು ಹೊಲಿಗೆಗಳನ್ನು ಹಾಕಿ ಚಿಕಿತ್ಸೆ ನೀಡಿದ್ದಾರೆ.
ಗಾಯಕ್ಕೆ ಚಿಕಿತ್ಸೆ ನೀಡಿದ ನಂತರ ಮಮತಾ ಬ್ಯಾನರ್ಜಿ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ವೈದ್ಯರು ಅವರ ಹಣೆಗೆ ಮೂರು ಹೊಲಿಗೆ ಹಾಕಿದ್ದು, ಮೂಗಿಗೆ ಒಂದು ಹೊಲಿಗೆ ಹಾಕಲಾಗಿದ್ದು, ಅಲ್ಲಿಂದಲೂ ಕೂಡ ರಕ್ತ ಬರುತ್ತಿತ್ತು ಎಂದು ಆಸ್ಪತ್ರೆಯ ನಿರ್ದೇಶಕರು ತಿಳಿಸಿದ್ದಾರೆ.
ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಸೇರಿದಂತೆ ಹಲವು ನಾಯಕರು ಹಾರೈಸಿದ್ದಾರೆ.ಸಿಎಂ ಮಮತಾ ಬ್ಯಾನರ್ಜಿ ಶೀಘ್ರ ಗುಣಮುಖರಾಗಲಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾರೈಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ನಾನು ಉತ್ತಮ ಆರೋಗ್ಯವನ್ನು ಬಯಸುತ್ತೇನೆ ಎಂದು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮತ್ತಷ್ಟು ಓದಿ: Mamata banerjee: ಮಮತಾ ಬ್ಯಾನರ್ಜಿ ಹಣೆಗೆ ಪೆಟ್ಟು; ಫೋಟೊ ಟ್ವೀಟ್ ಮಾಡಿದ ಟಿಎಂಸಿ
ಪಕ್ಷದ ಮುಖ್ಯಸ್ಥರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹರೀಶ್ ಚಟರ್ಜಿ ಸ್ಟ್ರೀಟ್ ನಿವಾಸಕ್ಕೆ ಹಿಂತಿರುಗಿದಾಗ ಅಲ್ಲಿ ಜಾರಿಬಿದ್ದರು ಎಂದು ಟಿಎಂಸಿ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಟಿಎಂಸಿ ಮುಖ್ಯಸ್ಥೆ ಮಮತಾ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಟಿಡಿಪಿ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಸಿಎಂ ಎನ್ ಚಂದ್ರಬಾಬು ನಾಯ್ಡು ಕೂಡ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ